ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಿ
Team Udayavani, Aug 29, 2020, 4:19 PM IST
ಬಂಗಾರಪೇಟೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಅತ್ಯಮೂಲ್ಯ ಆಸ್ತಿಯನ್ನಾಗಿ ಪರಿವರ್ತನೆ ಮಾಡುವ ಜವಾಬ್ದಾರಿಯು ಪೋಷಕರು ಹಾಗೂ ಶಿಕ್ಷಕರ ಮೇಲಿದೆ ಎಂದು ತಾಲೂಕಿನ ಎಂ. ಹೊಸಹಳ್ಳಿ ಶಿರಡಿ ಸಾುಬಾಬಾ ಮಂದಿರ ಟ್ರಸ್ಟ್‌ನ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ಬೂದಿಕೋಟೆ ಹೋಬಳಿಯ ಎಂ.ಹೊಸಹಳ್ಳಿ ಗ್ರಾಮದಲ್ಲಿ ಟ್ರಸ್ಟ್‌ನಿಂದ ಇತ್ತೀಚಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ಗುಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾನವತಾ ಗುಣಗಳನ್ನು ಬೆಳೆಸಿಕೊಳ್ಳುವ ಪ್ರಾಥಮಿಕ ಶಿಕ್ಷಣ ಹಂತದಲ್ಲೆ ಮಕ್ಕಳನ್ನು ಸರ್ಕಾರಿ ಶಾಲೆ, ಕಾನ್ವೆಂಟ್, ಆಂಗ್ಲ ಮಾಧ್ಯಮ ಸೆಂಟ್ರಲ್ ಸಿಲಬಸ್, ಮೊದಲಾದವುಗಳಲ್ಲಿ ವಿಂಗಡಿಸಿ ಮಕ್ಕಳ ಮನಸ್ಸಿನಲ್ಲಿ ಭೇದಭಾವಎನ್ನುವ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾಜದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬಂಡವಾಳ ಹಾಕಿ ಆದಾಯ ಮಾಡುವ ಶಿಕ್ಷಣ ಸಂಸ್ಥೆಗಳೇ ಹೆಚ್ಚಿವೆ. ವಿದ್ಯಾದಾನ ಮಾರಾಟದ ಸರಕು ಆಗಿದೆ. ಮುಂದಿನ ದಿನಗಳಲ್ಲಿ ಬಡವರ ಮಕ್ಕಳ ವಿದ್ಯಾಭ್ಯಾಸ ಇನ್ನಷ್ಟು ತುಟ್ಟಿಯಾಗಲಿದೆ ಎಂದು ಆತಂಕವ್ಯಕ್ತಪಡಿಸಿದರಲ್ಲದೆ, ಆಧುನಿಕ ಸಂದರ್ಭದಲ್ಲಿ ಬದಲಾಗುತ್ತಿರುವ ಕಾಲಮಾನದಲ್ಲಿಶಿಕ್ಷಕರ ಧೋರಣೆ ಬದಲಾಗಬೇಕು, ಆಗ ಮಾತ್ರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿದೆ ಎಂದರು.
ಟ್ರಸ್ಟ್‌ನ ಕಾರ್ಯದರ್ಶಿ ರಾಮಕೃಷ್ಣಪ್ಪ, ಸುಜಾತ, ಸಿಆರ್‌ಪಿ ಭರತ್ ರಾಜ್ ಮುಂತಾದವರು ಹಾಜರಿದ್ದರು.
ಎಸ್ಸೆಸ್ಸೆಲ್ಸಿಯಲ್ಲಿಪ್ರಥಮ ಸ್ಥಾನಕ್ಕೇರಲಿ : ಮುಳಬಾಗಿಲು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 2019- 20ನೇ ಸಾಲಿನಲ್ಲಿ ಮುಳಬಾಗಿಲು ತಾಲೂಕು ಶೇ.92 ಅಂಕಗಳಿಸಿದ್ದು, ಮುಂದಿನ ಸಾಲಿನಲ್ಲಿ ಶೇ.100 ತರಲು ಎಲ್ಲಾ ಶಿಕ್ಷಕರು ಈಗಿನಿಂದಲೇ ಕಾರ್ಯೋನ್ಮುಖರಾಗಬೇಕೆಂದು ಬಿಇಒ ಗಿರಿಜೇಶ್ವರಿದೇವಿ ತಿಳಿಸಿದರು.
ಜಿಪಂ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘ ನಗರದ ಬಾಲಕಿಯರ ಪ್ರೌಢಶಾಲೆಯಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರಿಗೆ ಏರ್ಪಡಿಸಿದ್ದ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಈ ವರ್ಷ ಕೊರೊನಾದಿಂದ ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿ ಗಳು ಸಾಕಷ್ಟು ತೊಂದರೆ ಎದುರಿಸುವಂ ತಾಗಿತ್ತು. ಜಿಲ್ಲೆಯಲ್ಲಿ 3ನೇ ಸ್ಥಾನ ಪಡೆದುಕೊಂಡಿರುವುದಕ್ಕೆ ಪೂರಕವಾಗಿ ಶ್ರಮಿಸಿದ ಶಿಕ್ಷಕರು, ಅಧಿಕಾರಿಗಳು, ಪೋಷಕರು, ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ, ರೆಡ್ ಕ್ರಾಸ್ ಗೆ ಧನ್ಯವಾದ ತಿಳಿಸಿದರು. ಇಸಿಒಗಳಾದ ಸಿ.ಸೊಣ್ಣಪ್ಪ, ಎಂ.ವಿ. ಜನಾರ್ದನ್, ಕಾರ್ತಿಕ್, ಸಂಪನ್ಮೂಲ ವ್ಯಕ್ತಿಗಳಾದ ಬಿ.ಜಿ. ರಾಮಚಂದ್ರ ಭಟ್, ಕೆ.ಟಿ.ಪ್ರಸನ್ನಮೂರ್ತಿ, ಶ್ರೀನಿವಾಸ್‌ಪ್ರ ಸಾದ್, ಆಂಟೋನಿ ಮೇರಿ ರಾಜ್, ಉಪ ಪ್ರಾಂಶುಪಾಲ ಬಿ.ಚಲಪತಿ, ಮುಖ್ಯ ಶಿಕ್ಷಕ ಶ್ರೀಧರಬಾಬು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.