Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ
Team Udayavani, Mar 20, 2024, 2:29 PM IST
ಕೋಲಾರ: ಶಾಲೆಯ ಸಮಯದಲ್ಲಿ ಗೋಡೆ ಕಲ್ಲು ಒಡೆಯುವ ಹಾಗೂ ಮಣ್ಣು ಎತ್ತುವ ಕೆಲಸಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡಿರುವ ಘಟನೆ ನಗರದ ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎಂ ರಾಧಮ್ಮ ಇವರನ್ನು ಕೂಡಲೇ ಸೇವೆಯಿಂದ ವಜಗೊಳಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ರೈತಸಂಘದ ಯುವ ಘಟಕ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಒತ್ತಾಯಿಸಿದ್ದಾರೆ.
ಕೋಲಾರ ನಗರದ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪಕ್ಕದ ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೈಯಿಂದ ಶಾಲೆಯ ಸಮಯದಲ್ಲಿ ಗೋಡೆ ಒಡೆಸುವುದು, ಕಲ್ಲು ಒಡೆಸುವುದು, ಮಣ್ಣು ಎತ್ತುವ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಉಪ ಪ್ರಾಂಶುಪಾಲರ ಕ್ರಮವನ್ನು ಖಂಡಿಸಿದ್ದಾರೆ.
ಉಪ ಪ್ರಾಂಶುಪಾಲರು ಕೆಲಸ ಮಾಡಿಲ್ಲವೆಂದರೆ ವಿದ್ಯಾರ್ಥಿಗಳನ್ನು ಥಳಿಸುತ್ತಾರೆ. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಒಳ್ಳೆಯ ಬೋಧನೆ ಮಾಡಿ, ಕಠಿಣ ಪರಿಶ್ರಮದಿಂದ ಅತಿ ಹೆಚ್ಚು ಅಂಕ ಬರುವಲ್ಲಿ ಶಾಲೆಯ ಮುಖ್ಯಸ್ಥರಾದ ಇವರು ಪ್ರಯತ್ನ ಮಾಡಬೇಕಾಗಿತ್ತು. ಆದರೆ, ಬಡಮಕ್ಕಳು ಶಾಲೆಯ ಸಮಯದಲ್ಲಿ ವಿದ್ಯಾಭ್ಯಾಸ
ಮಾಡುವ ಕೈಗಳಲ್ಲಿ ಶಾಲೆಯ ದೈಹಿಕ ಕೆಲಸಕ್ಕೆ ಹಾಕಿಕೊಂಡಿರುವ ಶಿಕ್ಷಕರನ್ನು ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಸರ್ಕಾರಿ ಶಾಲೆಗಳಿಗೆ ಸಾವಿರಾರು ರೂ.ಗಳನ್ನು ಕಟ್ಟಡಗಳಿಗೆ, ಶಿಕ್ಷಕರಿಗೆ ಸಂಬಳ, ಬಡ ಮಕ್ಕಳಿಗೆ ಬಟ್ಟೆ, ಪಠ್ಯಪುಸ್ತಕ, ಶೂ, ಬಿಸಿಯೂಟ ಸೇರಿದಂತೆ ವಿವಿಧ ವಿಷಯಗಳಿಗೆ ಖರ್ಚುಮಾಡುತ್ತಿದೆ. ಖಾಸಗಿ ಶಾಲೆಗಳ ಸರಿ ಸಮಾನವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಶಿಕ್ಷಕರುಗಳೇ ಹಣ ಉಳಿಸಿಕೊಳ್ಳಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ಮಣ್ಣುಹೊರುವ, ಗೋಡೆ ಒಡೆಯುವ ಕೆಲಸವನ್ನು ಮಾಡಿಸಿಕೊಂಡು ಓದುವ ಅಮೂಲ್ಯ ಸಮಯವನ್ನು ಹಾಳು ಮಾಡುತ್ತಿದ್ದಾರೆ. ದೈಹಿಕ ಶ್ರಮವನ್ನು ನೀಡಿ ಮನೆಯಲ್ಲೂ ಓದದಂತೆ ಮಾಡುತ್ತಿದ್ದಾರೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಯಾಕೆ ಈ ರೀತಿಯ ಕೆಲಸಗಳನ್ನು ಮಾಡಿಸಿಕೊಳ್ಳಬೇಕು. ಕಟ್ಟಡ ರಿಪೇರಿಗೆ ಸರ್ಕಾರ ಅನುದಾನ ನೀಡುತ್ತಿಲ್ಲವೇ? ಈ ಕೆಲಸಗಳಿಂದ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವುದಿಲ್ಲವೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಪ ಪ್ರಾಂಶುಪಾಲರಾದ ಬಿ.ಎಂ. ರಾಧಮ್ಮರನ್ನು ಸೇವೆಯಿಂದ ಅಮಾನತು ಮಾಡಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಕೋಲಾರ ಜಿಲ್ಲಾ ಆಡಳಿತದ ಮುಂದೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಂದ ಕೆಲಸ:
ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ಪೂರ್ವಾಭ್ಯಾಸಕ್ಕೆ ಅನುಮು ಮಾಡಿಕೊಡಬೇಕು. ಈ ವೇಳೆಯಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಅಭ್ಯಾಸ ಮಾಡಿಕೊಳ್ಳದೆ ಪರೀಕ್ಷೆ ಎದುರಿಸಲು ಸಾಧ್ಯವೇ? ಈ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಉತ್ತರ ಕೊಡಲೇಬೇಕು. ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು. ಅವರನ್ನು ಸೇವೆಯಿಂದ ವಜಾ ಗೊಳಿಸಲೇಬೇಕು. ಉಪ ನಿರ್ದೇಶಕರ ಕಛೇರಿ ಪಕ್ಕದ ಶಾಲೆಯಲ್ಲಿ ಈ ರೀತಿ ಆದರೆ ಗಡಿ ಭಾಗದ ಶಾಲೆಗಳ ಗತಿ ಏನು ಯೋಚನೆ ಮಾಡುವುದಕ್ಕೂ ಸಾಧ್ಯವಿಲ್ಲದ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ಮತ್ತು ಶಿಕ್ಷಣ ಇಲಾಖೆ ಇದರ ವಿರುದ್ಧ ಸರಿಯಾದ ರೀತಿ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದುರೈತಸಂಘದ ಯುವ ಘಟಕ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.