ಪಿಯು ಕಾಲೇಜುಗಳಲ್ಲಿ ಸೇವಾದಳ ಘಟಕ ಆರಂಭಿಸಿ
ದ್ವಿತೀಯ ಪಿಯು ಉಪನ್ಯಾಸಕರಿಗೆ ನಡೆದ ರಾಷ್ಟ್ರಧ್ವಜ ಕಾರ್ಯಾಗಾರದಲ್ಲಿ ಪಿಯುಡಿಡಿ ವೆಂಕಟಸ್ವಾಮಿ ಸಲಹೆ
Team Udayavani, Jul 29, 2019, 10:12 AM IST
ಕೋಲಾರ: ಪಿಯು ಕಾಲೇಜುಗಳಲ್ಲಿ ಭಾರತ ಸೇವಾದಳ ಘಟಕಗಳನ್ನು ರಚಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮ ಬೆಳೆಸಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ವೆಂಕಟಸ್ವಾಮಿ ಹೇಳಿದರು.
ನಗರದ ಜೂನಿಯರ್ ಕಾಲೇಜಿನಲ್ಲಿ ಭಾರತ ಸೇವಾದಳ ಜಿಲ್ಲಾ ಘಟಕದಿಂದ ದ್ವಿತೀಯ ಪಿಯು ಕಾಲೇಜು ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶ ನಮಗೇನು ನೀಡಿತು ಎಂಬುದನ್ನು ಯೋಚಿಸದೇ ದೇಶಕ್ಕೆ ನಮ್ಮ ಕೊಡುಗೆಯೇನು ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಿಸಬೇಕೆಂದು ಹೇಳಿದರು.
ಉತ್ತಮ ಕಾರ್ಯ ನಿರ್ವಹಣೆ: ಭಾರತ ಸೇವಾದಳದ ಕಾರ್ಯ ಚಟುವಟಿಕೆಗಳನ್ನು ದ್ವಿತೀಯ ಪಿಯುಸಿ ಕಾಲೇಜುಗಳಿಗೂ ವಿಸ್ತರಿಸುವಂತೆ ಸರ್ಕಾರದ ಆದೇಶವಿದ್ದು, ಪ್ರತಿಯೊಂದು ಕಾಲೇಜಿನಲ್ಲಿಯೂ ಘಟಕ ತೆರೆಯಬೇಕು. ಮಕ್ಕಳಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಸಂಯಮ, ಭ್ರಾತೃತ್ವ, ಸಮಾನತೆ, ಸಹಬಾಳ್ವೆ ಕಲಿಸಬೇಕಾಗಿದೆ. ಇದು ಪೋಷಕರು ಮತ್ತು ಶಿಕ್ಷಕರ ಕರ್ತವ್ಯವಾಗಿದೆ. ಭಾರತ ಸೇವಾದಳವು ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ಹೋರಾಟ ಕಾಲದಿಂದಲೂ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದು ಹೇಳಿದರು.
ಕಾರ್ಯೋನ್ಮುಖರಾಗಿ: ಯಾರಿಂದಲೋ ಮೆಚ್ಚುಗೆ ಸಿಗುತ್ತದೆ, ಮನ್ನಣೆ ಸಿಗುತ್ತದೆಯೆಂಬ ಭಾವನೆಯಲ್ಲಿ ಕರ್ತವ್ಯ ನಿರ್ವಹಿಸದೆ ದೇಶ ಸೇವೆಯ ಆತ್ಮತೃಪ್ತಿಗಾಗಿ ಪ್ರತಿಯೊಬ್ಬರೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಕಾರ್ಯೋನ್ಮುಖರಾಗಬೇಕೆಂದು ಹೇಳಿದರು.
ಸರ್ಕಾರದ ಮೂಲಕ ಅನುಷ್ಠಾನ: ಭಾರತ ಸೇವಾದಳದ ಜಿಲ್ಲಾ ಉಪಾಧ್ಯಕ್ಷ ಜಿ.ಶ್ರೀನಿವಾಸ್ ಮಾತನಾಡಿ, ಹಿಂದೂಸ್ತಾನ್ ಸೇವಾದಳವನ್ನು ಸ್ಥಾಪಿಸಿದ ನಾ.ಸು.ಹರ್ಡೀಕರ್ ಸ್ವಾತಂತ್ರ್ಯ ನಂತರ ಭಾರತ ಸೇವಾದಳ ಹೆಸರಿನಲ್ಲಿ ಜಾತ್ಯತೀತ, ಪಕ್ಷಾತೀತ ಸಂಘಟನೆಯನ್ನು ರೂಪಿಸಿ ಶಿಕ್ಷಣ ಇಲಾಖೆಯ ಮೂಲಕ ಮಕ್ಕಳಲ್ಲಿ ದೇಶಭಕ್ತಿ ಮೂಡಿಸಲು ಕಾರ್ಯಚಟುವಟಿಕೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಹೇಳಿದರು.
ಭಾರತ ಸೇವಾದಳ ಜಿಲ್ಲಾ ಸಂಘಟಿಕ ದಾನೇಶ್ ಮತ್ತು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಮಂಜುನಾಥ್, ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ರಾಷ್ಟ್ರಧ್ವಜ ಸಂಹಿತೆ ಕುರಿತು ಉಪನ್ಯಾಸ ಹಾಗೂ ರಾಷ್ಟ್ರಧ್ವಜದ ಅರೋಹಣ, ಅವರೋಹಣ ಸಂದರ್ಭದಲ್ಲಿ ಪಾಲಿಸಬೇಕಾದ ಪದ್ಧತಿಗಳ ಕುರಿತಂತೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.