ನನೆಗುದಿಗೆ ಬಿದ್ದಿರುವ ಶುದ್ಧ ನೀರಿನ ಘಟಕ ಆರಂಭಿಸಿ

ಯಂತ್ರೋಪಕರಣ, ಇತರೆ ಪರಿಕರಗಳ ಅಳವಡಿಸದೇ ನಿರ್ಲಕ್ಷ್ಯ

Team Udayavani, May 26, 2019, 1:40 PM IST

kolar-tdy-5..

ಬೇತಮಂಗಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮಾತ್ರ ನಿರ್ಮಾಣಗೊಂಡಿದ್ದು, ಶುದ್ಧೀಕರಣ ಪರಿಕರ ಅಳವಡಿಸದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ಬೇತಮಂಗಲ: ಹೋಬಳಿ ವ್ಯಾಪ್ತಿಯ ಎನ್‌.ಜಿ.ಹುಲ್ಕೂರು ಗ್ರಾಮ ಪಂಚಾಯ್ತಿನ ಪೂಗಾನಗಳ್ಳಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣವಾಗಿ ತಿಂಗಳುಗಳೇ ಗತಿಸಿದರೂ ಆರಂಭಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.

ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಜಿಪಂ ಯೋಜನೆ ಅಡಿಯಲ್ಲಿ ಕೈಗೊಂಡ ಘಟಕಕ್ಕೆ ಇಂದಿಗೂ ಯಂತ್ರೋಪಗಳು, ಇತರೆ ಪರಿಕರಗಳನ್ನು ಅಳವಡಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಇದರಿಂದ ಈ ಭಾಗದ ಜನತೆಗೆ ಶುದ್ಧ ನೀರು ಲಭ್ಯವಾಗುತ್ತಿಲ್ಲ. ಶುದ್ಧ ನೀರು ಬೇಕೆಂದರೆ ಪಕ್ಕದ ಗ್ರಾಮಗಳಿಗೆ ಹೋಗಿ ಹಣ ನೀರು ನೀರು ಖರೀದಿ ಮಾಡಬೇಕಾದ ಅನಿವಾರ್ಯತೆ ಇದೆ.

ಯಂತ್ರೋಪಕರಣ ಜೋಡಿಸಿಲ್ಲ: ಈಗಾಗಲೇ ಅಂತರ್ಜಲ ಬತ್ತಿಹೋಗಿ ಜನರಿಗೆ ಬೋರ್‌ವೆಲ್ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ. 1200 ಅಡಿ ಆಳದಿಂದ ಹೊರತೆಗೆಯುವ ನೀರು ಫ್ಲೋರೈಡ್‌ ಹಾಗೂ ಗಡುಸಾಗಿದ್ದು, ಈ ನೀರನ್ನು ಕುಡಿದು ಜನ ಮೂಳೆ ಸವೆತ, ಇತರೆ ರೋಗಗಳಿಂದ ಬಳಲುವಂತಾಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಪ್ರತಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲು ಮುಂದಾಗಿದೆ.

ಅದರಂತೆ ಪೂಗಾನಗಳ್ಳಿಯಲ್ಲೂ ಘಟಕ ನಿರ್ಮಿಸಿದ್ದು, ಅದಕ್ಕೆ ಅಗತ್ಯ ಯಂತ್ರೋಪಕರಣ, ಸಲಕರಣೆ ಜೋಡಿಸಿಲ್ಲ. ಇದರಿಂದ ಘಟಕ ಪಾಳು ಬಿದ್ದಿದೆ.

ಗಡುಸು ನೀರೇ ಗತಿ: ಯುವಕರು ಮತ್ತು ದ್ವಿಚಕ್ರ ವಾಹನ ಬಳಸುವವರು ಸಮೀಪದ ಗ್ರಾಮವೊಂದಕ್ಕೆ ತೆರಳಿ ಶುದ್ಧ ಕುಡಿಯುವ ನೀರನ್ನು ವಾಹನಗಳ ಮೂಲಕ ಹೊತ್ತು ತರುತ್ತಾರೆ. ಆದರೆ, ವಾಹನ ಇಲ್ಲದವರು, ವೃದ್ಧಾಪ್ಯ ಜೀವನ ಸಾಗಿಸುತ್ತಿರುವ ಹಿರಿಯರಿಗೆ ಬಹುದೂರ ಹೋಗಿ ನೀರು ತರುವುದು ಕಷ್ಟವಾಗಿದೆ. ಆದ್ದರಿಂದ ವಿಧಿಯಿಲ್ಲದೇ ಗಡುಸು ನೀರನ್ನೇ ಕುಡಿಯುವ ಪರಿಸ್ಥಿತಿ ಇದೆ ಎಂದು ಯುವ ಮುಖಂಡ ಸುನಿಲ್ ಕುಮಾರ್‌ ತಮ್ಮ ಅಳಲು ತೋಡಿಕೊಳ್ಳುತ್ತಾರೆ.

ಪಕ್ಕದ ಊರಿನ ನೀರೇ ಗತಿ: ಇತ್ತೀಚಿನ ದಿನಗಳಲ್ಲಿ ಬೋರ್‌ವೆಲ್ಗಳಲ್ಲಿ ಕಲುಷಿತ ನೀರು ಬರುತ್ತವೆ ಎಂಬ ಸುದ್ದಿಯಾಗಿದೆ. ಅಂದಿನಿಂದಲೂ ಯಾವುದೇ ಗ್ರಾಮಸ್ಥರು ಕೊಳವೆಬಾವಿಗಳ ನೀರನ್ನು ಕುಡಿಯಲು ಹಿಂಜರಿಯುತ್ತಿದ್ದಾರೆ. ಗ್ರಾಮದಿಂದ ದೂರದೂರಿಗೆ ಹೋಗಿ ಕ್ಯಾನ್‌ಗೆ 20 ರೂ. ವರೆಗೂ ಹಣ ನೀಡಿ, ನೀರು ಕುಡಿಯುವ ಪರಿಸ್ಥಿತಿ ಇದೆ. ಈ ಬಗ್ಗೆ ಕೂಡಲೇ ಜಿಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಗಮನ ಹರಿಸಿ ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.