ಬೆಟ್ಟಬೆಣಜೇನಹಳ್ಳಿ ಕೆರೆ ಪುನಶ್ಚೇತನಕ್ಕೆ ಚಾಲನೆ

ಟೆಕ್ಸಾಸ್‌, ಧಾನ್‌ ಫೌಂಡೇಷನ್‌, ರೈತರ ಸಹಯೋಗದಲ್ಲಿ ಕಾಮಗಾರಿ ಆರಂಭ

Team Udayavani, Jul 15, 2019, 4:05 PM IST

kolar-tdy-3..

ಕೋಲಾರ ತಾಲೂಕಿನ ಬೆಟ್ಟಬೆಣಜೇನಹಳ್ಳಿ ಕೆರೆ ಪುನಶ್ಚೇತನ ಕಾಮಗಾರಿಗೆ ಧಾನ್‌ ಫೌಂಡೇಷನ್‌ನ ಸಂಯೋಜಕ ರಮೇಶ್‌ ಚಾಲನೆ ನೀಡಿದರು.

ಕೋಲಾರ: ಟೆಕ್ಸಾಸ್‌ ಕಂಪನಿ ಆರ್ಥಿಕ ನೆರವು,ಧಾನ್‌ ಫೌಂಡೇಷನ್‌ ಮತ್ತು ರೈತರ ಸಹಭಾಗಿತ್ವದಲ್ಲಿ ತಾಲೂಕಿನ 4 ಕೆರೆಗಳ ಪುನಶ್ಚೇತನ ಮಾಡುತ್ತಿದ್ದು, ಜನತೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಧಾನ್‌ ಫೌಂಡೇಷನ್‌ನ ಸಂಯೋಜಕ ರಮೇಶ್‌ ಮನವಿ ಮಾಡಿದರು.

ತಾಲೂಕಿನ ವಕ್ಕಲೇರಿ ಗ್ರಾಪಂ ವ್ಯಾಪ್ತಿಯ ಬೆಟ್ಟಬೆಣಜೇನಹಳ್ಳಿ ಕೆರೆ ಪುನಶ್ಚೇತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ಶೆಟ್ಟಿಕೊತ್ತನೂರು, ಚಿಕ್ಕನಹಳ್ಳಿ, ಗುಟ್ಟಹಳ್ಳಿ, ಬೆಟ್ಟಬೆಣಜೇನಹಳ್ಳಿ ಕೆರೆಗಳನ್ನು 20 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನ ಮಾಡುತ್ತಿರುವುದಾಗಿ ತಿಳಿಸಿದರು.

ನಮ್ಮೂರ ಕೆರೆ, ಜೀವಜಲದ ಜೀವನಾಡಿ ಎಂಬ ಸತ್ಯವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು, ಕೆರೆ ಉಳಿದರೆ ಮಾತ್ರ ಗ್ರಾಮದಲ್ಲಿ ಅಂತರ್ಜಲ ವೃದ್ಧಿ ಸಾಧ್ಯ ಎಂಬುದನ್ನು ಅರಿತು ಕೆರೆ ಪುನಶ್ಚೇತನ ಕಾಮಗಾರಿಗೆ ಸಹಕಾರ ನೀಡಿ ಎಂದು ಕಿವಿಮಾತು ಹೇಳಿ, ಕೆರೆ ಪುನಶ್ಚೇತನದ ಜತೆ ಇದೀಗ ಕೆರೆಗಳಲ್ಲಿ ಜಾನುವಾರುಗಳು, ಪ್ರಾಣಿಗಳು ನೀರು ಕುಡಿಯಲು ತೊಟ್ಟಿಗಳ ನಿರ್ಮಾಣ ಮಾಡುತ್ತಿರುವುದಾಗಿ ವಿವರಿಸಿದರು.

ಟೆಕ್ಸಾಸ್‌ ಕಂಪನಿ ನೀಡುವ ಅನುದಾನವನ್ನು ನೀರು ನಿಲುಗಡೆಗಾಗಿ ಮತ್ತು ಅಂತರ್ಜಲ ವೃದ್ಧಿಗಾಗಿ ಬಳಸಿಕೊಂಡು ಹೂಳು ತೆಗೆಯುವ ಕಾರ್ಯ ಮಾಡಲಾಗುತ್ತದೆ. ರೈತರು ಕೆರೆಯ ಹೂಳನ್ನು ತಮ್ಮ ತೋಟಗಳಿಗೆ ಸಾಗಿಸಿಕೊಂಡರೆ ಫಲವತ್ತತೆ ಹೆಚ್ಚುವುದರಿಂದ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೆರೆ ಕಟ್ಟೆ ಬಲವರ್ಧನೆ, ಪೋಷಕ ಕಾಲುವೆಗ‌ಳ ದುರಸ್ತಿ, ಗಿಡಗಂಟಿ ತೆಗೆಯುವುದು, ಹೂಳನ್ನು ಹೊರ ಸಾಗಿಸುವುದು, ಗ್ರಾಮದ ದನಕರುಗಳಿಗೆ ನೀರಿನ ತೊಟ್ಟಿ ನಿರ್ಮಿಸುವುದು, ಗ್ರಾಮದ ಕುಂಟೆಗಳಲ್ಲಿ ಹೂಳು ತೆಗೆಯುವ ಕೆಲಸವನ್ನು ರೈತರ ಸಹಭಾಗಿತ್ವದಲ್ಲಿ ಮಾಡುವುದಾಗಿ ತಿಳಿಸಿದರು.

ಗ್ರಾಪಂ ಸದಸ್ಯ ಇಲಿಯಾಜ್‌ಖಾನ್‌, ಕೆರೆಗಳ ಪುನಶ್ಚೇತನದಿಂದಾಗಿ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ನೀರು ನಿಂತರೆ ಸುತ್ತಮುತ್ತ ಕೊಳವೆಬಾವಿಗಳು ರೀಚಾರ್ಜ್‌ ಆಗುತ್ತವೆ ಎಂದು ತಿಳಿಸಿದರು.

ವಕ್ಕಲೇರಿ ಪಿಡಿಒ ಯಾಜೀಜ್‌ ಖಾನ್‌, ಧಾನ್‌ಫೌಂಡೇಷನ್‌ ಸಂಸ್ಥೆ ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಇಂತಹ ಸಾಮಾಜಿಕ ಕಾಳಜಿಯ ಕೆಲಸ ಮಾಡುತ್ತಿದ್ದು, ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಪೂರ್ವಿಕರ ದೂರದೃಷ್ಟಿಯಿಂದ ಕೆರೆಗಳನ್ನು ನಿರ್ಮಿಸಲಾಗಿದ್ದು, ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರದು ಎಂದ ಅವರು, ಕೆರೆಗಳ ಒತ್ತುವರಿ, ಫಿಲ್ಟರ್‌ ದಂಧೆಗೆ ಅವಕಾಶ ನೀಡುವುದಿಲ್ಲ ಎಂದು ಸ್ವಷ್ಟಪಡಿಸಿದರು. ಗ್ರಾಪಂ ಕಾರ್ಯದರ್ಶಿ ಸೀತಾರಾಮಪ್ಪ, ಲೆಕ್ಕ ಸಹಾಯಕ ವೆಂಕಟೇಶ್‌, ಮುಖಂಡ ರಾಮಚಂದ್ರಪ್ಪ, ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.