ಭಾನುವಾರದ ಲಾಕ್‌ಡೌನ್‌ ಯಶಸ್ವಿ

Team Udayavani, Jul 6, 2020, 6:37 AM IST

hanu-lock

ಕೋಲಾರ: ಕೋವಿಡ್‌ 19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆದೇಶ ನೀಡಿರುವ ಭಾನುವಾರದ ಲಾಕ್‌ಡೌನ್‌ ನಗರದಲ್ಲಿ ಯಶಸ್ವಿಯಾಯಿತು. ಎಪಿಎಂಸಿ ಮಾರುಕಟ್ಟೆ ವಹಿವಾಟು ಹೊರತುಪಡಿಸಿ  ಉಳಿದಂತೆ ಅಂಗಡಿ ಮುಂಗಟ್ಟು, ವಾಹನ ಸಂಚಾರ ಬಂದ್‌ ಆಗಿತ್ತು. ಸೋಂಕಿತರ ಪ್ರಮಾಣ ಏರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಾರಿಗೆ ತಂದಿರುವ ಭಾನುವಾರದ ಕರ್ಫ್ಯೂಗೆ ಜಿಲ್ಲೆಯಲ್ಲೂ ಉತ್ತಮ ಬೆಂಬಲ  ವ್ಯಕ್ತವಾಗಿದ್ದು, ಜನತೆ ಮನೆಯಲ್ಲೇ ಉಳಿದಿದ್ದರು.

ಕೋವಿಡ್‌ 19 ಮಾರಕ ಸ್ಥಿತಿ ಅರಿತಿರುವ ಜನತೆ ಭಾನುವಾರ ಬೆಳಗ್ಗೆ ಮಾಂಸ, ತರಕಾರಿ ಖರೀದಿಗೆ ವಿರಳವಾಗಿ ಬೈಕ್‌ಗಳ ಮೇಲೆ ಓಡಾಡುತ್ತಿದ್ದು ಬಿಟ್ಟರೆ ನಗರದ ಎಲ್ಲಾ ರಸ್ತೆಗಳು ಬಿಕೋ  ಎನ್ನುತ್ತಿದ್ದವು. ಅಂಗಡಿ ಮುಂಗಟ್ಟುಗಳು, ಹೋಟೆಲ್‌, ಮಾಲ್‌, ರಸ್ತೆ ಬದಿ ವ್ಯಾಪಾರ, ತರಕಾರಿ ಮಾರುಕಟ್ಟೆ ಸಂಪೂರ್ಣ ಬಂದ್‌ ಆಗಿತ್ತು. ನಗರದ ಸದಾ ಜನನಿಬಿಡ ಎಂ.ಜಿ.ರಸ್ತೆ, ದೊಡ್ಡಪೇಟೆ, ಕಾಳಮ್ಮ ಗುಡಿ ಬೀದಿ, ಅಮ್ಮವಾರಿಪೇಟೆ,  ಬಸ್‌ ನಿಲ್ದಾಣ ವೃತ್ತ ಜನರಿಲ್ಲದೇ ಬಿಕೋ ಎನ್ನುತ್ತಿತ್ತು.

ಮಾಂಸದಂಗಡಿಗಳ ವಹಿವಾಟು ಜೋರು: ಕರ್ಫ್ಯೂ ಹಿನ್ನೆಲೆಯಲ್ಲಿ ಜನ ಮನೆಯಲ್ಲೇ ಉಳಿದುಕೊಂಡಿರುವ ಕಾರಣ ಭಾನುವಾರದ ಮಾಂಸದ ವ್ಯಾಪಾರ ಜೋರಾಗಿಯೇ ನಡೆದಿತ್ತು. ಹಾಲು, ಔಷಧಿ, ದಿನಸಿ ಅಂಗಡಿಗಳನ್ನು  ಹೊರತುಪಡಿಸಿ ಉಳಿದೆಲ್ಲವೂ ಬಂದ್‌ ಆಗಿತ್ತು.

ನಿಲ್ದಾಣದಲ್ಲಿ ಮೌನ: ಸಾರಿಗೆ ಸಂಸ್ಥೆ ಬಸ್‌ ಗಳನ್ನು ರಸ್ತೆಗಿಳಿಸದ ಕಾರಣ ನಗರದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ ಖಾಲಿಯಾಗಿತ್ತು. ಇಡೀ ನಗರದಲ್ಲಿ ಆಟೋ ಸಂಚಾರವೂ ರದ್ದಾಗಿದ್ದು, ಅದೃಷ್ಟಕ್ಕೆಂಬಂತೆ ಒಂದೋ ಎರಡೋ  ಆಟೋಗಳು ಅಲ್ಲಲ್ಲಿ ಕಂಡು ಬಂದವಾದರೂ ಪೊಲೀಸರನ್ನು ಕಂಡೊಡನೆ ಮಾಯವಾದವು. ದ್ವಿಚಕ್ರ ವಾಹನಗಳು ಅಲ್ಲೊಂದು, ಇಲ್ಲೊಂದು ಓಡಾಡಿದ್ದು, ಬಿಟ್ಟರೆ ನಗರದಲ್ಲಿ ಯಾವುದೇ ವಾಹನ ಸಂಚಾರ ಕಂಡು ಬರಲೇ ಇಲ್ಲ. ನಾಗರಿಕರು ತಮಗೆ ಅಗತ್ಯವಾದ ವಸ್ತುಗಳನ್ನು ಶನಿವಾರವೇ ಖರೀದಿಸಿದ್ದರಿಂದಾಗಿ ಯಾವುದೇ ತೊಂದರೆಗೆ ಒಳಗಾಗಲಿಲ್ಲ. ಅಲ್ಲಲ್ಲಿ ಮೆಡಿಕಲ್‌ ಸ್ಟೋರ್, ಹಾಲಿನ ಬೂತ್‌ ತೆರೆದಿದ್ದು ಕಂಡು ಬಂತಾದರೂ ಜನರಿಲ್ಲದೇ 12 ಗಂಟೆ ವೇಳೆಗೆ  ಅವೂ ಬಂದ್‌ ಆದವು.

ಎಪಿಎಂಸಿ ವಹಿವಾಟಿಗೆ ವಿರಳ ಜನ ಹಾಜರಿ: ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಎಂಬ ಖ್ಯಾತಿಗೆ ಒಳಗಾಗಿದ್ದ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಕರ್ಫ್ಯೂ ಅಡ್ಡಿಯಾಗಲಿಲ್ಲ, ಜಿಲ್ಲಾಡಳಿತವೇ ರೈತರ ಹಿತದೃಷ್ಟಿಯಿಂದ ವಹಿವಾಟಿಗೆ ಅವಕಾಶ ಕಲ್ಪಿಸಿದ್ದರಿಂದಾಗಿ ಯಥಾಸ್ಥಿತಿ ಮುಂದುವರಿಯಿತಾದರೂ, ಪ್ರತಿದಿನ ಇದ್ದಂತೆ ಜನಸಂದಣಿ ಕಂಡು ಬರಲಿಲ್ಲ. ನಗರದಲ್ಲಿ ವರ್ತಕರು ಈಗಾಗಲೇ ಪ್ರತಿ ದಿನ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೂ ಮಾತ್ರ ವಹಿವಾಟು ನಡೆಸಲು ಸ್ವಯಂಪ್ರೇರಿತವಾಗಿ ನಿರ್ಧರಿಸಿದ್ದು, ಭಾನುವಾರ ಅಂಗಡಿ ತೆರೆಯಲು ಮುಂದಾಗಲಿಲ್ಲ.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.