ಕುಷ್ಠರೋಗ ಮುಕ್ತ ಜಿಲ್ಲೆಗೆ ಸಹಕರಿಸಿ
Team Udayavani, Jan 20, 2020, 4:44 PM IST
ಕೋಲಾರ: ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಮಾಡಲು ಎಲ್ಲರೂ ಸಹಕರಿಸಿ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಎನ್.ಸಿ.ನಾರಾಯಣ ಸ್ವಾಮಿ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿ ಕೊಂಡಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಮೂಡಿಸುವ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಜ.31ರಿಂದ ಫೆ.13ರವರೆಗೆ 15 ದಿನಗಳ ಸ್ಪರ್ಶ್ ಕುಷ್ಠರೋಗ ಅರಿವು ಮೂಡಿಸುವ ಅಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಪಂ ಮಟ್ಟದಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ ಪ್ರಬಂಧ, ಚರ್ಚಾಸ್ಪರ್ಧೆ, ಬೀದಿ ನಾಟಕಗಳ ಮೂಲಕ ನಾಗರಿಕರಿಗೆ ಕುಷ್ಠರೋಗದ ಕುರಿತು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಕುಷ್ಠರೋಗವು ಮೈಕ್ರೋ ಬ್ಯಾಕ್ಟೀರಿಯಾ ಲೆಪ್ರ ಎಂಬ ಸೂಕ್ಷ್ಮಾಣುವಿನಿಂದ ಉಸಿರಾಟ, ಕೆಮ್ಮು ಹಾಗೂ ಸೀನುವುದರ ಮೂಲಕ ಮಾತ್ರ ಹರಡುತ್ತದೆ. ಚರ್ಮ ಮತ್ತು ನರಗಳಿಗೆ ಸಂಬಂಧಿಸಿದ ಕಾಯಿಲೆಯಾಗಿದೆ. ಈ ರೋಗಾಣುವು ಮನುಷ್ಯನ ದೇಹದಲ್ಲಿ ಒಂದು ವಾರದಿಂದ 20 ವರ್ಷಗಳವರೆಗೆ ಇರುತ್ತದೆ. ಇದು ಹಿಂದಿನ ಕಾಲದಿಂದ ಬಂದ ಕಾಯಿಲೆ ಯಾಗಿದ್ದು, ಯಾವುದೇ ಶಾಪ, ಪಾಪ ಅಥವಾ ಕರ್ಮದಿಂದ ಬರುವುದಿಲ್ಲ. ಕುಷ್ಠರೋಗದಿಂದ ಸಾವು ಸಂಭವಿಸುವುದಿಲ್ಲ, ಆದರೆ, ಈ ಕಾಯಿಲೆ ಬಂದರೆ ಅಂಗವಿಕಲತೆ ಸಾಧ್ಯತೆ ಹೆಚ್ಚು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಏಪ್ರಿಲ್ 2018-ಮಾರ್ಚ್2019ರವರಗೆ 41 ಪ್ರಕರಣಗಳುದಾಖಲಾಗಿದ್ದು, ಇದರಲ್ಲಿ 38 ಎಂಬಿ, 3 ಪಿಬಿ. ಏಪ್ರಿಲ್ 2019 ರಿಂದ ಡಿಸೆಂಬರ್ 2019 ರವರೆಗೆ 33 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬಂಗಾರಪೇಟೆ 6,ಕೆಜಿಎಫ್ 5, ಕೋಲಾರ 3, ಮಾಲೂರು 4, ಮುಳಬಾಗಿಲು 9 ಹಾಗೂ ಶ್ರೀನಿವಾಸಪುರದಲ್ಲಿ 6 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.