ತಾಂತ್ರಿಕತೆ ಅಳವಡಿಕೆ; ಡಿಸಿಸಿ ಬ್ಯಾಂಕಿಗೆ ರಾಜ್ಯ ಮಟ್ಟದ ಗೌರವ


Team Udayavani, Jan 1, 2022, 4:47 PM IST

ತಾಂತ್ರಿಕತೆ ಅಳವಡಿಕೆ; ಡಿಸಿಸಿ ಬ್ಯಾಂಕಿಗೆ ರಾಜ್ಯ ಮಟ್ಟದ ಗೌರವ

ಕೋಲಾರ: ಸಹಕಾರಿ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ತಾಂತ್ರಿಕತೆ ಅಳವಡಿಕೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿಗೆ ರಾಜ್ಯಮಟ್ಟದ ಗೌರವ ಲಭಿಸಿದೆ ಎಂದುಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹರ್ಷ ವ್ಯಕ್ತಪಡಿಸಿದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲೇ ಮೊದಲ ಬಾರಿಗೆ ಸಹಕಾರಸಂಘಗಳ ಚಟುವಟಿಕೆಗಳನ್ನು ಗಣಕೀಕರಣಗೊಳಿಸುವ ಕಾರ್ಯದಲ್ಲಿ ಮಾಡಿರುವ ಸಾಧನೆ, ಎಟಿಎಂ ಬಳಕೆ, ಮೊಬೈಲ್‌ ಬ್ಯಾಂಕಿಂಗ್‌, ಇ-ಶಕ್ತಿ ಅನುಷ್ಠಾನ ಮತ್ತಿತರ ತಾಂತ್ರಿಕತೆ ಅಳವಡಿಕೆಯಲ್ಲಿ ಮಾಡಿರುವ ಸಾಧನೆಗಾಗಿ ನಬಾರ್ಡ್‌ ಈ ಪ್ರಶಸ್ತಿ ನೀಡಿದೆ ಎಂದು ತಿಳಿಸಿದರು.

ಮೂರು ಬ್ಯಾಂಕ್‌ಗಳಿಗೂ ಗೌರವ: ಬ್ಯಾಂಕಿಂಗ್‌ ಸೇವೆಯ ಕುರಿತು ಸಾರ್ವಜನಿಕರು, ಗ್ರಾಹಕರಿಗೆ ಹೆಚ್ಚಿನ ಮಾಹಿತಿ, ಸೌಲಭ್ಯ ಒದಗಿಸಿರುವುದನ್ನು ಗಮನಿಸಿ ಈಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಜ್ಯದ ಕೋಲಾರ,ಉತ್ತರಕನ್ನಡ,ಧಾರವಾಡ ಜಿಲ್ಲಾ ಸಹಕಾರ ಬ್ಯಾಂಕುಗಳು ಈ ಗೌರವಕ್ಕೆ ಭಾಜನವಾಗಿದೆ ಎಂದು ತಿಳಿಸಿದರು.

ಜ.12ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರೆಡಿಷನ್‌ ಬ್ಲೂ ಅತ್ರಿಯಾ ಹೋಟೆಲ್‌ನಲ್ಲಿ ನಡೆಯುವ “ರಾಜ್ಯ ಸಾಲ ಯೋಜನೆ ವಿಚಾರ ಸಂಕಿರಣ’ದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕಿನ ಸಾಧನೆಗೆ ಹೆಮ್ಮೆ: ಕಳೆದ 10 ವರ್ಷ ಹಿಂದೆ ದಿವಾಳಿಯಾಗಿದ್ದ ಕೋಲಾರ ಡಿಸಿಸಿ ಬ್ಯಾಂಕ್‌ ಈಗಾಗಲೇ ಎನ್‌ಪಿಎ ನಿರ್ವಹಣೆಯಲ್ಲೂ ರಾಜ್ಯಕ್ಕೆ ಮೊದಲೆಂಬ ಸಾಧನೆಯ ಗೌರವಕ್ಕೆ ಪಾತ್ರವಾಗಿದ್ದು, ಮಹಿಳೆಯರಿಗೆ ಸಾಲ ನೀಡಿಕೆ, ಪ್ರತಿ ಮಹಿಳಾ ಸದಸ್ಯರಿಗೂ ಎಟಿಎಂ ಕಾರ್ಡ್‌ ನೀಡಿಕೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದರು.

ಬ್ಯಾಂಕ್‌ನಲ್ಲೇ ಹೆಚ್ಚು ಸೌಲಭ್ಯ: ಆಡಳಿತ ಮಂಡಳಿಯ ನಿರಂತರ ಪ್ರಯತ್ನ, ಸಿಬ್ಬಂದಿಯ ಪರಿಶ್ರಮ, ಸಾಲ ವಿತರಣೆ ಜತೆಗೆ ಠೇವಣಿ ಸಂಗ್ರಹ, ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳು ಈಗಾಗಲೇ ಪ್ರಶಂಸೆಗೆಪಾತ್ರವಾಗಿವೆ. ಸಹಕಾರ ಬ್ಯಾಂಕ್‌ ಒಂದರಲ್ಲಿ ವಾಣಿಜ್ಯ ಬ್ಯಾಂಕನ್ನು ಮೀರಿಸುವ ರೀತಿಯಲ್ಲಿ ಬ್ಯಾಂಕಿಂಗ್‌ ಸೌಲಭ್ಯ ಒದಗಿಸುವ ಮೂಲಕ ನೆಫ್ಟ್, ಆನ್‌ಲೈನ್‌ ಬ್ಯಾಂಕಿಂಗ್‌ ಸೌಲಭ್ಯವನ್ನು ಒದಗಿಸುವುದರ ಜತೆಗೆ ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ತಮ್ಮ ಮನೆ ಬಾಗಿಲಲ್ಲೇ ಹಣ ತಲುಪಿಸಲು ಕೈಗೊಂಡಿರುವ ಮೊಬೈಲ್‌ ಬ್ಯಾಂಕಿಂಗ್‌ ವಾಹನ ಸೌಲಭ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಠೇವಣಿದಾರರಿಗೂ ಹಣ ವಾಪಸ್‌ ಮಾಡಲಾಗದ ಸ್ಥಿತಿ ತಲುಪಿದ್ದ ಬ್ಯಾಂಕ್‌ ಇಂದು ಸಾವಿರಾರು ಕೋಟಿರೂ. ವಹಿವಾಟು ನಡೆಸುವ ಮೂಲಕ ಪಾರದರ್ಶಕ ವಹಿವಾಟಿಗೂ ಸಾಕ್ಷಿಯಾಗಿದ್ದು, ಗಣಕೀಕರಣ ಕಾರ್ಯ ಜ.15 ರೊಳಗೆ ಪೂರ್ಣಗೊಳ್ಳಲು ಇತ್ತೀಚೆಗೆ ನಡೆದಸಭೆಯಲ್ಲಿ ಕಟ್ಟಪ್ಪಣೆ ನೀಡಲಾಗಿದೆ ಎಂದು ವಿವರಿಸಿದರು.

ಒಟ್ಟಾರೆಯಾಗಿ ಡಿಸಿಸಿ ಬ್ಯಾಂಕ್‌ ಕುರಿತು ವಿನಾಕಾರಣ ಟೀಕೆ ಮಾಡುತ್ತಿದ್ದವರಿಗೆ ಈಗ ಸಂದಿರುವ ಈ ಗೌರವ ಸೂಕ್ತ ಉತ್ತರ ನೀಡಿದಂತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.