ಕಾಮಗಾರಿ ಗುಣಮಟ್ಟ ಪರೀಕ್ಷಿಸಿ
ನರೇಗಾ, ಪಿಂಚಣಿಗಳ ಸಾಮಾಜಿಕ ಪರಿಶೋಧನೆ ನಡೆಸಿ: ನಿರ್ದೇಶಕ ಮುನಿರಾಜು
Team Udayavani, May 26, 2019, 1:32 PM IST
ಕೋಲಾರದ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾಜಿಕ ಪರಿಶೋಧನೆ ಕುರಿತು ಕಾರ್ಯಾಗಾರದಲ್ಲಿ ಜಿಲ್ಲೆಯ ಐದು ತಾಲೂಕುಗಳಿಂದ ಆಗಮಿಸಿದ್ದ ಗ್ರಾಪಂ ಸಂಪನ್ಮೂಲ ವ್ಯಕ್ತಿಗಳು.
ಕೋಲಾರ: ನರೇಗಾ ಜತೆಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ, ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ, ಪಿಂಚಣಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪದೋಷಗಳ ಕುರಿತು ಸಾಮಾಜಿಕ ಪರಿಶೋಧನೆ ನಡೆಸುವಂತೆ ಗ್ರಾಪಂ ಸಂಪನ್ಮೂಲ ವ್ಯಕ್ತಿಗಳಿಗೆ ಜಿಪಂ ಸಹಾಯಕ ಯೋಜನಾ ನಿರ್ದೇಶಕ ಮುನಿರಾಜು ಸಲಹೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಐದು ತಾಲೂಕುಗಳ ಗ್ರಾಪಂ ಸಂಪನ್ಮೂಲ ವ್ಯಕ್ತಿಗಳಿಗಾಗಿ ಹಮ್ಮಿಕೊಂಡಿದ್ದ ಸಾಮಾಜಿಕ ಪರಿಶೋಧನಾ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ, ಉದ್ಯೋಗ ಸೃಜನ, ಬಿಡುಗಡೆಯಾಗಿರುವ ಅನುದಾನಕ್ಕೆ ತಕ್ಕಂತೆ ಕಾಮಗಾರಿ ನಡೆದಿರುವ ಕುರಿತು ಖಾತ್ರಿ ಮತ್ತಿತರ ಅಂಶಗಳ ಕುರಿತು ಗ್ರಾಪಂ ಸಂಪನ್ಮೂಲ ವ್ಯಕ್ತಿಗಳು ಪರಿಶೋಧನೆ ನಡೆಸಿ ವರದಿ ನೀಡಬೇಕಾಗುತ್ತದೆ ಎಂದು ವಿವರಿಸಿದರು.
ಇದೀಗ ಹೊಸದಾಗಿ ಸರ್ಕಾರ ನಿಮಗೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಪರಿಶೋಧನೆಯ ಹೊಸ ಜವಾಬ್ದಾರಿ ವಹಿಸಿದ್ದು, ಸಮರ್ಪಕವಾಗಿ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.
ಗ್ರಾಮಸಭೆಯಲ್ಲಿ ಅನುಮೋದಿಸಿ: ಕಾರ್ಯಾಗಾರದಲ್ಲಿ ಮುಖ್ಯ ತರಬೇತುದಾರರಾಗಿ ಆಗಮಿಸಿರುವ ಜಿಲ್ಲಾ ಸಂಯೋಜಕ ಎ.ಜಿ.ಬೀರೇಶ್, ಪ್ರತಿ ಗ್ರಾಪಂಗೂ ನೇಮಕಗೊಂಡಿರುವ ಸಂಪನ್ಮೂಲ ವ್ಯಕ್ತಿಗಳು ನರೇಗಾ ಯೋಜನೆಯ ಪ್ರಗತಿ, ಕೈಗೊಂಡಿರುವ ಕಾಮಗಾರಿಗಳ ವಿವರವಾದ ವರದಿಯನ್ನು ಗ್ರಾಮಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಅದರ ಪ್ರತಿಗಳನ್ನು ಗ್ರಾಪಂ, ತಾಪಂ, ಜಿಪಂಗೆ ಮತ್ತು ಒಂದು ಪ್ರತಿಯನ್ನು ಬೆಂಗಳೂರಿನ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯಕ್ಕೆ ಕಳುಹಿಸಬೇಕು ಎಂದು ತಿಳಿಸಿದರು.
ಇದೀಗ ಹೊಸದಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಪರಿಶೋಧನೆಯನ್ನು ನೀವು ನಡೆಸಬೇಕಾಗಿದ್ದು, ಇದು ಸಮರ್ಪಕವಾಗಿ ಫಲಾನುಭವಿಗೆ ತಲುಪುತ್ತಿದೆಯೇ, ಲೋಪಗಳಿವೆಯೇ ಎಂಬುದರ ಕುರಿತು ಗಮನಹರಿಸಿ ಎಂದರು.
ಪರಿಶೋಧನೆ ನಡೆಸಿ: ಜತೆಗೆ 14ನೇ ಹಣಕಾಸು ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೋಧನೆ ಮಾಡಬೇಕಾಗಿದ್ದು, ಕಾಮಗಾರಿಯ ಗುಣಮಟ್ಟ, ಜಾಬ್‌ಕಾರ್ಡ್ ನೀಡಿಕೆ, ಖಾತೆಗೆ ಹಣ ಸಂದಾಯ, ಉದ್ಯೋಗ ಸೃಜನಗೊಂಡಿರುವ ಕುರಿತು ಮತ್ತು ಕಾಮಗಾರಿಯನ್ನು ಕೂಲಿ ಕಾರ್ಮಿಕರಿಂದಲೇ ಮಾಡಿಸಿದ್ದಾರೆಯೇ ಎಂಬುದರ ಕುರಿತು ಪರಿಶೋಧನೆ ನಡೆಸಿ ಎಂದು ವಿವರಿಸಿದರು.
ಗುಣಮಟ್ಟ ನೋಡಿ ವರದಿ ತಯಾರಿಸಿ: ನರೇಗಾ ಕಾಮಗಾರಿಗಳ ಪರಿಶೋಧನೆ ನಡೆಸುವಾಗ ಎಲ್ಲೋ ಕುಳಿತು ಯಾರೋ ಹೇಳಿದ್ದನ್ನು ಬರೆದು ವರದಿ ತಯಾರಿಸಬೇಡಿ, ನೀವೇ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನೀಡಿರುವ ಅನುದಾನ, ಉದ್ಯೋಗ ಸೃಷ್ಟಿ, ಕಾಮಗಾರಿಯ ಗುಣಮಟ್ಟ ನೋಡಿ ವರದಿ ತಯಾರಿಸಿ ಎಂದು ಹೇಳಿದರು.
ಈ ಪರಿಶೋಧನೆ ಮುಗಿದ ನಂತರ ವರದಿ ತಯಾರಿಸಿ ಆ ವರದಿಯನ್ನು ಗ್ರಾಮಸಭೆಗಳಲ್ಲಿ ಅನುಮೋದನೆ ಪಡೆಯತಕ್ಕದ್ದು ಎಂದು ತಿಳಿಸಿದರು. ಸಭೆಯಲ್ಲಿ ತಾಲೂಕು ಸಂಯೋಜಕರಾದ ಬಂಗಾರಪೇಟೆಯ ರವಣಪ್ಪ, ಮುಳಬಾಗಿಲಿನ ವೆಂಕಟರಮಣ, ಕೋಲಾರದ ಭಾಷಾ, ಮಾಲೂರಿನ ಆಯಿಷಾ ಸುಲ್ತಾನ್, ಶ್ರೀನಿವಾಸಪುರದ ಶ್ರೀನಿವಾಸ್ ಮತ್ತಿತರರು ಹಾಜರಿದ್ದು, ಐದು ತಾಲೂಕುಗಳ ನೂರಕ್ಕೂ ಹೆಚ್ಚು ಗ್ರಾಪಂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.