ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿ
Team Udayavani, Mar 12, 2019, 7:43 AM IST
ಮಾಲೂರು: ಲೋಕಾಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುರುಕಾದ ತಾಲೂಕು ಅಡಳಿತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಯೂ ಆದ ತಹಶೀಲ್ದಾರ್ ಎಂ.ನಾಗರಾಜು, ತಮ್ಮ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ,
ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ನೀತಿ ಸಂಹಿತೆ ಉಲ್ಲಂಘನೆ ಮಾಡಿದರೆ ಗಮನಕ್ಕೆ ತರಬೇಕು. ತಾಲೂಕಿನ ಎಲ್ಲಾ ಸಂಪರ್ಕ ರಸ್ತೆಗಳಲ್ಲಿ ತಕ್ಷಣದಿಂದಲೇ ಚೆಕ್‌ಪೋಸ್ಟ್ ಅರಂಭಿಸಿ ಪ್ರತಿ ವಾಹನವನ್ನೂ ಕಡ್ಡಾಯವಾಗಿ ತಪಾಸಣೆ ನಡೆಸುವಂತೆ ಪೊಲೀಸ್ ಅಧಿಕಾರಿಗಳ ಜೊತೆಗೆ ಎಸ್‌ಎಸ್‌ಟಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಚುನಾವಣೆ ನೀತಿ ಸಂಹಿತೆ ತಕ್ಷಣದಿಂದ ಅರಂಭವಾಗಿರುವುದರಿಂದ ಜನಪ್ರತಿನಿಧಿಗಳು ಮೇಲೆ ಸೂಕ್ತ ಕ್ರಮವಹಿಸುವ ಜೊತೆಗೆ ಗುಪ್ತದಳದ ಅಧಿಕಾರಿಗಳು ಕಾಲಕಾಲಕ್ಕೆ ಚುನಾವಣಾ ಶಾಖೆಗೆ ಮಾಹಿತಿ ರವಾನಿಸುತ್ತಿರುವುದಿಂದ ಚುನಾವಣೆ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಭೇಕಾಗಿದೆ.
ರಾಜಕೀಯ ಮತ್ತು ಚುನಾಯಿತ ಜನಪ್ರತಿನಿಧಿಗಳು ಜನರಿಗೆ ಆಸೆ ಅಮಿಷ ಒಡ್ಡುವುದು ಕಂಡು ಬಂದರೆ ಕಡ್ಡಾಯವಾಗಿ ಪ್ರಕರಣ ದಾಖಲಿಸಬೇಕು. ಸೂಕ್ತ ದಾಖಲೆ ಸಂಗ್ರಹಿಸುವ ನಿಟ್ಟಿನಲ್ಲಿ ತಮ್ಮೊಂದಿಗೆ ವಿಡಿಯೋ ಚಿತ್ರೀಕರಣ ಸಿಬ್ಬಂದಿಗಳನ್ನು ಹೊಂದಿರಬೇಕಾಗಿದೆ ಎಂದರು. ಸಭೆಯಲ್ಲಿ ತಾಪಂ ಇಒ ಅನಂದ್, ಪೊಲೀಸ್ ವೃತ್ತನಿರೀಕ್ಷ ಬಿ.ಎಸ್.ಸತೀಶ್, ವಿವಿಧ ವಿಭಾಗಗಳ ಚುನಾವಣಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.