ಜಿಲ್ಲಾ ಉಸ್ತುವಾರಿ ಸಚಿವರ ಹುಡುಕಿಕೊಡಲು ಮನವಿ

ಮೂರು ತಿಂಗಳಾದ್ರೂ ಜಿಲ್ಲೆಗೆ ಬಂದಿಲ್ಲ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಎಸ್ಪಿಗೆ ದೂರು

Team Udayavani, May 12, 2019, 10:55 AM IST

KOLAR-TDY-4..

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಬಿ.ಕೃಷ್ಣಬೈರೇಗೌಡರು ಮೂರು ತಿಂಗಳಿನಿಂದ ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡಬೇಕೆಂದು ಎಸ್ಪಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಶನಿವಾರ ದೂರು ನೀಡಲಾಯಿತು.

ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಮೂರು ತಿಂಗಳಿನಿಂದ ಕಾಣೆಯಾಗಿದ್ದು, ಹುಡುಕಿ ಕೊಡಬೇಕೆಂದು ಎಸ್ಪಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಪ್ರೊ.ನಂಜುಂಡಸ್ವಾಮಿ ಸ್ಥಾಪಿತ)ಯಿಂದ ದೂರು ನೀಡಲಾಯಿತು.

ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ, ಜಿಲ್ಲೆಯು ಸತತ ಬರಗಾಲದಿಂದ ತತ್ತರಿಸಿದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣ ಬೆಳೆ ನಷ್ಟ ಉಂಟಾಗಿದ್ದು, ರೈತರು ಕಂಗಾಲಾಗಿದ್ದಾರೆ. ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆ ಇದೆ. ಜಿಲ್ಲಾಡಳಿತ, ಜಿಪಂ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗಲಿ ಉಂಟಾಗಿಲ್ಲವೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ದೂರಿದರು.

ಜಿಲ್ಲೆ ಮರೆತು ರಾಜಕೀಯದಲ್ಲಿ ತಲ್ಲೀನ: ವಾಸ್ತವವಾಗಿ ಹಳ್ಳಿಗಳಿಗೆ ಹೋಗಿ ನೋಡಿದರೆ ಜನ, ಜಾನುವಾರುಗಳಿಗೆ ಸಮಸ್ಯೆ ಇರುವುದು ತಿಳಿಯುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಬಿ.ಕೃಷ್ಣಬೈರೇಗೌಡರು ಲೋಕಸಭಾ ಚುನಾವಣೆಯಲ್ಲಿ ತಲ್ಲೀನರಾಗಿದ್ದು, ಅವರಿಗೆ ರಾಜಕೀಯ ಭವಿಷ್ಯ ನೀಡಿದ ಜಿಲ್ಲೆಯನ್ನು ಮರೆತು ಬರೀ ರಾಜಕಾರಣಕ್ಕಾಗಿ ಸೀಮಿತವಾಗಿದ್ದಾರೆಯೇ ಅಥವಾ ಯಾರಾದರೂ ಅಪಹರಿಸಿದ್ದಾರೆಯೇ ಎಂದು ಜಿಲ್ಲೆಯ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಕೆಡಿಪಿ ಸಭೆಯನ್ನೂ ನಡೆಸಿಲ್ಲ: ಸಚಿವರು ಮೂರು ತಿಂಗಳಿನಿಂದ ಜಿಲ್ಲೆಗೆ ಭೇಟಿ ನೀಡದೆ, ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಗಮನ ಹರಿಸದೆ, ಎಲ್ಲಾ ಇಲಾಖೆಯ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯನ್ನೂ ನಡೆಸದೆ ಇರುವುದರಿಂದ ಸಚಿವರು ಕಾಣೆಯಾಗಿರಬಹುದೆಂದು ಅವರನ್ನು ಹುಡುಕಿಕೊಡಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸಂಘದಿಂದ ದೂರು ನೀಡಿ ಕೋರಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ನಂದಕುಮಾರ್‌, ಮುಳಬಾಗಿಲು ತಾಲೂಕು ಅದ್ಯಕ್ಷ ಎಲ್.ಎನ್‌.ಬಾಬು, ಶ್ರೀನಾಥ್‌, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ದೊಡ್ಡಕುರುಬರಹಳ್ಳಿ ಶಂಕರಪ್ಪ, ಜಿಲ್ಲಾ ಮುಖಂಡರಾದ ಕೊಲದೇವಿ ಗೋಪಾಲಕೃಷ್ಣಮೂರ್ತಿ, ಬಂಗಾರಪೇಟೆ ತಾಲೂಕು ಅಧ್ಯಕ್ಷ ಕದಿರೇನಹಳ್ಳಿ ಶ್ರೀನಿವಾಸ್‌, ಕೋಲಾರ ತಾಲೂಕು ಅಧ್ಯಕ್ಷ ಶಿಳ್ಳಂಗೆರೆ ವೇಣುಗೋಪಾಲ್, ಕೊಲದೇವಿ ಗಂಗಾಧರ್‌, ತೇರಹಳ್ಳಿ ಚಂದ್ರಪ್ಪ, ಕೋಲಾರ ನಗರ ಸಂಚಾಲಕ ಜಬೀವುಲ್ಲಾ, ಕಾರ್ಮಿಕ ಘಟಕದ ಫಿರ್ದೋಸ್‌, ಅಬೀದ್‌ ಖಾನ್‌, ಹುಸೇನ್‌ ನಿಜಾಂ ಪಾಷ, ರಾಮಚಂದ್ರ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.