ಅಧಿಕಾರ ಉಳಿಸಿಕೊಳ್ಳಲು ಜನಹಿತ ಮರೆತ ಸರ್ಕಾರ

ಬರದಲ್ಲೂ ರೇಸಾರ್ಟ್‌ನಲ್ಲಿ ಸಿಎಂ, ಶಾಸಕರ ಮೋಜು ಮಸ್ತಿ ದಲಿತ ಸಮಾಜ ಸೇನೆಯಿಂದ ಪ್ರತಿಭಟನೆ

Team Udayavani, May 4, 2019, 10:27 AM IST

kolar-3-tdy..

ಬಂಗಾರಪೇಟೆ: ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ಮಳೆ ಕೃಪೆ ತೋರದೆ ರೈತರು ಕಂಗಾಲಾಗಿದ್ದಾರೆ. ಬೆಳೆದ ಬೆಳೆಗಳೆಲ್ಲ ನಾಶವಾಗಿ ಸಾಲದ ಶೂಲಕ್ಕೆ ಬಲಿಯಾಗಿದ್ದಾರೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿ, ಶಾಸಕರು ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ. ಜನಸಾಮಾನ್ಯರ ಸಮಸ್ಯೆ ಮರೆತಿರುವ ಸರ್ಕಾರ ವಜಾಗೊಳಿಸಿ ಪ್ರಜಾಪ್ರಭುತ್ವ ಉಳಿಸಿಬೇಕೆಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್‌ ರಾಷ್ಟಪತಿ ಅವರನ್ನು ಆಗ್ರಹಿಸಿದ್ದಾರೆ.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಸಮೀಪಿಸುತ್ತಿದ್ದರೂ ರಾಜ್ಯದ ಜನತೆಗೆ ಯಾವುದೇ ರೀತಿ ಅನುಕೂಲವಾಗುತ್ತಿಲ್ಲ. ದೀನ ದಲಿತರು, ರೈತರು, ಅಲ್ಪಸಂಖ್ಯಾತರಿಗೆ ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ, ಕೇವಲ ಅವರವರ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಸಾರ್ವಜನಿಕರ ಹಿತ ಕಾಪಾಡುವಲ್ಲಿ ವಿಫ‌ಲರಾಗಿದ್ದಾರೆ, ಸಮ್ಮಿಶ್ರ ಪಕ್ಷ ಕೆಡವಲು ವಿರೋಧಪಕ್ಷದ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ. ಇತ್ತ ಕುಮಾರಸ್ವಾಮಿ ತಮ್ಮ ಮಗನ ಗೆಲುವಿಗೆ ಶತ ಪ್ರಯತ್ನ ಪಡುತ್ತಿದ್ದಾರೆ ಎಂದು ದೂರಿದರು.

ಸದಸ್ಯತ್ವ ರದ್ದು ಮಾಡಿ: ಪ್ರಜೆಗಳಿಂದ ಪ್ರಜೆಗಳಿಗಾಗಿ ನಡೆಯಬೇಕಾದ ಸರ್ಕಾರಗಳು ಇಂದು ಹಣದಿಂದ ಹಣಕ್ಕಾಗಿ ಹಣಕ್ಕೋಸ್ಕರ ಆಡಳಿತ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡಿ ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಬಲಿಪಶು ಮಾಡಿಕೊಳ್ಳುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರಜಾಪ್ರಭುತ್ವವನ್ನು ಆಳು ಮಾಡುತ್ತಿರುವ 224 ಶಾಸಕರ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ಕೈಕಟ್ಟಿ ಕೂತಿದೆ: ರಾಜ್ಯ ತೀವ್ರವಾದ ಬರಗಾಲಕ್ಕೆ ಸಿಲುಕಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಮತ್ತು ಮೇವಿಗೆ ಹಾಹಾಕಾರವಿದೆ. ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರತಿ ದಿನ ಮಹಿಳೆ, ವಿದ್ಯಾರ್ಥಿಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರ ಸಾವುಗಳು, ಕೊಲೆಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಆರೋಪಿಸಿದರು.

ಪ್ರಯೋಜನವಿಲ್ಲ: ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ನೀಡುತ್ತಿಲ್ಲ. ಯುವಕರು ನಿರುದ್ಯೋಗ ಸಮಸ್ಯೆಯಿಂದ ನರಳಾಡುತ್ತಿದ್ದಾರೆ, ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫ‌ಲರಾಗಿದ್ದಾರೆ. ಇತ್ತೀಚೆಗೆ ಖಾಸಗೀಕರಣ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ಸಹ ವಿಫ‌ಲರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಿಂದ ಯಾವುದೇ ರೀತಿ ಅಭಿವೃದ್ಧಿ ನಡೆಯುತ್ತಿಲ್ಲ, ಕೇವಲ ಅವರ ಅಧಿಕಾರ ಉಳಿಸಿ ಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ದೂರಿದರು.

ಸಂವಿಧಾನವನ್ನು ಹೆಚ್ಚು ಬಲಪಡಿಸುತ್ತಾ ಯಾವುದೇ ವರ್ಗಕ್ಕೆ ತಾರತಮ್ಯಲ್ಲದೆ, ಎಲ್ಲರಿಗೂ ಸಮಾನ ಹಕ್ಕು ನೀಡಬೇಕು ಎಂದು ಒತ್ತಾಯಿಸಿದರು. ದಲಿತ ಸಮಾಜಸೇನೆಯ ಮುಖಂಡ ಹುಣಸನಹಳ್ಳಿ ರಮೇಶ್‌, ಹುಣಸನಹಳ್ಳಿ ಮಂಜುನಾಥ್‌, ಜಿ.ಶ್ರೀನಿವಾಸ್‌, ಸಂಜಯ್‌ ಗಾಂಧಿ ನಗರ ಹಾಸ್ಟೆಲ್ ಶ್ರೀನಿವಾಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

7-uv-fusion

UV Fusion: ಹಿರಿಜೀವಗಳ ಕಾಳಜಿ ವಹಿಸಿ

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.