ಸೋಂಕಿತರು ಗುಣಮುಖರಾಗುವುದೇ ಗುರಿ


Team Udayavani, May 14, 2020, 5:28 AM IST

sonkitaru

ಕೋಲಾರ: ಜಿಲ್ಲೆಯಲ್ಲಿ ಪತ್ತೆಯಾಗಿರುವ ಸೋಂಕಿತರನ್ನು ಆದಷ್ಟು ಬೇಗ ಗುಣಮುಖರನ್ನಾಗಿಸಿ ವಾಪಸ್‌ ಕಳುಹಿಸುವುದು ಜಿಲ್ಲಾಡಳಿತದ ಮುಂದಿರುವ ಸವಾಲು ಹಾಗೂ ಗುರಿ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.  ಈ  ಸಂಬಂಧ ನಗರದಲ್ಲಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಜಿಲ್ಲೆಯಲ್ಲಿ ಪತ್ತೆಯಾಗಿರುವ ಐವರು ಸೋಂಕಿತರು ಯಾವುದೇ ರೋಗಲಕ್ಷಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿಲ್ಲ, ಈ ಐವರನ್ನು ಗುಣಮುಖರನ್ನಾಗಿಸಿ  ಯಾವುದೇ ಸಾವು ಸಂಭವಿಸದಂತೆ ಚಿಕಿತ್ಸೆ ನೀಡುವುದು ಸದ್ಯದ ಆದ್ಯತೆಯಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಂದ ಹೊಸ ಪ್ರಕರಣ ಉದ್ಭವವಾಗದಂತೆ ಮಾಡುವುದು ಜಿಲ್ಲಾಡಳಿತದ ಮುಖ್ಯ ಗುರಿಯಾಗಿದೆ ಎಂದು ವಿವರಿಸಿದರು.

ಸಂಪರ್ಕದಲ್ಲಿರುವವರ ಮಾಹಿತಿ:ಕೊರೊನಾ ಪಾಸಿಟಿವ್‌ ಬಂದ ಪ್ರದೇಶಗಳನ್ನು ಕಂಟೈನ್‌ ಮೆಂಟ್‌ ಜೋನ್‌ ಮಾಡಲಾಗಿದ್ದು, ಇವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 24 ಮಂದಿಯನ್ನೂ ಆರ್‌.ಜಾಲಪ್ಪ ಕೊವಿಡ್‌-19 ಆಸ್ಪತ್ರೆಗೆ  ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರೊಂದಿಗೆ ದ್ವಿತೀಯ ಸಂಪರ್ಕದಲ್ಲಿರುವವರ ಮಾಹಿತಿಯನ್ನು ಕಲೆಹಾಕುತ್ತಿರುವುದಾಗಿ ತಿಳಿಸಿದರು.

ಸದ್ಯಕ್ಕೆ ಸೋಂಕಿತರು ಆರೋಗ್ಯ:ಪಿ-906 (22 ವರ್ಷ) ಮೇ 8 ರಂದು ಜಿಲ್ಲೆಗೆ ಸರ್ಕಾರಿ  ಬಸ್‌ನಲ್ಲಿ ತುಮಕೂರು, ಚಿಕ್ಕಬಳ್ಳಾಪುರ ಮೂಲಕ ಬಂದಿದ್ದಾರೆ. ಪಿ-907 (70 ವರ್ಷ)- ಲಾಕ್‌ಡೌನ್‌ ಸಡಿಲಿಕೆಯಾದ ನಂತರ ಮೇ 7 ರಂದು ಬೆಂಗಳೂರಿನ ಜೆ.ಪಿ.ನಗರದಿಂದ ಬಸ್‌ನಲ್ಲಿ ಬಂದಿದ್ದಾರೆ. ಪಿ-908 (22 ವರ್ಷ) ಚೆನ್ನೈನಿಂದ,  ಪಿ-909 ಮತ್ತು 910 ಒಡಿಶಾದಿಂದ ಬಂದವರಾಗಿದ್ದಾರೆ. ಸೋಂಕಿತರನ್ನು ಪ್ರತ್ಯೇಕ ಆ್ಯಂಬುಲೆನ್ಸ್‌ನಲ್ಲಿ ಕೊವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಸೋಂಕಿತರು ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಂಪರ್ಕದಲ್ಲಿದ್ದವರು ಆಸ್ಪತ್ರೆಗೆ ದಾಖಲು: ರೋಗಿ 906ರ ಜೊತೆಗೆ ಏಳು ಮಂದಿ, 907ರ ಜೊತೆಗೆ 6 ಜನ, 908ರ ಜೊತೆಗೆ ಇಬ್ಬರು, 909ರ ಜೊತೆಗೆ 6 ಜನ ಹಾಗೂ ರೋಗಿ 910ರ ಜೊತೆಗೆ ಮೂವರು ಸೇರಿ ಒಟ್ಟು 24 ಜನರು ಪ್ರಾಥಮಿಕ  ಸಂಪರ್ಕ ಹೊಂದಿದ್ದು, ಇವೆಲ್ಲರನ್ನೂ ಜಾಲಪ್ಪ ಕೊವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿತೀಯ ಸಂಪರ್ಕ ಹೊಂದಿರುವವರ ಮಾಹಿತಿ ಕಲೆಹಾಕುವ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿಸಿದರು.

ಕೊರೊನಾ ದೃಢಪಟ್ಟ  ಪ್ರಕರಣಗಳನ್ನು ಸರ್ವೇ ತಂಡ ಗುರುತಿಸಿತ್ತು. ಅಲ್ಲದೆ, ಹೋಂ ಕ್ವಾರಂಟೆ„ನ್‌ನಲ್ಲಿ ಇಡಲಾಗಿತ್ತು ಎಂದು ಸ್ಪಷ್ಟಪಡಿಸಿದ ಅವರು, ಕೊರೊನಾ ಪಾಸಿಟಿವ್‌ ಬಂದ ಪ್ರದೇಶಗಳನ್ನು ಕಂಟೊನ್‌ಮೆಂಟ್‌ ಜೋನ್‌ ಮಾಡಲಾಗಿದೆ ಎಂದು ಹೇಳಿದರು ಅಪರ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ, ಡಿಎಚ್‌ಒ ಡಾ.ಎಸ್‌.ಎನ್‌.ವಿಜಯಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.