ದಾನಿಗಳ ಸಹಕಾರದಿಂದ ಸರ್ಕಾರ ಉಳಿದಿದೆ

ಕೋವಿಡ್-19 ಸಂಕಷ್ಟದಲ್ಲೂ ಸರ್ಕಾರ ವಿರುದ್ಧ ಮಾಜಿ ಸಚಿವ ಎಚ್‌.ಎಂ.ರೇವಣ್ಣ ರಾಜಕೀಯ ಟೀಕೆ

Team Udayavani, Apr 21, 2020, 4:05 PM IST

ದಾನಿಗಳ ಸಹಕಾರದಿಂದ ಸರ್ಕಾರ ಉಳಿದಿದೆ

ಕೋಲಾರ: ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಜನತೆಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಆರೋಪಿಸಿದರು. ಕೋವಿಡ್-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಗೆ ಆಗಮಿಸಿದ್ದ ವೇಳೆ ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಕಾಂಗ್ರೆಸ್‌ ಜಾರಿಗೆ ತಂದಿದ್ದ ನರೇಗಾ, ಅನ್ನ ಭಾಗ್ಯ, ಕ್ಷೀರಭಾಗ್ಯ, ಕಾರ್ಮಿಕರ ನಿಧಿಗೆ ನೀಡಿದ್ದ ಅನುದಾನದಿಂದಲೇ ಇಂದು ಲಾಕ್‌ ಡೌನ್‌ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಿದೆ ಎಂದು ಹೇಳಿಕೊಂಡರು. ಸಂಘ ಸಂಸ್ಥೆಗಳಿಂದ ಸಹಾಯ: ಬಿಜೆಪಿಯಿಂದ ಯಾವುದೇ ಕೊಡುಗೆ ಇಲ್ಲದಿದ್ದರೂ ಪ್ರಚಾರಕ್ಕಾಗಿ ಏನೇನೋ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆದಿರುವ ಘಟನೆಗಳನ್ನು ಗಮನಿಸಿದಾಗ ಒಂದು ಸಮಾಜವನ್ನು ಗುರಿ ಮಾಡಿ ಕೊಂಡಿದ್ದಾರೆ ಎಂದು ಲೇವಡಿ ಮಾಡಿದ ಅವರು, ದಾನಿಗಳಿಂದ ಸರಕಾರ ಉಳಿದಿದೆ, ಸಂಘ ಸಂಸ್ಥೆಗಳು ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.

ಪಾದರಾಯನಪುರ ದುಷ್ಕೃತ್ಯಕ್ಕೆ ಖಂಡನೆ:
ರಾಜ್ಯದಲ್ಲಿ ಕೋವಿಡ್-19 ದಿಂದ ಕಷ್ಟದ ಪರಿಸ್ಥಿತಿ ಎದುರಾಗಿದ್ದರೂ ಆರೋಗ್ಯ ಹಾಗೂ ವೈದ್ಯಕೀಯ ಸಚಿವರಲ್ಲಿ ಸ್ವಾಮರಸ್ಯವಿಲ್ಲದಾಗಿದೆ. ಇಬ್ಬರ ಹೇಳಿಕೆ, ಮಾಹಿತಿಗಳಲ್ಲಿ ಗೊಂದಲವಿದೆ ಎಂದು ದೂರಿದರು. ಇನ್ನು ಪಾದರಾಯನಪುರದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ದುಷ್ಕೃತ್ಯವನ್ನು ಯಾರೇ ಎಸಗಿದ್ದರೂ ಅದನ್ನು ಖಂಡಿಸುವುದಾಗಿ ತಿಳಿಸಿದರು.

5 ತಂಡಗಳ ರಚನೆ: ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್‌ ಅವರು ರಾಜ್ಯದ ನಾಲ್ಕು ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ನಗರ ವಿಭಾಗವನ್ನು ರಚಿಸಿ 5 ತಂಡಗಳನ್ನು ರಚನೆ ಮಾಡಿದ್ದಾರೆ. ನನಗೂ ಒಂದು ತಂಡದ ಜವಾಬ್ದಾರಿ ನೀಡಿದ್ದು, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕೋಲಾರದಲ್ಲಿ ಸಮೀಕ್ಷೆ ನಡೆಸುತ್ತಿದ್ದೇವೆ. ಜಿಲ್ಲೆಯ ಜಿಲ್ಲೆಯ ಮುಖಂಡರೊಂದಿಗೆ ಚರ್ಚಿಸಿದ್ದು, 11 ಅಂಶಗಳ ವರದಿಯನ್ನು ಪಡೆದುಕೊಂಡಿದ್ದೇವೆ ಎಂದು ಹೇಳಿದರು. ಜಿಲ್ಲೆಯಲ್ಲಿಯೂ ಕೋವಿಡ್‌-19 ಅಧ್ಯಕ್ಷರನ್ನಾಗಿ ಶಾಸಕ ನಂಜೇಗೌಡರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅವರೂ ಪ್ರವಾಸ ಮಾಡಿ ಮಾಹಿತಿ ಪಡೆದಿದ್ದು, ಜಿಲ್ಲೆಯು ಸುರಕ್ಷಿತವಾಗಿದೆ. ವೈದ್ಯಕೀಯ ಸೇವೆ ಎಲ್ಲವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ, ಮಾಜಿ ಸಚಿವ ನಿಸಾರ್‌ ಅಹಮದ್‌, ಮುಖಂ ಡರಾದ ಪ್ರಸಾದ್‌ಬಾಬು, ಉದಯ್‌ಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.