ಕಾಮಗಾರಿ ಮುಗಿದ್ರೂ ಕಟ್ಟಡಕ್ಕಿ ಉದ್ಘಾಟನೆ ಭಾಗ್ಯ

ಫ‌ರ್ನಿಚರ್‌ ಅಳವಡಿಕೆಗೆ ಇಲ್ಲ ಹೆಚ್ಚುವರಿ ಅನುದಾನ „ ಶಾಸಕ, ಸಂಸದರು ಉದ್ಘಾಟನೆಗೆ ಸಮಯ ನೀಡುತ್ತಿಲ್ಲ

Team Udayavani, Nov 13, 2021, 12:46 PM IST

ಕಾಮಗಾರಿ ಮುಗಿದ್ರೂ ಕಟ್ಟಡಕ್ಕಿ ಉದ್ಘಾಟನೆ ಭಾಗ್ಯ

ಬಂಗಾರಪೇಟೆ: ಎರಡು ವರ್ಷಗಳಿಂದ ಕೊರೊನಾ ಹಾವಳಿ ಕಾರಣವೊಡ್ಡಿ ಕೋಟಿ ರೂ.ನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕಚೇರಿ ನೂತನ ಕಟ್ಟಡವು ಜನಪ್ರತಿನಿಧಿಗಳ ರಾಜಕೀಯ ಕಿತ್ತಾಟದಿಂದ ಉದ್ಘಾಟನೆ ಭಾಗ್ಯ ಕಂಡಿಲ್ಲ.

ಇದೇ ವೇಳೆ ಮೂರು ವರ್ಷಗಳ ಹಿಂದೆಯೇ ವಾಲ್ಮೀಕಿ ಭವನ ಬಳಕೆಗೆ ಸಿದ್ಧವಾಗಿದ್ದರೂ ಉದ್ಘಾಟನೆ ಕಂಡಿಲ್ಲ, ಈಗ ಲೋಕೋಪಯೋಗಿ ಇಲಾಖೆ ಎಇಇ ಕಚೇರಿ ಸಹ ಕಾರ್ಯನಿರ್ವಹಣೆಗೆ ಸಜ್ಜಾಗಿದ್ದರೂ ಸ್ಥಳೀಯ ಶಾಸಕರು ಮತ್ತು ಸಂಸದರ ನಡುವೆ ಹೊಂದಾಣಿಕೆ ಇಲ್ಲದೆ, ಉದ್ಘಾಟನೆಗೆ ಸಮಯ ನೀಡದ ಕಾರಣ, ಕಚೇರಿ ಪಾಳು ಬಿದ್ದಿದೆ. ಪ್ರಸ್ತುತ ಈ ಕಚೇರಿಯು ಎಇಇಗೆ ನೀಡಿರುವ ಮನೆಯಲ್ಲಿ ನಡೆಯುತ್ತಿರುವುದು ವಿಪರ್ಯಾಸ.

ಹೆಚ್ಚುವರಿ ಅನುದಾನ ನೀಡಿಲ್ಲ: ನೂತನ ಕಟ್ಟಡಕ್ಕೆ ಫ‌ರ್ನಿಚರ್‌ ಅಳವಡಿಸಲು ಅನುದಾನದ ಕೊರತೆ ಇದ್ದು, ಹಣ ಬಿಡುಗಡೆ ಮಾಡಲು ಪಿಡಬ್ಲೂéಡಿ ಸಚಿವರಾಗಿದ್ದ ಗೋವಿಂದ ಕಾರಜೋಳಗೆ 2 ವರ್ಷಗಳಿಂದ ಮನವಿ ಮಾಡಿದ್ದರೂ ಪ್ರಯೋಜನ ವಾಗಿಲ್ಲ. ಹೀಗಾಗಿ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಕಂಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ:- ಮೋದಿ ವಿಶ್ವ ನಾಯಕ: ಜಾಧವ

 ಕಚೇರಿಗಳಿಗೆ ಸ್ವಂತ ಕಟ್ಟಡ: ಪಟ್ಟಣದಲ್ಲಿನ ಸರ್ಕಾರಿ ಇಲಾಖೆಗಳು ಈ ಹಿಂದೆ ಬಾಡಿಗೆ ಕಟ್ಟಡಗಳಲ್ಲಿ ಇದ್ದವು. ಪ್ರತಿ ಕಚೇರಿ ಒಂದೊಂದು ದಿಕ್ಕಿನಲ್ಲಿದ್ದವು, ಸಾರ್ವಜನಿಕರಿಗೆ ಕಚೇರಿ ಪತ್ತೆ ಮಾಡುವುದೇ ದೊಡ್ಡ ಸಾಹಸವಾಗಿತ್ತು. ಇದನ್ನು ಮನಗಂಡು ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ಸ್ವಂತ ಕಟ್ಟಡ ಒದಗಿಸಿದ್ದಾರೆ. ಆದರೂ, ಕಾರ್ಮಿಕ ಇಲಾಖೆ, ಸಿಡಿಪಿಒ, ರೇಷ್ಮೆ ಮತ್ತು ಕೃಷಿ ಇಲಾಖೆ ಕಚೇರಿ ಮಾತ್ರ ಈಗಲೂ ಬಾಡಿಗೆ ಕಟ್ಟಡದಲ್ಲಿದೆ.

ಉದ್ಘಾಟನೆ ಆಗಿಲ್ಲ: ಲೋಕೋಪಯೋಗಿ ಇಲಾಖೆ ಹಳೇ ಕಟ್ಟಡ ಕೆಡವಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿ ಹಲವು ತಿಂಗಳು ಕಳೆದಿದೆ. ಶಾಸಕರು ಉದ್ಘಾಟನೆಗೆ ಸಿದ್ಧವಾಗಿದ್ದಾರೆ. ಆದರೆ, ಶಿಷ್ಟಾಚಾರದ ಪ್ರಕಾರ ಸಂಸದರನ್ನೂ ಕಟ್ಟಡ ಉದ್ಘಾಟನೆಗೆ ಆಹ್ವಾನಿಸಬೇಕು. ಅದರಂತೆ ಅಧಿಕಾರಿಗಳು ಸಂಪರ್ಕಿಸಿದ್ದು, ಅವರು ದಿನಾಂಕ ನಿಗದಿಪಡಿಸುವಲ್ಲಿ ವಿಳಂಬ ಮಾಡಿದ್ದರಿಂದ ಉದ್ಘಾಟನೆ ಮುಂದಕ್ಕೆ ಹೋಗುತ್ತಿದೆ ಎನ್ನಲಾಗಿದೆ.

ಸಂಸದರು ಮಾಡುವ ಅಭಿವೃದ್ಧಿ ಕಾರ್ಯಕ್ಕೆ ಶಾಸಕರ ಬೆಂಬಲಿಗರು, ಶಾಸಕರ ಕಾಮಗಾರಿಗಳಿಗೆ ಸಂಸದರ ಬೆಂಬಲಿಗರು ಅಡ್ಡಿಪಡಿಸಿದ್ದರಿಂದ ಪರಿಣಾಮ ಲೋಕೋಪಯೋಗಿ ಕಟ್ಟಡ ಹಾಗೂ ವಾಲ್ಮೀಕಿ ಭವನ ಉದ್ಘಾಟನೆಗೆ ಸಿದ್ಧವಾಗಿದ್ದರೂ ಸಮಯ ನಿಗದಿ ಮಾಡಲು ಸಂಸದರು ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿದ್ದಾರೆಂಬ ಆರೋಪ ಶಾಸಕರ ಬೆಂಬಲಿಗರದ್ದಾಗಿದೆ. ಈಗ ಎಂಎಲ್ಸಿ ಚುನಾವಣೆ ಘೋಷಣೆಯಿಂದ ಉದ್ಘಾಟನೆ ಮತ್ತಷ್ಟು ವಿಳಂಬ ವಾಗುವುದು ಗ್ಯಾರಂಟಿಯಾಗಿದೆ. ಎಇಇ ಕಚೇರಿ ಉದ್ಘಾಟನೆ ವಿಳಂಬದಿಂದ ಕಚೇರಿ ಸುತ್ತ ಕಸದ ರಾಶಿ ಹಾಕಲಾಗುತ್ತಿದೆ. ಅನೈತಿಕ ಚಟುವಟಿಕೆಗಳ ತಾಣ ವಾಗುವ ಮೊದಲು ಕಟ್ಟಡ ಉದ್ಘಾಟನೆ ಮಾಡಬೇಕು ಎಂದು ತಾಲೂಕಿನ ಜನರು ಒತ್ತಾಯಿಸಿದ್ದಾರೆ.

“ಲೋಕೋಪ ಯೋಗಿ ಇಲಾಖೆ ಎಇಇ ಆಡಳಿತ ಕಚೇರಿ ನೂತನ ಕಟ್ಟಡಕ್ಕೆ ಫ‌ರ್ನಿಚರ್‌ ಕೊರತೆ ಇದೆ. ಕೊರೊ ನಾ ಹಾವಳಿಯಿಂದ 2 ವರ್ಷದಿಂದ ಅನು ದಾನ ಬಿಡುಗಡೆ ಮಾಡುತ್ತಿಲ್ಲ. ಸದ್ಯಕ್ಕೆ ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ನಂತರ ಉದ್ಘಾ ಟನೆ ಮಾಡಲು ಕ್ರಮಕೈಗೊಳ್ಳಲಾಗುವುದು.” – ಚಂದ್ರಶೇಖರ್‌, ಕಾರ್ಯಪಾಲಕ ಎಂಜಿನಿಯರ್‌, ಪಿಡಬ್ಲ್ಯೂಡಿ ಕೋಲಾರ

 – ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.