ಕೋಲಾರಮ್ಮ ಪಡೆ ಶೀಘ್ರ ಸೇವೆಗೆ

ಮಹಿಳಾ ಪೊಲೀಸರಿಗೆ ಮೂರನೇ ಹಂತದಲ್ಲಿ ಕರಾಟೆ, ಕಮಾಂಡೋ ತರಬೇತಿ

Team Udayavani, Jun 19, 2019, 4:18 PM IST

kolar-tdy-3..

ಕೋಲಾರಮ್ಮ ಪಡೆ ತರಬೇತಿ ಪಡೆದ ಸಿಬ್ಬಂದಿ ನಾಗರಿಕ ಸೇವೆಗೆ ಸಜ್ಜಾಗಿರುವುದು.

ಕೋಲಾರ: ಜಿಲ್ಲೆಯ ವಿವಿಧ ಠಾಣೆಗಳಲ್ಲಿರುವ ಮಹಿಳಾ ಪೇದೆಗಳಿಗೆ ಆಧುನಿಕ ತರಬೇತಿ ನೀಡುವ ಮೂಲಕ ಕೋಲಾರಮ್ಮ ಪಡೆ ರೂಪಿಸಲಾಗುತ್ತಿದ್ದು, ಶೀಘ್ರವೇ ನಾಗರಿಕರ ಸೇವೆಗೆ ಸಜ್ಜುಗೊಳಿಸಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ಜಿಲ್ಲೆಯ ವಿವಿಧ ಠಾಣೆಗಳಲ್ಲಿರುವ ಮಹಿಳಾ ಪೇದೆಗಳಿಗೆ ಈಗಾಗಲೇ ಮೂರು ತಂಡಗಳಲ್ಲಿ ತರಬೇತಿ ನೀಡಲಾಗಿದ್ದು, ಕೊನೆಯ ತಂಡದ ತರಬೇತಿ ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆಯುತ್ತಿದೆ.

ನಿರ್ಗಮಿತ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರೋಹಿಣಿ ಸಫೆಟ್ ಕಟೋಚ್ರ ಆಸಕ್ತಿಯ ಫ‌ಲವಾಗಿ ಈ ತರಬೇತಿ ಕಾರ್ಯಕ್ರಮ ರೂಪುಗೊಂಡಿದ್ದು, ಮಹಿಳಾ ಪೇದೆಗಳು ಕೇವಲ ಕಚೇರಿ ಕೆಲಸಗಳಿಗೆ ಸೀಮಿತವಾಗಬಾರದು ಎನ್ನುವುದೇ ಕೋಲಾರಮ್ಮ ಪಡೆಯ ಮುಖ್ಯ ಉದ್ದೇಶವಾಗಿದೆ. ಕಾನೂನು ಸುವ್ಯವಸ್ಥೆ ಸೇವೆಗೆ ಅಗತ್ಯವಾಗಿರುವ ಎಲ್ಲಾ ರೀತಿಯ ಆಧುನಿಕ ತರಬೇತಿಯನ್ನು ಮಹಿಳಾ ಪೇದೆಗಳಿಗೆ ಜಿಲ್ಲಾ ಸಶಸ್ತ್ರಪಡೆಯ ಅಧಿಕಾರಿ ಮತ್ತು ಸಿಬ್ಬಂದಿ ಮೂಲಕ ನೀಡಲಾಗುತ್ತಿದೆ.

ಕರಾಟೆ – ಬೈಕ್‌ ತರಬೇತಿ: ಮಾನಸಿಕ ಮತ್ತು ದೈಹಿಕವಾಗಿ ಸಜ್ಜುಗೊಳಿಸಲು ಪ್ರತಿನಿತ್ಯ ಬೆಳಗಿನ ಜಾವ ಕರಾಟೆ ತರಬೇತುದಾರ ಶ್ರೀನಿವಾಸ್‌ ನೇತೃತ್ವದಲ್ಲಿ ತರಬೇತಿ ನೀಡಲಾಗುತ್ತಿದೆ. ಆನಂತರ ದಿನದ ಎರಡು ಹಂತಗಳಲ್ಲಿ ಬೈಕ್‌ ಸವಾರಿ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ತಿಳಿಸಲಾಗುತ್ತದೆ. ಹೀಗೆ ತರಬೇತಿ ಪಡೆದ ಮಹಿಳಾ ಪೇದೆಗಳಿಗೆ ಇಲಾಖೆಯ ಕಡೆಯಿಂದಲೇ ವಾಹನ ಚಾಲನಾ ಪರವಾನಗಿ ಮಾಡಿಸಲಾಗುತ್ತಿದೆ. ಸಂಕಷ್ಟದ ಸನ್ನಿವೇಶ ನಿಭಾಯಿಸಲು ಕೋಲಾರಮ್ಮ ಪಡೆಯ ಶಿಬಿರಾರ್ಥಿಗಳಿಗೆ ಅತ್ಯಾಧುನಿಕ ಕಮಾಂಡೋ ತರಬೇತಿ ಪರಿಚಯಿಸಲಾಗುತ್ತಿದೆ.

ಎಲ್ಲರಿಗೂ ತರಬೇತಿ: ಕಾನೂನು ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿ, ಬಿಡಲಿ, ಪ್ರತಿಯೊಬ್ಬ ಮಹಿಳಾ ಪೇದೆಯು ಕೋಲಾರಮ್ಮ ಪಡೆ ತರಬೇತಿ ಕಡ್ಡಾಯಗೊಳಿ ಸಲಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಮಹಿಳಾ ಪೇದೆಗಳಿಗೆ ತರಬೇತಿ ನೀಡಲಾಗಿದೆ. ಮೂರನೇ ತಂಡದ ತರಬೇತಿ ಈ ವಾರದಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಕೋಲಾರಮ್ಮ ಪಡೆ ಇಲಾಖೆಯಲ್ಲಿ ಕಾನೂನು ಸುವ್ಯವಸ್ಥೆ ಸೇವೆಗೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಮಹಿಳೆಯರ ರಕ್ಷಣೆ: ತರಬೇತಿ ಪಡೆಯುತ್ತಿರುವ ಸಿಬ್ಬಂದಿಯ ಮೊದಲ ಆದ್ಯತೆ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವುದೇ ಆಗಿದೆ. ಮಹಿಳಾ ಕಾಲೇಜು, ಸಾರ್ವಜನಿಕ ಬಸ್‌ ನಿಲ್ದಾಣಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸಲಿರುವ ಈ ಪಡೆಯ ಸಿಬ್ಬಂದಿಯು ಎಂಥದ್ದೇ ಸನ್ನಿವೇಶವನ್ನು ಧೈರ್ಯವಾಗಿ ನಿಭಾಯಿಸುವಂತೆ ತರಬೇತಿ ನೀಡಲಾಗಿದೆ.

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.