ಗಾಂಧಿ ಜೀವನವೇ ಒಂದು ಸಂದೇಶ
Team Udayavani, Nov 4, 2019, 4:09 PM IST
ಕೋಲಾರ: ಮಹಾತ್ಮ ಗಾಂಧೀಜಿ ಅವರು ಬದುಕಿದ ಜೀವನದ ಹಾದಿಯೇ ಒಂದು ಸಂದೇಶವಾಗಿದೆ. ಇದನ್ನು ಪ್ರತಿ ಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿ ರದಲ್ಲಿರುವ ಮಾಸ್ತಿ ಡಿವಿಜಿ ಪ್ರತಿಷ್ಠಾನದ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹಾತ್ಮ ಗಾಂಧಿ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಛಾಯಾಚಿತ್ರ ಪ್ರದರ್ಶನದಲ್ಲಿ ಗಾಂಧೀಜಿ ಅವರ ಬಾಲ್ಯ ದಿಂದ ಹಿಡಿದು ಅವರ ಸ್ವಾತಂತ್ರ್ಯ ಹೋರಾಟದ ಹಾದಿಯವರೆಗೆ ನಡೆದು ಬಂದ ವಿವಿಧ ಘಟ್ಟಗಳ ಕುರಿತ ಮಹತ್ವ ವಾದ ಛಾಯಾಚಿತ್ರಗಳು ಹಾಗೂ ಅವುಗಳ ಮಾಹಿತಿಯನ್ನು ಪ್ರದರ್ಶಿಸ ಲಾಗಿದೆ ಎಂದು ಹೇಳಿದರು.
ಈ ಪ್ರದರ್ಶನವು 3 ದಿನಗಳ ಕಾಲ ಇರಲಿದೆ. ಸಾರ್ವಜನಿಕರುಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಛಾಯಾಚಿತ್ರ ಪ್ರದರ್ಶ ನವನ್ನು ವೀಕ್ಷಿಸಿ ಸದುಪಯೋಗಪಡಿಸಿ ಕೊಳ್ಳಬೇಕು ಎಂದು ತಿಳಿಸಿದರು. ಗಾಂಧಿ ಅವರು ಅವಿಭಾಜ್ಯ ಕೋಲಾರ ಜಿಲ್ಲೆಯ ಪ್ರದೇಶವಾದ ನಂದಿ ಗಿರಿಧಾಮದಲ್ಲಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆದಿದ್ದರು. ನಂತರ ಬೆಂಗಳೂರಿಗೆ ಹಿಂತಿರುಗುವಾಗ ಕೋಲಾರ, ಮಾಲೂರು, ಬಂಗಾರಪೇಟೆ ಮತ್ತು ಕೆಜಿಎಫ್ ಮಾರ್ಗವಾಗಿ ತೆರಳಿದ್ದರು. ಈ ಸಂದರ್ಭದಲ್ಲಿ ಗಾಂಧೀಜಿಯವರಿಂದ ಅಲ್ಲಿನ ಜನರು ಸ್ಫೂರ್ತಿಯನ್ನು ಪಡೆದಿದ್ದರು ಎಂದು ತಿಳಿಸಿದರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪಲ್ಲವಿ ಹೊನ್ನಾಪುರ, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.