ಅಂತರ ಕಡಿಮೆಯಾದ್ರೂ ಗೆಲುವು ನನ್ನದೇ
ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಮುನಿಯಪ್ಪ • ಮಾಲೂರು ಕ್ಷೇತ್ರದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ
Team Udayavani, Apr 23, 2019, 12:40 PM IST
● ಎಂ.ರವಿಕುಮಾರ್
ಮಾಲೂರು: ಕೋಲಾರ ಮೀಸಲು ಲೋಕಸಭೆ ಕ್ಷೇತ್ರದ ಮತದಾನ ಮುಗಿ ದಿದೆ. ಫಲಿತಾಂಶಕ್ಕೆ ತಿಂಗಳು ಕಾಯಬೇಕಿದೆ. ಎಲ್ಲೆಡೆ ಸೋಲು ಗೆಲುವಿನದ್ದೇ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎರಡು ಮೂರನೇ ಹಂತದ ಮುಖಂಡರು ಪ್ರಬಲ ಅಭ್ಯರ್ಥಿಗಳಾದ ಮುನಿಯಪ್ಪ ಹಾಗೂ ಮುನಿಸ್ವಾಮಿಗೆ ಎಷ್ಟು ಮತ ಬಿದ್ದಿರಬಹುದು ಎಂಬ ಲೆಕ್ಕಾಚಾರ ಮಾಡುತ್ತಿದ್ದಾರೆ.
ತಾಲೂಕಿನಲ್ಲಿ ಏ.18ರಂದು ಲೋಕಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ನಡೆದು, ಜಿಲ್ಲೆಯಲ್ಲೇ ಅತಿ ಹೆಚ್ಚು ಶೇ.83.84 ಮತದಾನವಾದ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಮಾಲೂರು ಪಾತ್ರವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದು, ತಾಲೂಕು ಪಂಚಾಯ್ತಿಯಲ್ಲಿ ಮೂರು ಸದಸ್ಯರು, ಪುರಸಭೆಯಲ್ಲಿ ಇಬ್ಬರು ಮತ್ತು ನಾಲ್ವರು ನಾಮನಿರ್ದೇಶನ ಜೊತೆಗೆ ಇತ್ತೀಚಿಗೆ ಕಾಂಗ್ರೆಸ್ ನೆಚ್ಚಿಕೊಂಡ ಕೆಲವು ಸದಸ್ಯರು ಪಕ್ಷದ ಒಡನಾಟದಲ್ಲಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪಾಲಿಗೆ ವಿಭಿನ್ನವಾಗಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದರೂ ಮತಪಡೆಯುವ ಅಂತರದಲ್ಲಿ ಗಂಭೀರತೆ ಇದೆ. ಹಿಂದಿನ ಎರಡು ಮೂರು ಚುನಾವಣೆಯಲ್ಲಿ ಎರಡು ಬಾರಿ ಬಿಜೆಪಿ ಶಾಸಕರು ಮತ್ತು ಒಂದು ಬಾರಿ ಜೆಡಿಎಸ್ ಶಾಸಕರು ಕ್ಷೇತ್ರದಲ್ಲಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಕಾರಣ ಇತರೆ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಮುನಿಯಪ್ಪ ಅವರನ್ನು ಬೆಂಬಲಿಸುವ ಮತದಾರರು ಜಿಲ್ಲಾದ್ಯಂತ ಇದ್ದರು.
ಮುನಿಯಪ್ಪಗೆ ಬಿಸಿ ಮುಟ್ಟಿದೆ: ಯಾವುದೇ ಪಕ್ಷದ ಪ್ರತಿನಿಧಿಗಳಿದ್ದರೂ ಮುನಿಯಪ್ಪ ಅವರ ಗೆಲುವು ಸುಲಭವಾಗುವ ಜೊತೆಗೆ ಕೆಲವು ಸಾಂಪ್ರದಾಯ ಮತಗಳು ಕೆಎಚ್ಎಂ ಪಾಲಿಗೆ ಕಟ್ಟಿಟ್ಟ ಬುತ್ತಿ ಯಂತಿವೆ. ಪ್ರತಿ ಚುನಾವಣೆಯಲ್ಲಿಯೂ ಮುನಿಯಪ್ಪ ಅವರನ್ನು ವಿರೋಧಿಸುವ ರಾಜಕಾರಣಿಗಳ ದೊಡ್ಡ ಗುಂಪೇ ರೂಪುಗೊಳ್ಳುತ್ತಿದೆ. ಆದರೂ ತಲೆ ಕೆಡಿಸಿಕೊಳ್ಳದ ಕೆ.ಎಚ್.ಮುನಿಯಪ್ಪಗೆ ಈ ಬಾರಿಯ ಚುನಾವಣೆ ಸ್ವಲ್ಪ ಮಟ್ಟಿನ ಬಿಸಿ ಮುಟ್ಟಿಸಿರುವುದು ನಿಜ.
ಇಬ್ಬರಿಗೂ ಹೆಚ್ಚು ಮತ: ರಾಜ್ಯದ ಮೈತ್ರಿ ಸರ್ಕಾರ ದಿಂದ ಮುನಿಯಪ್ಪಗೆ ಹೆಚ್ಚಿನ ಬೆಂಬಲ ಸಿಗುವ ವಿಶ್ವಾಸವಿತ್ತಾದರೂ ಕೊನೆಯ ಗಳಿಗೆಯಲ್ಲಿ ಮೈತ್ರಿ ಜೆಡಿಎಸ್‌ನ ಜನಪ್ರತಿನಿಧಿಗಳು, ಶಾಸಕರು, ಮಾಜಿ ಶಾಸಕರು ಮುನಿಯಪ್ಪ ಪರ ನಿಲ್ಲದ ಕಾರಣ, ಮತಗಳು ಬಿಜೆಪಿ ಅಭ್ಯರ್ಥಿ ಪರವಾಗುವ ಲೆಕ್ಕಾಚಾರ ಗಳಿವೆ. ಆದರೆ, ಮೂಲ ಕಾಂಗ್ರೆಸ್‌ನ ಜೊತೆಗೆ ಕೆಲವು ಹಿರಿಯರು, ಮುಸ್ಲಿಂ ಮತ್ತು ಪರಿಶಿಷ್ಟ ಪಂಗಡದ ಮತಗಳು ಮುನಿಯಪ್ಪಗೆ ಹೆಚ್ಚು ಬಂದಿದೆ ಎನ್ನುವುದು ಆ ಪಕ್ಷದ ಮುಖಂಡರ ವಾದ. ಅಷ್ಟೇ ಪ್ರಮಾಣದಲ್ಲಿ ಬಿಜೆಪಿಗೂ ಮತ ಬಂದಿವೆ ಎನ್ನುವುದು ಈ ಪಕ್ಷದ ಮುಖಂಡರ ವಾದ. ಮೋದಿ ವರ್ಚಸ್ಸು ಹಾಗೂ ಮುನಿಯಪ್ಪ ಅವರ ವಿರೋಧಿ ಅಲೆಯಿಂದ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿಗೆ ಹೆಚ್ಚಿನ ಲಾಭ ತಂದುಕೊಟ್ಟಿದೆ ಎಂಬ ಲೆಕ್ಕಾಚಾರ ಕ್ಷೇತ್ರದಲ್ಲಿ ನಡೆಯುತ್ತಿದೆ.
ಪಟ್ಟಣದತ್ತ ಮುಖಂಡರು: ಈ ಮಧ್ಯೆ ಚುನಾವಣೆ ನಡೆದ ದಿನದಿಂದಲೂ ಸರ್ಕಾರಿ ರಜೆಗಳು ಇದ್ದ ಕಾರಣಗಳಿಂದ ಮಾಲೂರು ಪಟ್ಟಣದತ್ತ ಸುಳಿಯದ ಗ್ರಾಮೀಣ ಭಾಗದ ಮುಖಂಡರು ಮತ್ತು ಕಾರ್ಯಕರ್ತರು ಇದೀಗ ತಮ್ಮ ಕೆಲಸ ಕಾರ್ಯಗಳಿಗಾಗಿ ಮಾಲೂರು ಪಟ್ಟಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾ ಬಿಸಿ ಬಿಸಿ ಚರ್ಚೆ ಅರಂಭಿಸಿದ್ದಾರೆ. ಈ ಹಿಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ಪರಿಗಣಿಸದ ಮತದಾರರು, ಈ ಬಾರಿ ಸ್ಥಳೀಯ ಸಂಸ್ಥೆ, ವಿಧಾನಸಭಾ ಚುನಾವಣೆ ಮಾದರಿಯಲ್ಲಿಯೇ ಬಿಸಿ ಬಿಸಿ ಚರ್ಚೆ ನಡೆಸುತ್ತಿದ್ದಾರೆ.
ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಶಾಸಕ ಕೆ.ವೈ.ನಂಜೇಗೌಡರಾದಿ ಯಾಗಿ ಕಾಂಗ್ರೆಸ್ ಮುಖಂಡರು, ಹಾಲಿ, ಮಾಜಿ ಸ್ಥಳೀಯ ಜನಪ್ರತಿನಿಧಿಗಳು ಜೆಡಿಎಸ್ ತಾಲೂಕು ಅಧ್ಯಕ್ಷರು ಮತ್ತು ಜೆಡಿಎಸ್‌ನ ಕೆಲವೇ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಿದ್ದರೆ. ಬಿಜೆಪಿ ಅಭ್ಯರ್ಥಿ ಪರ ಮಾಜಿ ಶಾಸಕ ಎ.ನಾಗರಾಜು, ಎಸ್.ಎನ್.ಕೃಷ್ಣಯ್ಯಶೆಟ್ಟಿ, ತಾಲೂಕು ಬಿಜೆಪಿ ಅಧ್ಯಕ್ಷರು, ಪುರಸಭೆ ಮಾಜಿ ಸದಸ್ಯರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದರು. ಆದರೆ, ಸೋಲು ಗೆಲವಿನ ಲೆಕ್ಕಾಚಾರದ ಭರಾಟೆ ಹೆಚ್ಚಾಗಿದ್ದರೂ ನಿಖರವಾದ ಫಲಿತಾಂಶ ಹೇಳುವ ಧೈರ್ಯ ಮಾಡದ ಮುಖಂಡರು ಮತ್ತು ಕಾರ್ಯಕರ್ತರು ಮೇ 23ರಂದು ನೋಡೋಣ ಎನ್ನುವ ಅಂತಿಮ ಮಾತಿನಿಂದ ತಮ್ಮ ತಮ್ಮ ನಡುವಿನ ಚರ್ಚೆಗೆ ತೆರೆ ಎಳೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.