ಕೋಲಾರದಲ್ಲಿ ಲಾಕ್‌ಡೌನ್ ಇಲ್ಲ: ಜಿಲ್ಲಾಧಿಕಾರಿ
Team Udayavani, Jul 24, 2020, 8:15 AM IST
ಮಾಲೂರು: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‌ಡೌನ್ ಇಲ್ಲ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸ್ಪಷ್ಟ ಪಡಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಆಡಳಿತ ಆರಂಭಿಸಿರುವ ಕೋವಿಡ್ 19 ಆಸ್ಪತ್ರೆಗಳ ಸ್ಥಿತಿಗತಿ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ ಒಂದು ವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದ್ದ ರಾಜ್ಯ ಸರ್ಕಾರ, ಎಲ್ಲವನ್ನೂ ಲಾಕ್‌ಡೌನ್ ಮುಕ್ತ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಸ್ಥಳೀಯವಾಗಿ ಮಾಡಿಕೊಂಡಿರುವ ಲಾಕ್‌ಡೌನ್ ನಿಯಮ ಸಡಿಲಗೊಳಿಸಿದ್ದು, ಸರ್ಕಾರದ ಆದೇಶದಂತೆ ಬೆಳಗ್ಗೆ 6ರಿಂದ ಸಂಜೆ 8ರವರೆಗೂ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ಮಾಡಬಹುದಾಗಿದೆ ಎಂದು ಹೇಳಿದರು.
ಸುರಕ್ಷಾ ಕ್ರಮ ಕಡ್ಡಾಯ: ಕೋವಿಡ್ 19 ನಿಯಮಗಳಂತೆ ಸಾಮಾಜಿಕ ಅಂತರ ಮತ್ತು ಸುರಕ್ಷಾ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ. ಪ್ರಸ್ತುತ ಪರಿಸ್ಥಿತಿಯಿಂದ ವ್ಯಾಪಾರಿಗಳು ಮತ್ತು ಗ್ರಾಹಕರು ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದು, ಎಲ್ಲರಿಗೂ ಅನುಕೂಲವಾಗುವ ಜೊತೆಗೆ ಅರ್ಥಿಕ ಸಂಕಷ್ಟವನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ ಎಂದು ವಿವರಿಸಿದರು.
ಕೋವಿಡ್ ಕೇರ್ ಸೆಂಟರ್: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುವ ಆಂತಕದಲ್ಲಿ ಒಂದೇ ದಿನ 100 ಪ್ರಕರಣಗಳು ಕಾಣಿಸಿಕೊಂಡ ಕಾರಣ, ಜಿಲ್ಲೆಯ ಎಲ್ಲಾ ತಾಲೂಕಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿಂದ ಬಳಲುವ ಸೋಂಕಿತರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡಲು ಕೊರೊನಾ ಕೇರ್ ಸೆಂಟರ್‌ಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಹಿಂದೆ ಸಾರ್ವಜನಿಕ ವಲಯದಲ್ಲಿ ಕೋವಿಡ್ ಸೋಂಕಿನ ಬಗ್ಗೆ ಇದ್ದ ಕೀಳರಿಮೆ ದೂರವಾಗಿದೆ. ಪ್ರಸ್ತುತ ಮಾಲೂರು ಪಟ್ಟಣದಲ್ಲಿರುವ ಎರಡೂ ಎ ಸಿಮ್ವ ಮ್ಯಾಟಿಕ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ರೋಗಿಗಳೊಂದಿಗೆ ಮುಕ್ತವಾಗಿ ಚರ್ಚಿಸಿ, ಅವರಲ್ಲಿ ಆತ್ಮ ಸ್ಥೈರ್ಯತುಂಬುವ ಕೆಲಸ ಮಾಡಿದ್ದೇನೆ. ಮುಂಜಾನೆಯ ಯೋಗ ಪ್ರಾಣಾಯಾಮ ಗಳ ಬಗ್ಗೆ ತಿಳಿಸಿದ್ದು, ಅಗತ್ಯವಾಗಿರುವ ಬೀಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಪ್ರಸ್ತುತ ಕೋಲಾರ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದು, ಗುಣ ಮುಖದ ಸಂಖ್ಯೆ ಎಚ್ಚಾಗುತ್ತಿದೆ ಎಂದ ಡೀಸಿ, ಕೋಲಾರದ ಎಸ್‌ಎನ್‌ಆರ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಚಿಕಿತ್ಸಾ ಕೇಂದ್ರವನ್ನಾಗಿಸಲಾಗಿದೆ. ಎಲ್ಲಾ ಅಗತ್ಯ ಸೌಲಭ್ಯ ಕೈಗೊಂಡಿರುವುದಾಗಿ ತಿಳಿಸಿದರು. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದಿರುವಂತೆ ತಿಳಿಸಿದ ಅವರು, ಕೋಲಾರ ಜಿಲ್ಲಾಡಳಿತ ಕೋವಿಡ್ 19 ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸಿದ್ಧವಾಗಿದೆ ಎಂದು ವಿವರಿಸಿದರು.
ಈ ವೇಳೆ ತಹಶೀಲ್ದಾರ್ ಎಂ.ಮಂಜುನಾಥ್, ಎಸಿ ಸೋಮ ಶೇಖರ್, ಸಾರ್ವಜನಿಕ ಆಸ್ಪತ್ರೆಯ ಅಡಳಿತ ವೈದ್ಯಾಧಿಕಾರಿ ಡಾ.ವಸಂತಕುಮಾರ್, ತಾಲೂಕು ಅರೋಗ್ಯಾಧಿಕಾರಿ ಪ್ರಸನ್ನ, ಡಾ.ಶ್ರೀನಿವಾಸ್, ಡಾ.ವೆಂಕಟೇಶ್, ಪುರಸಭೆ ಮುಖ್ಯಾಧಿಕಾರಿ ಪ್ರಸಾದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.