ನಿಷೇಧವಿದ್ರೂ ಪ್ಲಾಸ್ಟಿಕ್‌ ಬಳಕೆ ಬಿಟ್ಟಿಲ್ಲ

Team Udayavani, Oct 19, 2019, 4:39 PM IST

kolar-tdy-1

ಮಾಲೂರು: ಪರಿಸರ, ಜೀವ ಸಂಕುಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಿದ್ದರೂ ಪಟ್ಟಣದ ಅಂಗಡಿಗಳಲ್ಲಿ ರಾಜಾರೋಷವಾಗಿ ಉಪಯೋಗಿಸಲಾಗುತ್ತಿದೆ. ಜನರಲ್ಲಿಯೂ ಇದರ ಬಗ್ಗೆ ಇನ್ನೂ ಅರಿವು ಇಲ್ಲ ಎಂಬುದನ್ನು ಇದು ಎತ್ತಿ ತೋರಿಸುತ್ತದೆ.

ಪಟ್ಟಣದಲ್ಲಿ ಪ್ಲಾಸ್ಟಿಕ್‌ ಬಳಕೆ ಕಡ್ಡಾಯವಾಗಿ ನಿಷೇಧ ಮಾಡಿರುವ ಪುರಸಭಾ ಅಡಳಿತ, ಹಲವು ಬಾರಿ ಸಗಟು, ಚಿಲ್ಲರೆ ಮಾರಾಟಗಾರರ ಬಳಿಯಲ್ಲಿನ ಟನ್‌ ಗಟ್ಟಲೆ ಪ್ಲಾಸ್ಟಿಕ್‌ ಹಾಳೆ ಮತ್ತು ಕವರ್‌ಗಳನ್ನು ಜಪ್ತಿ ಮಾಡಿತ್ತು. ಆದರೂ ಬಳಕೆ ನಿಲ್ಲದ ಕಾರಣ, ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಲು ಕ್ರಮ ಕೈಗೊಂಡಿತ್ತು. ಆದರೂ ಬಳಗೆ ಇನ್ನೂ ಕಡಿಮೆಯಾಗಿಲ್ಲ. ಇದಕ್ಕೆ ಮಾರುಕಟ್ಟೆಯಲ್ಲಿ ಗ್ರಾಹಕರು, ವ್ಯಾಪಾರಿಗಳ ಕೈಯಲ್ಲಿ ಇದ್ದ ಪ್ಲಾಸ್ಟಿಕ್‌ ಚೀಲಗಳೇ ಸಾಕ್ಷಿ. ಪ್ರಧಾನಿ ಮೋದಿ ಗಾಂಧಿ ಜಯಂತಿಯಂದು, ಏಕ ಬಳಕೆ ಪ್ಲಾಸ್ಟಿಕ್‌ ಬಳಸದಂತೆ ಸಲಹೆ ನೀಡಿದ್ದರು. ಸ್ಥಳೀಯ ಸಂಸ್ಥೆಗಳು ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಿವೆ. ಆದರೂ ಅಂಗಡಿಗಳಿಗೆ ಯಾವ ಮಾರ್ಗದಲ್ಲಿ ಪ್ಲಾಸ್ಟಿಕ್‌ ಕವರ್‌ ಪೂರೈಕೆಯಾಗುತ್ತಿವೆ ಎನ್ನುವುದು ಅಡಳಿತಕ್ಕೆ ತಿಳಿಯದಾಗಿದೆ.

ಮೂರನೇ ಬಾರಿ ಸಿಕ್ಕಿ ಬಿದ್ರೆ ಜೈಲು ವಾಸ: ಪುರಸಭೆ ಅಧಿಕಾರಿಗಳು, 6 ತಿಂಗಳಿಗೆ, ವರ್ಷಕ್ಕೊಮ್ಮೆ ಶಾಸ್ತ್ರಕ್ಕೆ ಎಂಬಂತೆ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಾರೆ. ನಂತರ ಆ ಕಡೆ ತಿರುಗಿಯೂ ನೋಡಲ್ಲ. ಪ್ಲಾಸ್ಟಿಕ್‌ ಬಳಸಿ 1ನೇ ಬಾರಿಗೆ ಸಿಕ್ಕಿ ಬಿದ್ರೆ 5 ಸಾವಿರ ರೂ., 2ನೇ ಬಾರಿಗೆ 10 ಸಾವಿರ ರೂ., 3ನೇ ಬಾರಿ 25 ಸಾವಿರ ರೂ. ದಂಡ ಮತ್ತು ಮೂರು ತಿಂಗಳ ಜೈಲುವಾಸ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಆದರೂ ಕಟ್ಟುನಿಟ್ಟಿನ ಅನುಷ್ಠಾನ ಸಾಧ್ಯವಾಗದೆ ನಿಯಂತ್ರಣಕ್ಕೆ ಬಾರದಂತಾಗಿದೆ.

ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವವರು ಹಾಗೂ ಉಪಯೋಗಿಸುವವರ ಮೇಲೆ ದಂಡ ಪ್ರಯೋಗ ಮಾಡುವುದಕ್ಕೆ ಪುರಸಭೆ ಪ್ಲಾಸ್ಟಿಕ್‌ ಶವಯಾತ್ರೆ ನಡೆಸುವ ಮೂಲಕ ಜನಜಾಗೃತಿ ಮೂಡಿಸಿ ಹದಿನೈದು ದಿನ ಕಳೆದರೂ ಅದು ಜಾರಿಯಾಗಿಲ್ಲ. ಹೊರಗಿನಿಂದ ಪ್ಲಾಸ್ಟಿಕ್‌ ಚೀಲಗಳು, ವಿವಿಧ ಮಾದರಿಯ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳು ಪಟ್ಟಣ ಪ್ರವೇಶಿಸುತ್ತಿವೆ. ಪುರಸಭೆ ಆಡಳಿತವೇ ನಾಚಿಕೆ ಪಡುವಂತೆ ಮಾಡಿದೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚು ಬಳಕೆ: ಅಲ್ಲದೆ, ಆಯುಧ ಪೂಜೆ, ವಿಜಯದಶಮಿ ಸಮಯದಲ್ಲಿ ಹಾದಿ ಬೀದಿಗಳಲ್ಲಿ ಪ್ಲಾಸ್ಟಿಕ್‌ ಕೈಚೀಲಗಳು ಸಾವಿರಾರು ಸಂಖ್ಯೆಯಲ್ಲಿ ಮಾರಾಟವಾದರೂ ಕೇಳುವವರೇ ಇರಲಿಲ್ಲ. ಪ್ಲಾಸ್ಟಿಕ್‌ ಬಳಕೆ ಕಾನೂನಾತ್ಮಕ ಕ್ರಮಗಳು ಕಠಿಣವಾಗಿದ್ದರೂ. ಅವುಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಬದ್ಧತೆ, ಇಚ್ಛಾಶಕ್ತಿಯ ಕೊರತೆಯಿಂದ ಪ್ಲಾಸ್ಟಿಕ್‌ ನಿಷೇಧ ನೆಪಮಾತ್ರಕ್ಕೆ ಎಂಬಂತಾಗಿದೆ.

ಸೂಚನ ಫ‌ಲಕ ಹಾಕಿದ್ದಾರೆ: ಕೆಲವೊಂದು ಹೋಟೆಲ್‌, ಬೇಕರಿ, ಅಂಗಡಿ ಮಾಲಿಕರು, ವರ್ತಕರು ಸೇರಿ ಹಲವು ವ್ಯಾಪಾರಿಗಳು ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಸ್ವಯಂ ಪ್ರೇರಿತವಾಗಿ ಮುಂದಾಗಿದ್ದಾರೆ. ಕೆಲವು ಹೋಟೆಲ್‌ಗ‌ಳಲ್ಲಿ ಈಗಾಗಲೇ ನಾಮಫಲಕ ಅಳವಡಿಸಿದ್ದು, ಊಟ ತಿಂಡಿ ತೆಗೆದುಕೊಂಡು ಹೋಗುವರು ಟೆಫನ್‌ ಬಾಕ್ಸ್‌, ಬಟ್ಟೆ ಚೀಲ ತರುವಂತೆ ಸೂಚನಾ ಫಲಕ ಹಾಕಿದ್ದಾರೆ. ಬೇಕರಿ, ಅಂಗಡಿ ವರ್ತಕರು ಗ್ರಾಹಕರ ಖರೀದಿಸುವ ತಿಂಡಿ ಹಾಗೂ ಇನ್ನಿತರ ವಸ್ತುಗಳಿಗೆ ಬಟ್ಟೆ ಬ್ಯಾಗನ್ನು ನೀಡಿ ಅದಕ್ಕೆ ಪ್ರತ್ಯೇಕ ಹಣ ಪಡೆಯುತ್ತಿದ್ದಾರೆ. ಆದರೆ, ಬೀದಿ ವ್ಯಾಪಾರಿಗಳು, ಸಣ್ಣಪುಟ್ಟ ಅಂಗಡಿ ಹಾಗೂ ಕೆಲವು ದೊಡ್ಡಮಟ್ಟದ ವರ್ತಕರು ವ್ಯಾಪಾರಿಗಳು ಮಾತ್ರ ಪ್ಲಾಸ್ಟಿಕ್‌ ಕೈಚೀಲಗಳು ಹಾಗೂ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಮಾರಾಟ ಮಾಡುವುದನ್ನು ಬಿಡಲಿಲ್ಲ, ಅಂತಹ ವ್ಯಾಪಾರಿಗಳು ಹಾಗೂ ಬಳಸುವವರನ್ನು ಹಿಡಿದು ದಂಡ ವಿಧಿಸಿದಲ್ಲಿ ಕೊಂಚ ತಹಬದಿಗೆ ಬರುತ್ತದೆ.

ಬಿಸಿ ಮುಟ್ಟಿಸಿ: ಗ್ರಾಮೀಣ ಭಾಗದಲ್ಲಿಯೂ ಕಡ್ಡಾಯವಾಗಿ ಪ್ಲಾಸ್ಟಿಕ್‌ ನಿಷೇಧ ಮಾಡುವ ಬಗ್ಗೆ ತಾಪಂ ಸಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದರೂ ಕಾರ್ಯರೂಪ ಸಾಧ್ಯವಾಗಿಲ್ಲ. ಕೇವಲ ಜಾಗೃತಿಯಿಂದ ಮಾತ್ರ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಪ್ಲಾಸ್ಟಿಕ್‌ ನಿಷೇಧ ಸಾಧ್ಯವಿಲ್ಲ ಎಂಬುದನ್ನು ತಿಳಿದು ತಾಲೂಕು ಅಡಳಿತ ಕಟ್ಟುನಿಟ್ಟಾಗಿ ಕಾನೂನು ಪಾಲನೆ ಮಾಡುವ ಹಾದಿಯಲ್ಲಿ ಬಳಕೆದಾರರು ಮತ್ತು ಮಾರಾಟಗಾರಿಗೆ ಕಾನೂನು ಬಿಸಿ ಮುಟ್ಟಿಸಿದಲ್ಲಿ ಮಾತ್ರ ಸಂಪೂರ್ಣವಾಗಿ ಪ್ಲಾಸ್ಟಿಕ್‌ ಮುಕ್ತ ಮಾಲೂರು ತಾಲೂಕನ್ನು ಕಾಣಲು ಸಾಧ್ಯ.

ನಾಗರಿಕರು ಅಂಗಡಿ ಹೋಗುವ ಮುನ್ನಾ ಸ್ವಯಂ ಪ್ರೇರಣೆಯಿಂದ ಬಟ್ಟೆ ಚೀಲ, ಬುಟ್ಟಿಯನ್ನು ತೆಗೆದುಕೊಂಡು ಹೋಗಬೇಕು. ಅಂಗಡಿ, ಹೋಟೆಲ್‌, ಕಲ್ಯಾಣ ಮಂಟಪ ಮಾಲಿಕರು ಪ್ಲಾಸ್ಟಿಕ್‌ ವಸ್ತು ಬಳಕೆ ಕಡ್ಡಾಯವಾಗಿ ನಿಷೇಧಿಸಬೇಕು. ಉಪಯೋಗಿಸಿದ್ದಲ್ಲಿ ಕಾನೂನು ರೀತಿ ದಂಡ ವಿಧಿಸಲಾಗುವುದು. ಪ್ಲಾಸ್ಟಿಕ್‌ ನಿಷೇಧ ಮಾಡುವಲ್ಲಿ ಪುರಸಭೆ ಜೊತೆ ಜನರ ಸಹಕಾರವು ಅಗತ್ಯ. ಈಗ ಮಾತ್ರ ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧ ಸಾಧ್ಯ. –ಎಸ್‌.ಪ್ರಸಾದ್‌, ಮುಖ್ಯಾಧಿಕಾರಿ, ಪುರಸಭೆ ಮಾಲೂರು

-ಎಂ.ರವಿಕುಮಾರ್‌

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.