ಜರುಗಹಳ್ಳಿಯಲ್ಲಿ ಗಂಟಲುಮಾರಿ ರೋಗ: ಜನರಲ್ಲಿ ಆತಂಕ

ಮೂರು ದಿನಗಳ ಹಿಂದೆ ವಿದ್ಯಾರ್ಥಿ ಸಾವು • ಹಲವು ವಿದ್ಯಾರ್ಥಿಗಳಿಗೆ ರೋಗ ಶಂಕೆ • ವೈದ್ಯರ ತಂಡದಿಂದ ಲಸಿಕೆ

Team Udayavani, Jul 17, 2019, 3:49 PM IST

kolar-tdy-3..

ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಗ್ರಾಪಂನ ಜರುಗಹಳ್ಳಿ ಗ್ರಾಮದಲ್ಲಿ ದುರ್ಗಾ ಪ್ರಸಾದ್‌ ಎಂಬ ವಿದ್ಯಾರ್ಥಿಗೆ ಗಂಟಲು ಊದುಕೊಂಡಿರುವುದನ್ನು ಗ್ರಾಪಂ ಅಧ್ಯಕ್ಷ ಸುಬ್ಬಣ್ಣ ಪರಿಶೀಲಿಸಿದರು.

ಶಿಡ್ಲಘಟ್ಟ: ತಾಲೂಕಿನ ಜರುಗಹಳ್ಳಿ ಗ್ರಾಮದಲ್ಲಿ ಸಂಶಯಾಸ್ಪದ ಗಂಟಲುಮಾರಿ ರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ದಿಬ್ಬೂರಹಳ್ಳಿ ಗ್ರಾಪಂಗೆ ಬರುವ ಜರುಗಹಳ್ಳಿ ಗ್ರಾಮದಲ್ಲಿ ಸಂಶಯಾಸ್ಪದ ಗಂಟಲು ಮಾರಿ ರೋಗದಿಂದ ಬಳಲುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಮೃತಪಟ್ಟಿದ್ದು, ಇನ್ನೂ ಹಲವು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಗಂಟಲು ರೋಗದಿಂದ ನರಳುತ್ತಿದ್ದು, ನೆಮ್ಮದಿಗೆ ಭಂಗ ಉಂಟು ಮಾಡಿದೆ.

ಫ‌ಲಕಾರಿಯಾಗದ ಚಿಕಿತ್ಸೆ: ಗ್ರಾಮದ ವೆಂಕಟಸ್ವಾಮಿ ಅವರ ಪುತ್ರ ಪ್ರಜ್ವಲ್ಗೆ ಗಂಟಲು ಊದುಕೊಂಡಿದ್ದರಿಂದ ಚಿಕ್ಕಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತೋರಿಸಿ ಬಳಿಕ ಇಂದಿರಾಗಾಂಧಿ ಆಸ್ಪತ್ರೆ ಮತ್ತು ವಾಣಿ ವಿಳಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಜನರಲ್ಲಿ ಜಾಗೃತಿ: ವಿಷಯ ತಿಳಿದ ಕೂಡಲೇ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸುಬ್ಬಣ್ಣ ಮತ್ತು ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ಜರುಗಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿದರಲ್ಲದೇ, ಸ್ವಚ್ಛತೆ ಕಾಪಾಡಲು ಸೂಚನೆ ನೀಡಿದರು. ಗಂಟಲು ನೋವು ಕಾಣಿಸಿಕೊಂಡರೆ ಅನುಸರಿಸಬೇಕಾದ ಕ್ರಮಗಳು ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

ನಿಯಂತ್ರಣಕ್ಕೆ ಬಾರದ ರೋಗ: ಗ್ರಾಮದಲ್ಲಿ ಯಾರು ಬಾಯಲ್ಲೂ ಕೇಳಿದರೂ ಗಂಟಲು ರೋಗದ್ದೇ ಮಾತು. ಮನೆಯ ಮಂದಿ, ಮಕ್ಕಳು ರೋಗದಿಂದ ಚೇತರಿಸಿಕೊಳ್ಳುತ್ತಿಲ್ಲ. ಡಾಕ್ಟರ್‌ಗಳು ಯಾವ ಕಾರಣಕ್ಕೆ ಈ ರೋಗ ಬರುತ್ತದೆ ಎಂಬುದನ್ನು ಹೇಳುತ್ತಿಲ್ಲ. ನಮಗೆ ಭಯವಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಹಲವರಿಗೆ ಗಂಟಲು ನೋವು: ಮೃತ ಬಾಲಕ ಪ್ರಜ್ವಲ್ರ ದೊಡ್ಡಪ್ಪ ಶಿವಣ್ಣ ಎಂಬುವರ ಪುತ್ರಿ ಎಸ್‌ಎಸ್‌ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿ ಕಾವ್ಯ ಸಹ ಗಂಟಲು ನೋವಿನಿಂದ ಬಳಲುತ್ತಿದ್ದು, ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.

ಗ್ರಾಮದ ಮುನಿರತ್ನಮ್ಮ ಹಾಗೂ ಸರೋಜಮ್ಮ, ಶ್ರೀನಿವಾಸ್‌ ಸಹಿತ ಹಲವರು ಗಂಟಲು ನೋವಿನಿಂದ ಬಳಲುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಆವರಿಸಿದೆ.

ಶಾಲೆಯ ವಿದ್ಯಾರ್ಥಿಗಳಿಗೆ ಗಂಟಲು ರೋಗ: ಗ್ರಾಮ ಸ.ಕಿ.ಪ್ರಾ.ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತಪಟ್ಟ ಬಳಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 10 ಮಂದಿ ವಿದ್ಯಾರ್ಥಿಗಳಿಗೆ ಗಂಟಲು ರೋಗ ಕಾಣಿಸಿಕೊಂಡಿದ್ದು, ಸ್ವತಃ ಪಾಠಪ್ರವಚನಗಳು ಮಾಡುವ ಶಿಕ್ಷಕರು ಸಹ ಭಯಭೀತಿಗೊಂಡಿದ್ದಾರೆ. ಶಾಲೆಯಲ್ಲಿ 22 ಮಂದಿ ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ 10 ಮಂದಿ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ಮುಖ್ಯಶಿಕ್ಷಕಿ ವಿಜಯ ತಿಳಿಸಿದರು.

ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ಶಾಲೆಗೆ ಭೇಟಿ ನೀಡಿ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಿದರಲ್ಲದೇ ಬಿಸಿನೀರು ತಣ್ಣಗೆ ಮಾಡಿ ಕುಡಿಯ ಬೇಕು. ಜೊತೆಗೆ ಬಿಸಿ ನೀರಿನಲ್ಲಿ ಉಪ್ಪು ಹಾಕಿ ಗಾರ್ಲೀಗ್‌ ಮಾಡಲು ವೈದ್ಯರು ಸೂಚನೆ ನೀಡಿದ್ದಾರೆ. ಅದನ್ನು ಪಾಲನೆ ಮಾಡುತ್ತಿದ್ದೇವೆ ಎಂದು ಮಕ್ಕಳು ಹೇಳಿದರು.

ನಿಲ್ಲದ ಆತಂಕ: ಗ್ರಾಮದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡಿರುವ ಗಂಟಲು ರೋಗದಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಸದ್ಯದ ಮಟ್ಟದಲ್ಲಿ ಯಾರೂ ಸಹ ಸಮಾಧಾನಗೊಳ್ಳುವ ಪರಿಸ್ಥಿತಿಯಲ್ಲಿಲ್ಲ.

ಗಂಟಲು ನೋವು ಕಾಣಿಸಿಕೊಂಡರೆ ಸಮೀಪದ ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆ ಮತ್ತು ಬೆಂಗಳೂರಿನ ಆಸ್ಪತ್ರೆಗೆ ದೌಡಾಯಿಸುತ್ತಿದ್ದು, ರೋಗ ಮಾತ್ರ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ ಎಂಬ ತಳಮಳ ಮತ್ತು ಆತಂಕ ಗ್ರಾಮಸ್ಥರಲ್ಲಿ ಬೇರೂರಿದೆ.

ಗ್ರಾಮದಲ್ಲಿ ಗಂಟಲು ರೋಗ ದಿನೇ ದಿನೇ ಮಕ್ಕಳು ಮತ್ತು ಹಿರಿಯರಿಗೆ ಹರಡುತ್ತಿದ್ದರು ಸಹ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುವ ಗೋಜಿಗೆ ಹೋಗಿಲ್ಲವೆಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಕೇವಲ ಸಾದಲಿ ಆಸ್ಪತ್ರೆಯ ವೈದ್ಯರು ಮತ್ತು ಆಶಾ ಕಾರ್ಯಕರ್ತರು,ದಾದಿಯರು ಮಾತ್ರ ನೀರಿನ ಮಾದರಿ ಸ್ವೀಕರಿಸಿ ಚಿಕಿತ್ಸೆ ನೀಡಿದ್ದಾರೆ ಆದರೂ ಸಹ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೋಗವನ್ನು ನಿಯಂತ್ರಣ ಮಾಡಿ ಜನರ ಆರೋಗ್ಯವನ್ನು ಕಾಪಾಡಬೇಕೆಂದು ಅಳಲು ತೋಡಿಕೊಂಡಿದ್ದಾರೆ.

ಗ್ರಾಮದಲ್ಲಿ ಗಂಟಲು ರೋಗ ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಗ್ರಾಮ ಪಂಚಾಯಿತಿಯಿಂದ ಅಥವಾ ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಸ್ವಚ್ಛತೆ ಕಾರ್ಯ ನಡೆಯುತ್ತಿಲ್ಲ. ಎಲ್ಲೆಡೆ ಗಲೀಜು ತುಂಬಿದೆ. ಚರಂಡಿ ನೀರು ರಸ್ತೆಗೆ ಹರಿದು ಸೊಳ್ಳೆಗಳಿಗೆ ಆಶ್ರಯತಾಣವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.

ನೀರು ಶುದ್ಧೀಕರಣ ಘಟಕ ಮಂಜೂರು: ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ನೀರಿನಲ್ಲಿ ಫ್ಲೋರೈಡ್‌ ಅಂಶ ಅಧಿಕ0ವಾಗಿರುವ ಕುರಿತು ಶಾಸಕ ವಿ.ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ ಪರಿಣಾಮ ತಾಲೂಕಿನಾದ್ಯಂತ 40 ನೀರು ಶುದ್ಧೀಕರಣ ಘಟಕ ಮಂಜೂರು ಮಾಡಿದ್ದಾರೆ. ಅದರಲ್ಲಿ ಜರುಗಹಳ್ಳಿ ಸಹ ಸೇರಿದ್ದು, ಶೀಘ್ರವೇ ಘಟಕ ಆರಂಭಿಸಲಾಗುವುದು ಎಂದು ಗ್ರಾಪಂ ಅಧ್ಯಕ್ಷರು ತಿಳಿಸಿದ್ದಾರೆ.

ಗ್ರಾಮದಲ್ಲಿರುವ ಕೊಳವೆಬಾವಿಯಲ್ಲಿ ಲಭಿಸಿರುವ ನೀರಿನಲ್ಲಿ ಫ್ಲೋರೈಡ್‌ ಅಂಶ ಅಧಿಕ ವಾಗಿದೆ ಎಂದು ಈಗಾಗಲೇ ತಿಳಿದು ಬಂದಿದೆ. ಗಂಟಲುರೋಗ ವ್ಯಾಪಕವಾಗಿರುವುದರಿಂದ ಕುಡಿಯುವ ನೀರು ಆರೋಗ್ಯ ಇಲಾಖೆಯ ಅಧಿಕಾರಿಗಳು ನಮೂನೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ನೀರು ಕುಡಿಯಲು ಯೋಗ್ಯವಿಲ್ಲವೆಂದು ಪ್ರಯೋಗಾ ಲಯದಿಂದ ಧೃಡಪಟ್ಟಿದೆ. ಕಲುಷಿತ ನೀರು ಸೇವಿಸಿ ಗಂಟಲು ರೋಗ ಕಾಣಿಸಿಕೊಂಡಿ ರಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.