ಟೊಮೆಟೋಗೆ ಫಸಲ್ ಬಿಮಾ ಬೇಡ
ಹವಾಮಾನ ಆಧಾರಿತ ಬೆಳೆ ವಿಮೆ ಅಗತ್ಯ: ಗೋವಿಂದಗೌಡ
Team Udayavani, Apr 23, 2020, 3:01 PM IST
ಸಾಂದರ್ಭಿಕ ಚಿತ್ರ
ಕೋಲಾರ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಿಂದ ಜಿಲ್ಲೆಯ ಟೊಮೆಟೋ ಬೆಳೆಗಾರರಿಗೆ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ ಸರಕಾರ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು.
ತಮ್ಮ ಕಚೇರಿಯಲ್ಲಿ ಫಸಲ್ ಬಿಮಾ ಯೋಜನೆ ಅಳವಡಿಕೆಗೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆಯ ಸಾಧಕ ಬಾಧಕಗಳ ಕುರಿತು ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಗಾಯತ್ರಿ ಅವರಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಜಿಲ್ಲೆಯ ರೈತರು ಟೊಮೆಟೋ ಬೆಳೆಯನ್ನು ನಿಗದಿಗಿಂತ ಉತ್ತಮ ಇಳುವರಿ ಪಡೆಯುತ್ತಿದ್ದಾರೆ. ಫಸಲ್ ಬಿಮಾ ಯೋಜನೆಯಡಿ ವಿಮೆಯನ್ನು ಇಳುವರಿಗೆ ನೀಡುವುದರಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲೆಯ ಯಾವೊಬ್ಬ ಟೊಮೆಟೋ ಬೆಳೆಗಾರರು ಪರಿಹಾರಕ್ಕಾಗಿ ಕ್ಲೈಮ್ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಜಿಲ್ಲೆಯಲ್ಲಿ ಬೆಳೆಯುವ ಟೊಮೆಟೋ ಹೆಕ್ಟೇರ್‌ಗೆ 4800 ರೂ. ನಂತೆ ವಿಮಾ ಕಂತು ಪಾವತಿಸಲು ರೈತರ ಸಾಲಕ್ಕೆ 16 ಕೋಟಿ ರೂ.ಗೂ ಹೆಚ್ಚು ಹಣ ಸೇರಿಕೊಳ್ಳುತ್ತದೆ. ಆದರೆ, ಪ್ರಯೋಜನ ಮಾತ್ರ ಶೂನ್ಯವಾದ್ದರಿಂದ ಇದರ ಅಳವಡಿಕೆ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಹವಾಮಾನ ಆಧಾರಿತ ವಿಮೆ ಉತ್ತಮ:
ತೋಟಗಾರಿಕಾ ಇಲಾಖೆ ಡಿಡಿ ಗಾಯತ್ರಿ ಮಾತನಾಡಿ, ಕೋಲಾರದ ರೈತರು ಟೊಮೇಟೋವನ್ನು ವಿಮೆ ಯೋಜನೆಯ ನಿಗಧಿಗಿಂತ ಉತ್ತಮ ಇಳುವರಿ ಪಡೆಯುವುದರಿಂದ ಫಸಲ್ ಭೀಮಾ ಯೋಜನೆ ಬದಲಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಳವಡಿಕೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಒಪ್ಪಿಗೆ ಸಿಕ್ಕರೆ ಜಿಲ್ಲೆಯ ಟೊಮೇಟೋ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದರು. ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರವಿ, ಎಜಿಎಂಗಳಾದ ಖಲೀಮುಲ್ಲಾ, ನಾಗೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.