ರೇಷ್ಮೆ ಕೃಷಿಯಲ್ಲಿ ನಷ್ಟ ತಪ್ಪಿಸಲು ತರಬೇತಿ ಅಗತ್ಯ
Team Udayavani, Apr 15, 2022, 3:49 PM IST
ಕೋಲಾರ: ಬೇಸಿಗೆಯಲ್ಲಿ ಅಧಿಕ ಉಷ್ಣಾಂಶದಿಂದಾಗಿ ರೇಷ್ಮೆ ಬೆಳೆಗಾರರು ಬೆಳೆ ನಷ್ಟ ಆಗುವುದನ್ನು ತಪ್ಪಿಸಲು ಹುಳು ಸಾಕಾಣಿಕೆ ಕೊಠಡಿಯಲ್ಲಿ ತೇವಾಂಶ ನಿರ್ವಹಣೆ ಕುರಿತು ಅಗತ್ಯ ಮಾಹಿತಿ ಪಡೆಯಬೇಕು ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕ ಟಿ. ಎಂ.ಕಾಳಪ್ಪ ಸಲಹೆ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದಲ್ಲಿ ರೇಷ್ಮೆ ಇಲಾಖೆ ಸಹಯೋಗದಲ್ಲಿ ರೇಷ್ಮೆ ಬೆಳೆಗಾರರಿಗೆ “ಬೇಸಿಗೆಯಲ್ಲಿ ಹಿಪ್ಪುನೇರಳೆ ತೋಟ ಹಾಗೂ ದ್ವಿತಳಿ ರೇಷ್ಮೆಹುಳು ನಿರ್ವಹಣೆ’ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೇಸಿಗೆಯಲ್ಲಿ ಹುಳು ಸಾಕಾಣಿಕೆಯ ಸೂಕ್ತ ನಿರ್ವಹಣೆ ಬಗ್ಗೆ ವಿಜ್ಞಾನಿಗಳಿಂದ ಮಾಹಿತಿ ಪಡೆದು ಹಿಪ್ಪುನೇರಳೆ ತೋಟ, ರೇಷ್ಮೆಹುಳು ಸಾಕಾಣಿಕೆ ಹಾಗೂ ಗೂಡು ಉತ್ಪಾದನೆಗೆ ಆದ್ಯತೆ ನೀಡಬೇಕು. ಪ್ರಸ್ತುತ ರೇಷ್ಮೆಗೂಡಿಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಧಾರಣೆ ಇರುವುದರಿಂದ ಹೆಚ್ಚಿನ ಆದಾಯ ಗಳಿಸಬಹುದೆಂದು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಕೆ.ತುಳಸಿರಾಮ್ ಅಧ್ಯಕ್ಷತೆ ವಹಿಸಿದ್ದು, ರೇಷ್ಮೆ ಸಾಕಾಣಿಕೆಗೆ ನಮ್ಮ ರಾಜ್ಯದ ಹವಾಗುಣವು ಹೆಚ್ಚು ಸೂಕ್ತವಾಗಿದ್ದು, ಸುಧಾರಿತ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ವರ್ಷಪೂರ್ತಿ ರೇಷ್ಮೆ ಹುಳು ಸಾಕಾಣಿಕೆ ಮಾಡಬಹುದಾಗಿದೆ ಎಂದರು.
ಕೋಲಾರ ವಿಭಾಗದ ರೇಷ್ಮೆ ಸಹಾಯಕ ನಿರ್ದೇಶಕ ಎಂ. ಮಂಜುನಾಥ, ದ್ವಿತಳಿ ರೇಷ್ಮೆ ಕೃಷಿಯಲ್ಲಿ ಆಧುನಿಕ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವ ಮೂಲಕ ರೇಷ್ಮೆ ಬೆಳೆಗಾರರು ರಾಜ್ಯದ ಬೇಡಿಕೆಗೆ ಅನುಗುಣವಾಗಿ ಬೈವೋಲ್ಟಿನ್ ರೇಷ್ಮೆಗೂಡು ಉತ್ಪಾದಿಸಬಹುದಾಗಿದೆ ಎಂದರು.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಎಸ್. ಅನಿಲಕುಮಾರ, ಗುಣಮಟ್ಟದ ಹಿಪ್ಪು ನೇರಳೆ ಸೊಪ್ಪು ಉತ್ಪಾದನೆಗೆ ರೇಷ್ಮೆ ಬೆಳೆಗಾರರು ಕಡ್ಡಾಯವಾಗಿ 2 ವರ್ಷಗಳಿಗೊಮ್ಮೆ ಮಣ್ಣು ಪರೀಕ್ಷೆ ಮಾಡಿಸಬೇಕು. ಹಿಪ್ಪು ನೇರಳೆ ತೋಟಕ್ಕೆ ಸಮಗ್ರ ಪೋಷಕಾಂಶಗಳನ್ನು ನೀಡಿ ಮಣ್ಣಿನ ಫಲವತ್ತತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ರೇಷ್ಮೆ ಕೃಷಿ ವಿಜ್ಞಾನಿ ಡಾ. ಶಶಿಧರ್ ಕೆ.ಆರ್., ರೇಷ್ಮೆ ಬೆಳೆಗಾರರು ಬೇಸಿಗೆ ಕಾಲದಲ್ಲಿ ಪ್ರಮುಖವಾಗಿ ಕಂಡುಬರುವ ರಸಹೀರುವ ಕೀಟಗಳಾದ ಹಿಟ್ಟು ತಿಗಣೆ, ತ್ರಿಪ್ಸ್ ಹಾಗೂ ಮೈಟ್ಸ್ ನುಸಿಗಳಿಂದ ಸಂರಕ್ಷಣೆ ಪಡೆಯಲು ಮುಂಜಾಗ್ರತಾ ಕ್ರಮವಾಗಿ ಸಮಗ್ರ ನಿರ್ವಹಣಾ ಕ್ರಮವನ್ನು ಪ್ರತಿ ಕಟಾವಿನಲ್ಲಿ ಅನುಸರಿಸಿ ಸೊಪ್ಪಿನ ಇಳುವರಿ ಹೆಚ್ಚಿಸಬಹುದು ಎಂದರು.
ಚಿಂತಾಮಣಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಅರುಣಾ ಜಿ.ಆರ್. ದಿನದಲ್ಲಿ ಹುಳುಸಾಕು ಮನೆಯಲ್ಲಿ ಸೂಕ್ತ ಉಷ್ಣಾಂಶ ಮತ್ತು ಶೈತ್ಯಾಂಶ ನಿರ್ವಹಣೆ ಮತ್ತಿತರ ಅಂಶಗಳ ಕುರಿತು ತಿಳಿಸಿಕೊಟ್ಟರು. ರೇಷ್ಮೆ ಇಲಾಖೆಯ ಅಧಿಕಾರಿ ವರ್ಗದವರು ಹಾಗೂ 60 ರೇಷ್ಮೆ ಬೆಳೆಗಾರರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.