ಪ್ರತಿಯೊಬ್ಬರಿಗೂ ವಾಲ್ಮೀಕಿ ಮಹರ್ಷಿ ದಾರಿದೀಪ
Team Udayavani, Oct 10, 2022, 5:10 PM IST
ಮುಳಬಾಗಿಲು: ಆದಿಕವಿ ವಾಲ್ಮೀಕಿ ಮಹರ್ಷಿಗಳು ಸಮಾಜಕ್ಕೆ ನೀಡಿದ ಸಂದೇಶ ಆದರ್ಶಪ್ರಾಯವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಆರ್.ಶೋಬಿತಾ ಹೇಳಿದರು.
ತಾಲೂಕು ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ನಗರದ ತಾಲೂಕು ಆಡಳಿತ ಭವನದಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿ, ಆದಿಕವಿ ಎಂದು ಪ್ರಸಿದ್ಧ ಪಡೆದು ಭಾರತದ ಸಾಂಸ್ಕೃತಿಕ ಪುರುಷ ಶ್ರೀರಾಮನನ್ನು ಸಮಾಜಕ್ಕೆ ಗುರುತಿಸಿದ್ದು ವಾಲ್ಮೀಕಿ ಮಹರ್ಷಿ. ಅವರು ರಚಿಸಿದ ರಾಮಾಯಣ ಹಿಂದುಗಳ ಪವಿತ್ರ ಗ್ರಂಥವಾಗಿ ಪೂಜಿಸಲ್ಪಡುತ್ತಿದೆ. ಅಂತಹ ಮಹಾನುಭಾವರ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ತಿಳಿಸಿದರು.
ಸರ್ಕಾರದಿಂದ ಉತ್ತಮ ತೀರ್ಮಾನ: ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಜಯಪ್ರಕಾಶ್ ನಾಯ್ಕ ಮಾತನಾಡಿ, ವಾಲ್ಮೀಕಿ ಅನಕ್ಷರಸ್ಥ ಸಮಾಜಕ್ಕೆ ಜ್ಞಾನದ ನಿಧಿಯನ್ನು ನೀಡಿ, ಜಗತ್ ಪ್ರಸಿದ್ಧಿ ಪಡೆದಿದ್ದು, ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಅಲ್ಲದೆ, ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ನ್ಯಾ.ನಾಗಮೊಹನ್ ದಾಸ್ ವರದಿಯಂತೆ ಶೇ.3ರಷ್ಟು ಇದ್ದ ಮೀಸಲಾತಿ ಶೇ.7ಕ್ಕೆ ಏರಿಸಲು ಉತ್ತಮ ನಿರ್ಣಯ ತೆಗೆದುಕೊಳ್ಳುವ ಮೂಲಕ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಸಹಕಾರ ನೀಡಿದೆ ಎಂದು ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.
ನಗರಸಭೆ ಅಧ್ಯಕ್ಷ ರಿಯಾಜ್ ಅಹ್ಮದ್, ವಾಲ್ಮೀಕಿ ಸಂಘದ ತಾಲೂಕು ಕಾರ್ಯದರ್ಶಿ ಬೈರಕೂರು ರಾಮಾಂಜಿ ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.