ವಾಸ್ತುದೋಷ?: ಕಚೇರಿ ಬಾಗಿಲ ದಿಕ್ಕು ಬದಲು


Team Udayavani, Nov 13, 2019, 3:43 PM IST

kolar-tdy-1

ಮುಳಬಾಗಿಲು: ಸಾಮಾನ್ಯವಾಗಿ ಜನಪ್ರತಿನಿಧಿಗಳು ತಮ್ಮ ಸರ್ಕಾರಿ ಕಚೇರಿಗಳನ್ನು ವಾಸ್ತು  ರೀತಿ ಬದಲಾಯಿಸಿಕೊಳ್ಳುವುದನ್ನು ನೋಡಿ ದ್ದೇವೆ. ಆದರೆ, ನಗರದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ವಾಸ್ತು ದೋಷವೆಂದು ದಕ್ಷಿಣ ದಿಕ್ಕಿಗೆ ಇದ್ದ ತಮ್ಮ ಕಚೇರಿ ಬಾಗಿಲನ್ನು ಮುಚ್ಚಿ, ಪೂರ್ವಕ್ಕೆ ನಿರ್ಮಿಸಿರುವ ಘಟನೆ ನಡೆದಿದೆ.

ಸರ್ಕಾರ ಕೃಷಿ ಕ್ಷೇತ್ರ ಅಭಿವೃದ್ಧಿ ಪಡಿಸಲು, ಅಗತ್ಯ ಯೋಜನೆ ಅನುಷ್ಠಾನ, ಕೃಷಿಗೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡಲು ನಗರದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ನಿರ್ಮಿಸಲಾಗಿತ್ತು. ಅಂತೆಯೇ 1988ರ ಜೂ.16 ರಂದು ಅಂದಿನ ಕೃಷಿ ಸಚಿವ ಆರ್‌. ವಿ.ದೇಶಪಾಂಡೆ, ಶಾಸಕ ಆರ್‌. ವೆಂಕಟರಾಮಯ್ಯ ಉದ್ಘಾಟನೆ ಮಾಡಿದ್ದರು.

ರೈತರ ಸೇವೆಗೆ ಬಳಕೆ: ಅಂದಿನಿಂದ ತಾಲೂಕಿನ ಆವಣಿ, ದುಗ್ಗಸಂದ್ರ, ಬೈರಕೂರು, ತಾಯಲೂರು, ಕಸಬಾ ಹೋಬಳಿಗಳ 350 ಹಳ್ಳಿಗಳ ರೈತರಿಗೆ ಬೆಳೆಗೆ ಸಂಬಂಧಿಸಿದಂತೆ ಮಾಹಿತಿ, ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ, ಕೃಷಿ ಸಲಕರಣೆಗಳ ವಿತರಣೆ, ಯೋಜನೆಗಳ ಅನುಷ್ಠಾನ, ನಿರ್ವಹಣೆ ಕಾರ್ಯಕ್ರಮವನ್ನು ಈ ಕಚೇರಿಯಿಂದ ಅಧಿಕಾರಿಗಳು ಮಾಡುತ್ತಿದ್ದರು.

31 ವರ್ಷಗಳಿಂದ ಸೇವೆ: ಇಂತಹ ಕಚೇರಿಯಲ್ಲಿ 31 ವರ್ಷಗಳಿಂದ ಹಲವು ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರು ಸೇವೆ ಸಲ್ಲಿಸಿದ್ದಾರೆ. ಅದರಂತೆ ವರ್ಷದಿಂದ ಎಡಿಎ ಆಗಿ ಇದೇ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಮರನಾರಾಯಣರೆಡ್ಡಿ, ಮೂರುನಾಲ್ಕು ದಿನಗಳಿಂದ ತಮ್ಮ ಈ ಕೃಷಿ ಇಲಾಖೆ ಕಚೇರಿ ವಾಸ್ತು ದೋಷವೆಂದು ದಕ್ಷಿಣ ದಿಕ್ಕಿಗೆ ಇದ್ದ ಬಾಗಿಲನ್ನು ಮುಚ್ಚಿ, ಪೂರ್ವ ದಿಕ್ಕಿಗೆ ಇದ್ದ ಗೋಡೆ ಹೊಡೆದು ಹೊಸದಾಗಿ ನಿರ್ಮಿಸಿದ್ದಾರೆ ಎಂದು ರೈತರು ಆರೋಪಿಸುತ್ತಾರೆ.

31 ವರ್ಷಗಳಿಂದ ಯಾವ ಅಧಿಕಾರಿಗಳಿಗೂ ಕಂಡು ಬರದ ಈ ವಾಸ್ತುದೋಷವು, ಈಗ ಎಡಿಎಗೆ ಏಕೆ ಕಂಡು ಬಂತು? ಅಲ್ಲದೆ, ಸರ್ಕಾರಿ ಅಧಿಕಾರಿಯಾಗಿ ಸರ್ಕಾರದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡಬೇಕೇ ವಿನಃ, ವಾಸ್ತು ದೋಷ, ಯಾರೋ ಹೇಳಿದ ಮಾತು ನಂಬಿಕೊಂಡು ಸಾರ್ವಜನಿಕರ ಸ್ವತ್ತಾದ ಸರ್ಕಾರಿ ಕಚೇರಿಯನ್ನೇ ತಮಗೆ ಬಂದಂತೆ ಬದಲಿಕೊಳ್ಳುವುದು ಸರಿಯಲ್ಲ ಎಂಬುದು ರೈತರ ಆರೋಪ.

ಮೇಲಧಿಕಾರಿಗಳ ಅನುಮತಿ ಇಲ್ಲದೇ ಮೂರು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಸರ್ಕಾರಿ ಕೃಷಿ ಇಲಾಖೆ ಕಚೇರಿ ವಾಸ್ತುದೋಷವೋ ? ಅಥವಾ ಮಲಮೂತ್ರ ವಿಸರ್ಜನೆಯೋ? ಒಟ್ಟಿನಲ್ಲಿ ದುರಸ್ತಿ ಮಾಡಿಸುತ್ತಿರುವುದಕ್ಕೆ ರೈತರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.