ವೆಂಕಟಾಪುರ: ಪುರಾತನ ಶ್ರೀನಿವಾಸ ಸ್ವಾಮಿಗೆ ವಿಶೇಷ ಪೂಜ


Team Udayavani, Jan 14, 2022, 9:41 PM IST

ರತಯುಇಒಇಉಯತರೆ

ಕೋಲಾರ: ತಾಲೂಕಿನ ವೆಂಕಟಾಪುರ ಗ್ರಾಮದ 600 ವರ್ಷ ಪುರಾತನ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜೆ, ಅಲಂಕಾರ, ಅನ್ನದಾನ ನಡೆಸಲಾಗಿದ್ದು, ಮಾಜಿ ಸಚಿವ ವರ್ತೂರು ಪ್ರಕಾಶ್‌, ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಮತ್ತಿತರರು ಸ್ವಾಮಿ ದರ್ಶನ ಪಡೆದರು.

ಲಕ್ಷ್ಮೀವೆಂಕಟೇಶ್ವರಸ್ವಾಮಿ ದೇವಾಲಯ ದಿಂದಲೇ ಈ ಗ್ರಾಮಕ್ಕೆ ವೆಂಕಟಾಪುರ ಎಂದು ಹೆಸರು ಬಂದಿದೆ ಎನ್ನಲಾಗಿದ್ದು, ಶಿಥಿಲವಾಗಿದ್ದ ದೇವಾಲಯವನ್ನು ಕಳೆದ 10 ವರ್ಷಗಳ ಹಿಂದೆ ಕೋಲಾರದ ದೊಡ್ಡಗೌಡರು ಸೇರಿ ಗ್ರಾಮಸ್ಥರು ಜೀರ್ಣೋದ್ಧಾರ ಮಾಡಿದ್ದರು. ದೇವಾಲಯವನ್ನು ಅತ್ಯಂತ ಸುಂದರವಾಗಿ ನವೀಕರಿಸಲಾಗಿದ್ದು, ಪೂಜಾ ಕಾರ್ಯಗಳನ್ನು ಅರ್ಚಕರಾದ ಮೋಹನ್‌ ಕುಮಾರ್‌ ನೆರವೇರಿಸಿದರು.

ದೇವರ ದರ್ಶನದಿಂದ ಮನಸ್ಸಿಗೆ ನೆಮ್ಮದಿ: ಪೂಜೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್‌, ವೈಕುಂಠ ಏಕಾದಶಿಯಂದು ಶ್ರೀನಿವಾಸನ ದರ್ಶನದಿಂದ ಇಷ್ಟಾರ್ಥ ನೆರವೇರುತ್ತದೆ ಎಂಬ ನಂಬಿಕೆ ಇದೆ. ಜಿಲ್ಲೆಯ ಜನತೆಗೆ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು. ದೇವರ ದರ್ಶನದಿಂದ ಮನಸ್ಸಿಗೂ ನೆಮ್ಮದಿ ಸಿಗುತ್ತದೆ, ಈ ಸ್ವಾಮಿಯ ಆಶೀರ್ವಾದದಿಂದ ಮುಂದಿನ ಬಾರಿ ಶಾಸಕನಾಗಿ ಗೆದ್ದು ಬಂದು ಜನರ ಸೇವೆ ಮತ್ತೆ ಮಾಡುವ ಅವಕಾಶ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸ್ವಾಮಿ ದರ್ಶನ ಪಡೆದರಲ್ಲದೇ, ವೆಂಕಟಾಪುರದ ಶ್ರೀನಿವಾಸನ ಮಹಿಮೆ ಅಪಾರವಾಗಿದ್ದು, ಕೋವಿಡ್‌ ನಾಶವಾಗಿ ಜನತೆಗೆ ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸಿದರು. ಪೂಜಾ ಕಾರ್ಯದಲ್ಲಿ ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಮಾಜಿ ಸದಸ್ಯೆ ರೂಪಶ್ರೀ, ಮಂಜುನಾಥ್‌, ಜಿಲ್ಲಾ ಕಾಂಗ್ರೆಸ್‌ ಮುಖಂಡ ಗೋಪಾಲಗೌಡ, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷ ರಾಜಣ್ಣ, ಸದಸ್ಯ ನಂಜುಂಡಗೌಡ, ಮುಖಂಡರಾದ ಮುಳ್ಳಹಳ್ಳಿ ಮಂಜುನಾಥ್‌, ಮುನಿರಾಜ್‌ ಮತ್ತಿತರರು ಸ್ವಾಮಿ ದರ್ಶನ ಪಡೆದರು.

 

 

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.