ಸಮಸ್ಯೆ ಬಗೆಹರಿಸಲು ವಾರ್ಡ್‌ಗಳಿಗೆ ಭೇಟಿ
Team Udayavani, Jan 17, 2020, 12:57 PM IST
ಗೌರಿಬಿದನೂರು: ನಗರದ ಜನರಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಚರಂಡಿ, ರಸ್ತೆ, ಬೀದಿದೀಪಗಳ ವ್ಯವಸ್ಥೆಗೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಶಾಸಕ ಶಿವಶಂಕರರೆಡ್ಡಿ ತಿಳಿಸಿದರು.
ನಗರಸಭೆ ಅಧಿಕಾರಿಗಳೊಂದಿಗೆ ನಗರದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಹಾಗೂ ಅಹವಾಲು ಗಳನ್ನು ಆಲಿಸಿ ಮಾತನಾಡಿದರು. ನ್ಯಾಷನಲ್ ಕಾಲೇಜು ಸಮೀಪದ ಜೀವನ್ ಉಪಾಹಾರ ಮಂದಿರದಲ್ಲಿ ಉಪಾಹಾರ ಸೇವಿಸಿದ ನಂತರ ನಾಗರಿಕ ರೊಂದಿಗೆ ಚರ್ಚೆನಡೆಸಿದರು. ರಾಜ್ಯದಲ್ಲಿನ 140 ನಗರಸಭೆ ಹಾಗೂ ಇತರ ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ವಿಳಂಬ ವಾಗುತ್ತಿದೆ. ಈ ಕಾರಣದಿಂದ ಜನರಿಗೆ ಮೂಲ ಸೌಲಭ್ಯ ಒದಗಿಸಲು ವಿಳಂಬ ವಾಗುತ್ತಿದೆ ಎಂದರು.
ನಗರದಲ್ಲಿನ ನಾಗರಿಕರಿಗೆ ಯಾವುದೇ ರೀತಿ ಮೂಲ ಸೌಲಭ್ಯಗಳಿಗೆ ತೊಡಕಾಗಬಾರದು. ಆ ಕಾರಣದಿಂದ ರಸ್ತೆಗಳಿಗೆ ಡಾಂಬರೀಕರಣ, ನೀರಿನ ಸಮಸ್ಯೆ ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾ ಗಿದೆ. ನಗರದಲ್ಲಿ ಒಳ ಚರಂಡಿ ವ್ಯವಸ್ಥೆ ಮಾಡಲು ಸುಮಾರು 100 ಕೋಟಿ ರೂ. ವೆಚ್ಚವಾಗಲಿದೆ. ಇದಕ್ಕೆ ಬದಲಿ ವ್ಯವಸ್ಥೆ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ನಗರದಲ್ಲಿನ ಸರ್ಕಾರಿ ಐಟಿಐ ಕಾಲೇಜನ್ನು ವೀಕ್ಷಿಸಿದ ಶಾಸಕರು ಹೊಸ ಮಿನಿ ವಿಧಾನಸೌಧದಲ್ಲಿ ಸರ್ಕಾರಿ ಐಟಿಐ ಹಾಗೂ ಸರ್ಕಾರಿ ಜಿಟಿಟಿಸಿ ಪಾಲಿಟೆಕ್ನಿಕ್‌ಗೆ ಒಂದು ಕೊಠಡಿ ನೀಡಿ ಜನರಿಗೆ ಅಲ್ಲಿನ ಕೋರ್ಸ್‌ಗಳು ಹಾಗೂ ಇತರ ವಿಷಯಗಳನ್ನು ತಿಳಿಸಲು ಅನುವು ಮಾಡಿಕೊಡಲಾಗುವುದು ಎಂದರು. ಹಳೆ ರಸ್ತೆಯಲ್ಲಿರುವ ಪ್ರಗತಿ ಬಾಲಕಿಯರ ವಸತಿ ನಿಲಯ ವೀಕ್ಷಿಸಿ ಸಂತೃಪ್ತಿ ವ್ಯಕ್ತ ಪಡಿಸಿದರು. ನಗರ ವೀಕ್ಷಣೆಯಲ್ಲಿ ಶಾಸಕರೊಂದಿಗೆ ನಗರಸಭೆ ಆಯುಕ್ತ ಚಲಪತಿ, ಕಾಂಗ್ರೆಸ್ ಮುಖಂಡರಾದ ಪ್ರಕಾಶ ರೆಡ್ಡಿ, ರಾಘವೇಂದ್ರ ಹನು ಮಾನ್, ಅಶ್ವತ್ಥನಾರಾಯಣ, ನಗರಸಭೆ ಸದಸ್ಯರಾದ ಗಿರಿ, ಕಲೀಂವುಲ್ಲಾ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.