ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್
Team Udayavani, May 27, 2024, 9:29 PM IST
ಕೋಲಾರ: ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂತ್ರಿಗಳು 187 ಕೋಟಿ ರೂ. ಪಡೆದಿದ್ದಾರೆಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಲೂಟಿ ಸರಕಾರ ಎಂದು ಹೇಳಿದರೆ ದಾಖಲೆ ಕೇಳುತ್ತಿದ್ದ ಸಿದ್ದರಾಮಯ್ಯ ಅವರಿಗೆ ಈಗ ದಾಖಲೆ ಸಿಕ್ಕಿದೆ. ಈಗ ಏನು ಮಾಡುತ್ತಾರೆ? ಪ್ರಕರಣ ಮುಚ್ಚಿಹಾಕಲು ಅಡ್ಡದಾರಿ ಹಿಡಿಯುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸರಕಾರ ಭ್ರಷ್ಟಾಚಾರ ಮಾಡುತ್ತಿದೆ. ರಾಜ್ಯ ಸರಕಾರ ಅವರ ಹೈಕಮಾಂಡ್‌ಗೆ ಹಣ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದರು. ಆದ್ದರಿಂದ ಮುಖ್ಯಮಂತ್ರಿಗಳಿಗೆ ಗೌರವ ಇದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಲಿ ಎಂದು ಆಗ್ರಹಿಸಿದರು.
ಲೂಟಿ ಮಾಡುತ್ತಿದ್ದಾರೆ
ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದವರು ಈಗ ನಿರಂತರವಾಗಿ ಲೂಟಿ ಮಾಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ಲೂಟಿಕೋರರ ಸರಕಾರ.
ರಾಜ್ಯ ಸರಕಾರ ನಿಷ್ಕ್ರಿಯವಾಗಿರುವುದರಿಂದ ಕೈಗಾರಿಕೆಗಳು ಚೆನ್ನೈಯತ್ತ ಹೋಗುತ್ತಿವೆ. ಕೈಗಾರಿಕೆದಾರರ ಮನವೊಲಿಸಿ, ಅವರಿಗೆ ಸೌಲಭ್ಯ ಒದಗಿಸಲು ಈ ಸರಕಾರಕ್ಕೆ ಪುರುಸೊತ್ತಿಲ್ಲ. ಲೂಟಿ ಮಾಡುವುದೇ ಕೆಲಸವಾಗಿಬಿಟ್ಟಿದೆ ಎಂದು ಅಶೋಕ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!