ನಗರದಲ್ಲಿ ಹೆಜ್ಜೆ ಇಟ್ಟಲ್ಲೆಲ್ಲಾ ಸಮಸ್ಯೆಗಳೇ

Team Udayavani, Sep 18, 2019, 12:33 PM IST

kolar-tdy-1

ನಗರದಲ್ಲಿ ಮಂಗಳವಾರ ಮುಂಜಾನೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ನಗರ ಸಂಚಾರ ನಡೆಸುವ ಮೂಲಕ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು.

ಕೋಲಾರ: ರಸ್ತೆ ತುಂಬ ಗುಂಡಿ, ಬದಿಯಲ್ಲಿ ಕಸದ ರಾಶಿ, ಅದಕ್ಕೆ ಬೆಂಕಿ ಇಟ್ಟು ಬೂದಿ ಮಾಡಿರುವುದು, ಅಮೃತ ಯೋಜನೆಯ ಕಳಪೆ ಕಾಮಗಾರಿ, ಯುಜಿಡಿ ಅವ್ಯವಸ್ಥೆ ಹೀಗೆ.. ಹೆಜ್ಜೆ ಇಟ್ಟಲೆಲ್ಲಾ ಸಮಸ್ಯೆಗಳೇ, ಸಾರ್ವಜನಿಕರಿಂದ ದೂರುಗಳ ಸುರಿಮಳೆ…ಇವು ಮಂಗಳವಾರ ಮುಂಜಾನೆ ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರ ಅನುಭವಕ್ಕೆ ಬಂದ ವಿಚಾರಗಳು.

ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಮಂಗಳವಾರ ಮುಂಜಾನೆ ದಿಢೀರ್‌ ಎಂದು ಏಕಾಂಗಿಯಾಗಿ ನಗರದಲ್ಲಿ ಸಂಚಾರ ಆರಂಭಿಸಿ ಸಮಸ್ಯೆಗಳ ಖದ್ದು ಪರಿಶೀಲನೆ ನಡೆಸಲು ಮುಂದಾದರು. ಜಿಲ್ಲಾಧಿಕಾರಿ ಹೀಗೆ ನಗರ ಸಂಚಾರ ನಡೆಸುತ್ತಿರುವುದು ತಿಳಿಯುತ್ತಿದ್ದಂತೆಯೇ ನಗರಸಭೆ, ಕೆಯುಡಬ್ಲ್ಯೂ ಎಸ್‌ ಮತ್ತು ಅಮೃತ ಯೋಜನೆಯ ಅಧಿಕಾರಿಗಳು ಅವರ ಜೊತೆ ಸೇರಿಕೊಂಡರು.

ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ: ಮನೆಯಿಂದ ಮೆಕ್ಕೆ ವೃತ್ತ ಹಳೇ ಬಸ್‌ ನಿಲ್ದಾಣ, ಸರ್ವಜ್ಞ ಉದ್ಯಾನ, ಕಾಳಮ್ಮ ಗುಡಿ ರಸ್ತೆ, ಹೊಸ ಬಸ್‌ ನಿಲ್ದಾಣ ವೃತ್ತ, ಬೋವಿ ಕಾಲೋನಿ, ಹವೇಲಿ ಮೊಹಲ್ಲಾ, ಎಂ.ಬಿ.ರಸ್ತೆ, ಅಮ್ಮವಾರಿಪೇಟೆ ರಸ್ತೆ, ಮತ್ತೆ ಹಳೇ ಬಸ್‌ ನಿಲ್ದಾಣಕ್ಕೆ ಎರಡು ಗಂಟೆ ಕಾಲ ಸಂಚರಿಸಿ, ಅಲ್ಲಿನ ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ಸೇವಿಸಿ ಸಂಚಾರದುದ್ದಕ್ಕೂ ಸಾರ್ವಜನಿಕರಿಂದ ಅಹವಾಲು ಆಲಿಸಿದರು.

ಸಮಸ್ಯೆಗಳ ಆಲಿಕೆ: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳು, ಅಮೃತ ಯೋಜನೆಯ ಒಳಚರಂಡಿ ಮಂಡಳಿ ಕಾಮಗಾರಿ, ನಗರೋತ್ಥಾನ, ಅಮೃತ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು ಪ್ರಮುಖವಾಗಿ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾರ್ಗದುದ್ದಕ್ಕೂ ಸಾರ್ವಜನಿಕರಿಂದ ಕುಡಿಯುವ ನೀರು, ಸ್ವಚ್ಛತೆ, ಕಸ ವಿಲೇವಾರಿ ಮತ್ತಿತರ ವಿಷಯಗಳ ಕುರಿತಂತೆ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದರು.

ಕಸ ವಿಲೇವಾರಿ ಮಾಡಿ: ಸರ್ವಜ್ಞ ಉದ್ಯಾನದಲ್ಲಿನ ಅವ್ಯವಸ್ಥೆ, ಅಲ್ಲಿ ನಿರ್ಮಾಣವಾಗುತ್ತಿರುವ ಬೃಹತ್‌ ಟ್ಯಾಂಕ್‌ ಕಾಮಗಾರಿ ಪರಿಶೀಲಿಸಿ, ರಸ್ತೆ ಬದಿ, ಪಾರ್ಕ್‌ ನ ಸುತ್ತಮುತ್ತಲೂ ಸುರಿದಿದ್ದ ಕಸದ ರಾಶಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಮೃತ ಯೋಜನೆಯಡಿ ಪಾರ್ಕ್‌ನಲ್ಲಿ ಅಳವಡಿಸಿರುವ ಕ್ರೀಡಾ ಮತ್ತು ಕುಳಿತುಕೊಳ್ಳುವ ಸಾಧನಗಳು ಕಳಪೆಯಾಗಿ, ಕಿತ್ತು ಹೋಗಿರುವುದನ್ನು ಗಮನಿಸಿ ಕೂಡಲೇ ಬದಲಾಯಿಸುವಂತೆ ಸೂಚಿಸಿದರು.

ಎರಡು ಗಂಟೆಗಳ ಕಾಲ ನಗರವನ್ನು ಸುತ್ತಾಡಿದ ನಂತರ ಹಳೇ ಬಸ್‌ ನಿಲ್ದಾಣದ ಇಂದಿರಾ ಕ್ಯಾಂಟೀನ್‌ಗೆ ಆಗಮಿಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಖುದ್ದು ಸಾಲಿನಲ್ಲಿ ನಿಂತು ಟೋಕನ್‌ ಖರೀದಿಸಿ ಇಡ್ಲಿ ಪಡೆದುಕೊಂಡು ಅಲ್ಲಿಯೇ ಸೇವಿಸಿ ರುಚಿಯ ತಪಾಸಣೆ ನಡೆಸಿದರು.

ಮಂಗಳವಾರ ಮುಂಜಾನೆ ನಗರದಲ್ಲಿ ಸುತ್ತಾಡಿದ ನಂತರ ಜಿಲ್ಲಾಧಿಕಾರಿ ತಾವು ಗಮನಿಸಿದ, ಸಾರ್ವಜನಿಕರಿಂದ ಆಲಿಸಿದ ಅಹವಾಲುಗಳನ್ನು ಪರಿಹರಿಸುವ ಸಲುವಾಗಿ ಅಧಿಕಾರಿಗಳ ಸಭೆ ಕರೆದು ಪರಿಶೀಲಿಸುವುದಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಯೋಜನಾಧಿಕಾರಿ ರಂಗಸ್ವಾಮಿ, ನಗರಸಭೆ ಸಮುದಾಯ ಸಂಘಟನಾಧಿಕಾರಿ ಶಿವಪ್ರಕಾಶ್‌, ಕೆಯುಡಬ್ಲ್ಯುಎಸ್‌ ಮತ್ತು ನಗರಸಭೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು

Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

6

Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.