ಅಂತರಗಂಗೆ ಪ್ರಕೃತಿ ಮಡಿಲಲ್ಲಿ ಯೋಗ ದಿನ
Team Udayavani, Jun 8, 2022, 4:24 PM IST
ಕೋಲಾರ: ನಗರ ಸಮೀಪದ ಅಂತರಗಂಗೆ ಬೆಟ್ಟದ ತಪ್ಪಲಿನಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿ ಬಾರಿಯಂತೆ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂ ಗಣದಲ್ಲಿ ಹಮ್ಮಿಕೊಂಡಿದ್ದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಇಲಾಖೆ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಈ ಬಾರಿ ಯೋಗ ದಿನಾಚರಣೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ 15 ಸಾವಿರ ಮಕ್ಕಳು ಭಾಗವಹಿಸಲಿದ್ದು, ಅವರಿಗೆ ಸೂಕ್ತ ರೀತಿಯ ಸಾರಿಗೆ ವ್ಯವಸ್ಥೆ, ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಸೂಕ್ತ ಭದ್ರತೆ ಒದಗಿಸಿ: ಯೋಗ ಕಾರ್ಯಕ್ರಮವು ಜೂ.21ರ ಬೆಳಗ್ಗೆ 7ರಿಂದ 9 ಗಂಟೆಯವರೆಗೂ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು. ಅರಣ್ಯ ಇಲಾಖೆಯವರು ಬೆಟ್ಟದಲ್ಲಿ ಯಾವುದೇ ಪ್ರಾಣಿ ಗಳಿಂದ ಯಾರಿಗೂ ಹಾನಿಯಾಗದಂತೆ ಸೂಕ್ತ ಭದ್ರತೆ ಯನ್ನು ನೀಡಬೇಕು ಎಂದು ಹೇಳಿದರು.
ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ಭಾಗಿ: ಜಿಲ್ಲೆಯ ಎಲ್ಲರೂ ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ. ಮುಂಬರುವ ವರ್ಷಕ್ಕೆ ಗಿನ್ನಿಸ್ ದಾಖಲೆ ಮಾಡುವಂತೆ ನಮ್ಮ ಜಿಲ್ಲೆ ಮುಂದಾಗಬೇಕು. ಕಾರ್ಯಕ್ರಮದಲ್ಲಿ 4 ಆ್ಯಂಬುಲೆನ್ಸ್, 1 ಆಗ್ನಿಶಾಮಕದಳ ವಾಹನ, 40 ವೈದ್ಯಕೀಯ ಸಿಬ್ಬಂದಿ, 200 ಎನ್‌ಸಿಸಿ ವಿದ್ಯಾರ್ಥಿಗಳು, 200 ಹೋಮ್‌ಗಾರ್ಡ್ಸ್, 150 ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
10 ಸಾವಿರ ಜನರ ಕಾಲ್ನಡಿಗೆ: ನಗರಸಭೆಯವರು 20 ಮೊಬೈಲ್ ಶೌಚಾಲಯ, 10 ನೀರಿನ ಟ್ಯಾಂಕರ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಪೊಲೀಸ್ ಇಲಾಖೆಯವರು ಸೂಕ್ತ ಭದ್ರತೆ ಒದಗಿಸಬೇಕು. 800 ಯೋಗ ತರಬೇತಿದಾರರಿಂದ ದಿನಾಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಯೋಗವನ್ನು ಒದಗಿಸಲಾಗುವುದು. ಯೋಗ ಮಾಡುವುದರಿಂದ ನಮ್ಮ ಆರೋಗ್ಯವು ರೋಗ ಮುಕ್ತವಾಗಿದೆ. ಸಂಸದರ ನೇತೃತ್ವದಲ್ಲಿ 10 ಸಾವಿರ ಜನರು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ತಲುಪಲಿದ್ದಾರೆ ಎಂದು ತಿಳಿಸಿದರು.
ಯೋಗದ ದಿನಾಚರಣೆಯಲ್ಲಿ ಭಾಗವಹಿಸೋಣ: ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಅಂತಾ ರಾಷ್ಟ್ರೀಯ ಯೋಗ ದಿನವನ್ನು ಜೂ.21ರಂದು ಆಚರಣೆ ಮಾಡುತ್ತಿದ್ದು, ಯೋಗದ ಬಗ್ಗೆ ಎಲ್ಲರಿಗೂ ತಿಳಿವಳಿಕೆ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕು. ಜಿಲ್ಲೆಯ ಬೆಟ್ಟದಲ್ಲಿ ಯೋಗ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುವುದು. ಎಲ್ಲರೂ ಜವಾ ಬ್ದಾರಿಯಿಂದ ಭಾಗವಹಿಸೋಣ ಎಂದು ತಿಳಿಸಿದರು.
ಕಟ್ಟುನಿಟ್ಟಾಗಿ ಪಾಲಿಸಿ: ಜಿಪಂ ಸಿಇಒ ಯುಕೇಶ್ ಕುಮಾರ್ ಮಾತನಾಡಿ, ಪ್ರತಿಯೊಬ್ಬ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಯೋಗದ ಮಹತ್ವವನ್ನು ಜನರಿಗೆ ತಿಳಿಸಬೇಕು. ತಮ್ಮ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕೋಲಾರ ತಹಶೀಲ್ದಾರ್ ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್ ಕುಮಾರ್, ಜಿಲ್ಲಾ ಆಯುಷ್ ಅ ಧಿಕಾರಿಗಳಾದ ರಾಘವೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರಪ್ಪ, ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಸಹಾ ಯಕ ನಿರ್ದೇಶಕ ಶಶಿಕಲಾ ಸೇರಿ ಜಿಲ್ಲಾ, ತಾಲೂಕು ಮಟ್ಟದ ಅ ಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.