ಕೋವಿಡ್‌ ಪರೀಕ್ಷಾ ವರದಿ ಸಕಾಲಕ್ಕೆ ನೀಡಿ

ಆರೋಗ್ಯ ಇಲಾಖೆಗೆ ಜಿಪಂ ಅಧ್ಯಕ್ಷರ ಸೂಚನೆ

Team Udayavani, Nov 26, 2020, 3:07 PM IST

ಕೋವಿಡ್‌ ಪರೀಕ್ಷಾ ವರದಿ ಸಕಾಲಕ್ಕೆ ನೀಡಿ

ಕೋಲಾರ: ಈಗಾಗಲೇ ಪದವಿ ತರಗತಿಗಳು ನ.17 ರಿಂದ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಕಾಲೇಜಿಗೆ ಹೋಗಬೇಕಾದರೆ ಕೋವಿಡ್‌ 19 ಪರೀಕ್ಷೆ ಮಾಡಿಸಿ ನೆಗೆಟಿವ್‌ ವರದಿ ಬಂದ ನಂತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಆರೋಗ್ಯ ಇಲಾಖೆಯವರು ಸಕಾಲದಲ್ಲಿಕೋವಿಡ್‌ ಪರೀಕ್ಷಾ ವರದಿ ನೀಡಬೇಕೆಂದು ಜಿಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ ಕುಮಾರ್‌ಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯ ರೈತರ ಜಮೀನಿನಲ್ಲಿ ಇರುವ ನೀಲಗಿರಿಯನ್ನು ಸ್ವಯಂ ಪ್ರೇರಿತವಾಗಿ ರೈತರು ತೆರವುಗೊಳಿಸಬೇಕು. ಸರ್ಕಾರಿ ಜಮೀನುಗಳಲ್ಲಿ ಇರುವ ನೀಲಗಿರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಬೇಕು. ಗ್ರಾಪಂಗಳ ವ್ಯಾಪ್ತಿಯಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿರುವ ಪಿಡಿಒಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

7 ದಿನದಲ್ಲಿ ವರದಿ ನೀಡಿ: ನ.26 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ವ್ಯಾಪ್ತಿಯ ಆಯಾ ತಾಲೂಕಿನ ಸಮಾಜ ಕಲ್ಯಾಣಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ ಮಳೆ ನೀರಿನ ಕೊಯ್ಲು ಅಳವಡಿಕೆಯಲ್ಲಿ ಆಗಿರುವ ಲೋಪದೋಷಗಳನ್ನು ಜಿಪಂ ಸದಸ್ಯರನ್ನು ಒಳಗೊಂಡ ತಂಡ ತನಿಖೆ ನಡೆಸಿ ವರದಿ ನೀಡಬೇಕು. ಕಳೆದ ಎರಡು ವರ್ಷದ ಹಿಂದೆ ಅರಣ್ಯ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಿತರಿಸಲಾಗಿರುವ ಗ್ಯಾಸ್‌ ಕನೆಕ್ಷನ್‌ ನಲ್ಲಿ ಆಗಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ಸಮಿತಿಯು 7 ದಿನಗಳೊಳಗಾಗಿ ವರದಿ ನೀಡಬೇಕು ಎಂದು ಆದೇಶಿಸಿದರು.

ಅನುಮೋದನೆ: ಜಿಪಂ ಸಿಇಒ ಎಂ.ಆರ್‌. ರವಿಕುಮಾರ್‌ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗ‌ಳಲ್ಲಿ ಅಳವಡಿಸಿರುವ ಮಳೆ ನೀರಿನ ಕೊಯ್ಲು ಪದ್ಧತಿ ಅಳವಡಿಕೆಯಲ್ಲಿ ಅಕ್ರಮಗಳಾಗಿರುವ ಬಗ್ಗೆ ದೂರುಗಳಿದ್ದು, ಈ ಸಂಬಂಧ ಆ ಭಾಗದ ಜಿಪಂ ಸದಸ್ಯರನ್ನು ಒಳಗೊಂಡ ಸಮಿತಿ ತನಿಖೆ ನಡೆಸಿ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ 156 ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಾಪನೆಗೆ ಜಿಲ್ಲಾಧಿಕಾರಿಗಳು ಜಾಗ ನೀಡಿದ್ದು, ಇದರಲ್ಲಿ ಈಗಾಗಲೇ 130ಗ್ರಾಪಂಗಳಿಗೆ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದರು.

ಪದೋನ್ನತಿ ಇಲ್ಲ: ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 47 ಹುದ್ದೆಗಳಿಗೆ ಬಿಲ್‌ ಕಲೆಕ್ಟರ್‌ ಹುದ್ದೆಯಿಂದ ಗ್ರೇಡ್‌ – 2 ಕಾರ್ಯದರ್ಶಿಗಳಿಗೆ ಪದೋನ್ನತಿ ನೀಡಲು ಆದೇಶ ನೀಡಲಾಗಿತ್ತು. ಇದರ ಜೊತೆಗೆ ನೇರ ನೇಮಕಾತಿಗೆ ಅರ್ಹರಿದ್ದ 16 ಹುದ್ದೆಗಳಿಗೆ ನೇಮಕಾತಿಗೆ ಅವಕಾಶ ನೀಡಲು ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಕೋವಿಡ್‌ 19 ಹಿನ್ನೆಲೆಯಲ್ಲಿ ಯಾವುದೇ ಹುದ್ದೆಗಳಿಗೆ ಪದೋನ್ನತಿ ಮತ್ತು ನೇಮಕಾತಿ ಮಾಡಬಾರದೆಂದು ಸರಕಾರ ಆದೇಶ ನೀಡಿದೆ. ಪುನಃ 47 ಹುದ್ದೆಗಳ ಪದೋನ್ನತಿಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ, ವಿಧಾನಪರಿಷತ್‌ ಸದಸ್ಯ ಗೋವಿಂದರಾಜು, ಜಿಪಂ ಉಪಾಧ್ಯಕ್ಷ ಯಶೋದಮ್ಮ ಕೃಷ್ಣಮೂರ್ತಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ,ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಪ್ರಸಾದ್‌, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ ಅಂಬರೀಶ್‌ ಸೇರಿದಂತೆ ಜಿಪಂ ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಸ್ತುಕ್ರಮ ಎಚ್ಚರಿಕೆ :  ಅಬಕಾರಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಮಾತನಾಡಿ, ಡಿಸೆಂಬರ್‌ ಮೊದಲ ವಾರದಲ್ಲಿ ಗ್ರಾಪಂ ಚುನಾವಣೆಗೆಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಸರ್ಕಾರಿಜಮೀನುಗಳಲ್ಲಿ ಇರುವ ನೀಲಗಿರಿಯನ್ನು ಅರಣ್ಯ ಇಲಾಖೆ ವತಿಯಿಂದ ರವುಗೊಳಿಸಬೇಕು.ನರೇಗಾ ಯೋಜನೆಯಡಿ 56 ಕೋಟಿ ರೂ.ಹಣ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಚುರುಕಾಗಿ ಕೆಲಸ ನಿರ್ವಹಿಸಬೇಕು. ಸಮರ್ಪಕವಾಗಿ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವಿವಿಧ ರೀತಿಯ ಹಲವಾರು ಯೋಜನೆಗಳು ಬರುತ್ತದೆ. ನರೇಗಾ ಯೋಜನೆಯಲ್ಲಿಕೋಟ್ಯಂತರ ರೂ. ಬಳಕೆಯಾಗುತ್ತದೆ. ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಕಾಮಗಾರಿಗಳ ಗುಣಮಟ್ಟವನ್ನು ಜನಪ್ರತಿನಿಧಿಗಳು ಪರಿಶೀಲಿಸಬೇಕು. ಎಸ್‌.ಮುನಿಸ್ವಾಮಿ, ಸಂಸದ

ರಾಜ್ಯದಲ್ಲಿ ಕೋವಿಡ್‌ಟೆಸ್ಟ್‌ ಪರೀಕ್ಷೆಯಲ್ಲಿಕೋಲಾರ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ರ್ಯಾಪಿಡ್‌ಟೆಸ್ಟ್‌ನಲ್ಲಿಹತ್ತು ನಿಮಿಷದಲ್ಲಿ ಹಾಗೂ ಆರ್‌ಟಿಸಿಪಿಆರ್‌ ಟೆಸ್ಟ್‌ನಲ್ಲಿ 48 ಗಂಟೆಗಳಲ್ಲಿ ವರದಿಬರುತ್ತದೆ.ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆಆದರೆ ಸಂಬಂಧಿಸಿದ ಅಕಾರಿಗಳ ವಿರುದ್ಧ ಶಿಸ್ತುಕ್ರಮಕೈಗೊಳ್ಳಲಾಗುವುದು.ಎಂ.ಆರ್‌.ರವಿಕುಮಾರ್‌, ಜಿಪಂ ಸಿಇಒ

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.