ಕೆಪಿಎಸ್ ಪ್ರತಿ ಶಾಲೆಗೆ 3 ಕೋಟಿ ರೂ.
ಒಂದೇ ಸೂರಿನಡಿ ಎಲ್ಕೆಜಿಯಿಂದ ದ್ವಿತೀಯ ಪಿಯುವರೆಗೂ ಶಿಕ್ಷಣ: ಡಿಡಿಪಿಐ ಕೆ.ರತ್ನಯ್ಯ
Team Udayavani, May 30, 2019, 11:20 AM IST
ಕೋಲಾರ ತಾಲೂಕಿನ ನರಸಾಪುರದಲ್ಲಿ ಕೆಪಿಎಸ್ ಶಾಲೆ ಆರಂಭೋತ್ಸವದಲ್ಲಿ ಪಾಲ್ಗೊಂಡಿದ್ದ ಡಿಡಿಪಿಐ ಕೆ.ರತ್ನಯ್ಯ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದರು
ಕೋಲಾರ: ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್)ಗಳ ಮೂಲಕ ಮಕ್ಕಳಿಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಒಂದೇ ಸೂರಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲಿದ್ದು, ಮೂಲ ಸೌಲಭ್ಯಗಳಿಗಾಗಿ ಪ್ರತಿ ಶಾಲೆಗೂ ತಲಾ 3 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು.
ತಾಲೂಕಿನ ನರಸಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 24 ಕೆಪಿಎಸ್ ಶಾಲೆಗಳು ಆರಂಭಗೊಂಡಿದ್ದು, ಈ ಶಾಲೆಗಳಲ್ಲಿ ಉಚಿತ ಶಿಕ್ಷಣದ ಜತೆಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣವನ್ನು ಆಧುನಿಕ ಸೌಲಭ್ಯಗಳೊಂದಿಗೆ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಖಾಸಗಿ ವ್ಯಾಮೋಹ ಬಿಟ್ಟು ಈ ಶಾಲೆಗಳಲ್ಲಿ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ ಎಂದು ಪೋಷಕರಿಗೆ ಮನವಿ ಮಾಡಿದರು.
ಸರ್ಕಾರ ಪ್ರತಿ ಶಾಲೆಗೂ ತಲಾ 3 ಕೋಟಿ ರೂ. ನೀಡುತ್ತಿದ್ದು, ಆಧುನಿಕ ಪ್ರಯೋಗಾಲಯ, ಗ್ರಂಥಾಲಯ, ಗಣಕ ಶಿಕ್ಷಣ, ಶೌಚಾಲಯ, ಸುಸಜ್ಜಿತ ಶಾಲಾ ಕೊಠಡಿ ಸೇರಿ ವಿವಿಧ ಸೌಲಭ್ಯಗಳಿಗಾಗಿ ಈ ಹಣ ಬಳಸಿಕೊಳ್ಳಬೇಕಾಗಿದೆ ಎಂದು ವಿವರಿಸಿದರು.
ಸರ್ಕಾರಿ ಶಾಲೆ ಬಗ್ಗೆ ಕೀಳರಿಮೆ ಬೇಡ: ಸರ್ಕಾರಿ ಶಾಲೆಗಳೆಂದರೆ ಕೀಳಿರಿಮೆ ಬೇಡ, ಅನೇಕ ಸಾಧಕರು ಇಲ್ಲೇ ಓದಿದವರು, ಗುಣಾತ್ಮಕ ಶಿಕ್ಷಣದ ಮೂಲಕ ಶೇ.100 ಸಾಧನೆಯತ್ತ ಸಾಗುತ್ತಿದ್ದೇವೆ, ಸಮಾನ ಶಿಕ್ಷಣಕ್ಕಾಗಿ ಈ ಶಾಲೆಗಳ ಬಲವರ್ಧನೆ ಅಗತ್ಯ ಎಂದು ತಿಳಿಸಿದರು. ಖಾಸಗಿ ಶಾಲೆಗಳ ಪೈಪೋಟಿಯನ್ನು ನಮ್ಮ ಶಿಕ್ಷಕರು ಸಮರ್ಥವಾಗಿ ಎದುರಿಸಿದ್ದಾರೆ, ಗುಣಾತ್ಮಕತೆಯಲ್ಲಿ ಸಾಧನೆ ಮಾಡಿದ್ದಾರೆ ಎಂದ ಅವರು, ಇಲ್ಲಿ ನೀಡುವ ಉಚಿತ ಪಠ್ಯ, ಬಿಸಿಯೂಟ, ಕ್ಷೀರಭಾಗ್ಯ, ಶೂಭಾಗ್ಯ ಮತ್ತಿತರ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ಎಂದು ಮಕ್ಕಳಿಗೆ ಸಲಹೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ವೆಂಕಟಸ್ವಾಮಿ, ರಾಜ್ಯ ಸರ್ಕಾರ ಕಳೆದ ವರ್ಷ 170 ಕೆಪಿಎಸ್ ಶಾಲೆ ಆರಂಭಿಸಿದ್ದು, ಈ ಬಾರಿ ಮತ್ತೆ 100 ಶಾಲೆ ನೀಡಿದೆ. ಕೆಜಿಎಫ್ ಹೊಸ ತಾಲೂಕು ಆಗಿರುವುದರಿಂದ ಆ ತಾಲೂಕಿನ ಕೋಟಾದಲ್ಲಿ ಸುಂದರಪಾಳ್ಯದಲ್ಲಿ ಈ ಬಾರಿ ಕೆಪಿಎಸ್ ಶಾಲೆ ಆರಂಭವಾಗಿದೆ. ಸರ್ಕಾರ ಉಚಿತ ಶಿಕ್ಷಣದಡಿ ನೀಡುತ್ತಿರುವ ಈ ಸೌಲಭ್ಯ ಬಳಸಿಕೊಳ್ಳಿ, ಖಾಸಗಿ ಶಾಲೆ ವ್ಯಾಮೋಹ ಬಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ಶಿವಪ್ರಸಾದ್, ಸರ್ಕಾರಿ ಶಾಲೆಗಳು ಉತ್ತಮ ಸ್ಥಿತಿಯಲ್ಲಿವೆ, ಉತ್ತಮ ವಾತಾವರಣ, ಕಲಿಕೆಗೆ ಪೂರಕವಾಗಿದ್ದು, ಶೇ.100 ಫಲಿತಾಂಶದ ಸಾಧನೆಯನ್ನೂ ಮಾಡುತ್ತಿವೆ. ಇದೀಗ ಇಂಗ್ಲಿಷ್ ಮಾಧ್ಯಮ ಶಿಕ್ಷಣದಿಂದ ಮತ್ತಷ್ಟು ಬಲಗೊಳ್ಳಲಿವೆ ಎಂದು ಹೇಳಿದರು. ಎಸ್‌ಡಿಎಂಸಿ ಅಧ್ಯಕ್ಷ ಎಂಟಿಬಿ ಶ್ರೀನಿವಾಸ್, ಶಾಲೆಯ ಸಮಗ್ರ ಅಭಿವೃದ್ಧಿಗೆ ಸಮಿತಿ ಮತ್ತು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಈ ವೇಳೆ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ವಿಜಯಕುಮಾರ್ ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮುನಿರಾಜ್‌ರನ್ನು ಶಾಲೆಯಿಂದ ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ಶೈಲಾ ಬಸವರಾಜ್, ಎವೈಪಿಸಿ ಸಿದ್ದೇಶ್, ಡಿಪಿಒ ಮಂಜುನಾಥ್, ಪ್ರಾಂಶುಪಾಲೆ ಕ್ರಿಸ್ಟ್ ಜಯಂ, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ಆರ್.ಶ್ರೀನಿವಾಸನ್, ಬೈರೆಡ್ಡಿ, ಮುಖ್ಯ ಶಿಕ್ಷಕ ಸೊಣ್ಣೇಗೌಡ, ಶಿಕ್ಷಕರಾದ ಶೈಲಾ, ರೇಣುಕಾ, ಎಚ್.ನಾರಾಯಣಸ್ವಾಮಿ, ಬಿಆರ್‌ಪಿ ಗೋಪಾಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.