ಹಾಲಿನ ಗುಣಮಟ್ಟ ಕಾಪಾಡದಿದ್ದರೆ ವರ್ಗಾವಣೆ
ಸರ್ವ ಸದಸ್ಯರ ಸಭೆಯಲ್ಲಿ ಅಧಿಕಾರಿಗಳಿಗೆ ಕೋಚಿಮುಲ್ ನಿರ್ದೇಶಕ ಹರೀಶ್ ಎಚ್ಚರಿಕೆ
Team Udayavani, Sep 5, 2019, 4:00 PM IST
ಕೋಲಾರ ತಾಲೂಕಿನ ಚಿಕ್ಕಹಸಾಳ ಗ್ರಾಮದ ಹಾಲಿನ ಡೇರಿ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಮಾತನಾಡಿದರು.
ಕೋಲಾರ: ಹಾಲಿನ ಗುಣಮಟ್ಟ ಕಾಪಾಡದಿದ್ದರೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದೇನೆ ಎಂದು ಕೋಚಿಮುಲ್ ತಾಲೂಕು ನಿರ್ದೇಶಕ ಡಿ.ವಿ.ಹರೀಶ್ ಹೇಳಿದರು.
ತಾಲೂಕಿನ ಚಿಕ್ಕಹಸಾಳ ಗ್ರಾಮದಲ್ಲಿ ಬುಧವಾರ ನಡೆದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಒಕ್ಕೂಟವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಇಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ವೈಯಕ್ತಿಕ ಉದ್ದೇಶಕ್ಕೆ ಅಧಿಕಾರಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಒಕ್ಕೂಟಕ್ಕೆ ಪ್ರತಿ ದಿನ 10.50 ಲಕ್ಷ ಲೀಟರ್ ಹಾಲು ಪೂರೈಕೆಯಾಗುತ್ತಿದ್ದು, ಇದರ ಮಾರಾಟ ಮಾಡಲು ಸಮಸ್ಯೆಯಾಗಿದೆ. ಪೌಂಡರ್ ಮಾಡಲು ಆಂಧ‌್ರಪ್ರದೇಶಕ್ಕೆ ಕಳುಹಿಸಲಾಗಿದ್ದು, ರಾಮನಗರ ಜಿಲ್ಲೆಯಲ್ಲಿ ಪೌಂಡರ್ ತಯಾರಿಕ ಘಟಕ ಸ್ಥಾಪನೆಯಾಗಿದ್ದು, ಅಲ್ಲಿಗೆ ಕಳುಹಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸ್ಥಳ ಮಂಜೂರಿಗೆ ಶ್ರಮ: ಹಿಂದಿನ ಆಡಳಿತ ಮಂಡಳಿ ಅಥವಾ ಅಧಿಕಾರಿಗಳ ವೈಫಲ್ಯದಿಂದ ಎಂವಿಕೆ ಕಾರ್ಯಕ್ರಮಕ್ಕೆ 80 ಲಕ್ಷ ರೂ.ವೆಚ್ಚ ಮಾಡಿದ್ದಾರೆ. ವಾರ್ಷಿಕವಾಗಿ ನೀರು ಖರೀದಿಗೂ 1.70 ಕೋಟಿ ರೂ. ವೆಚ್ಚವಾಗುತ್ತಿದೆ. ಇದನ್ನು ತಪ್ಪಿಸಲು ಕ್ರಮ ಕೈಗೊಂಡಿದ್ದು, ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ.ರವಿ ತಾಲೂಕಿನ ಹೊಳಲಿ ಬಳಿ 40 ಎಕರೆ ಜಮೀನು ಮಂಜೂರು ಮಾಡಲು ಸ್ಥಳ ಗುರುತಿಸಿದ್ದಾರೆ. ಆನಂತರ ಇದನ್ನು ಆಡಳಿತ ಮಂಡಳಿಯವರು ನೆನಗುದಿಗೆ ಬಿಟ್ಟಿದರು. ಈಗ ಕಡೆ ತೆಗೆಸಿದ್ದು, ಒಕ್ಕೂಟದ ಹೆಸರಿಗೆ ಮಾಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಜಾಗವನ್ನು ಒಕ್ಕೂಟಕ್ಕೆ ಮಾಡಿಸಿಕೊಂಡರೆ ಕೊಳವೆಬಾವಿ ಕೊರೆಯಿಸಿ ನೀರಿನ ಸಮಸ್ಯೆ ನಿವಾರಣೆ ಮಾಡಿಕೊಳ್ಳಬಹುದು, ತಾಲೂಕಿನ 23 ಕಡೆ ಬಿಎಂಸಿ ಕೇಂದ್ರ ಸ್ಥಾಪನೆ ಮಾಡಲಾಗಿದ್ದು ಇನ್ನು ಹೆಚ್ಚಿಗೆ ಮಾಡಿದರೆ ಮಾತ್ರ ಗುಣಮಟ್ಟದ ಹಾಲು ಉತ್ಪಾದನೆಗೆ ಸಹಕಾರಿ ಎಂದರು.
ದುರುಪಯೋಗಕ್ಕೆ ಅವಕಾಶ ನೀಡಲ್ಲ: ಒಕ್ಕೂಟದ ಮಾಜಿ ನಿರ್ದೇಶಕ ಆರ್.ರಾಮಕೃಷ್ಣೇಗೌಡ ಮಾತನಾಡಿ, ಒಕ್ಕೂಟದಲ್ಲಿ ರಾಜಕೀಯ ಮಾಡುವವರಿಗೆ ಎಂದಿಗೂ ಒಳ್ಳೆಯದಾಗಲ್ಲ. ಅಧಿಕಾರಿಗಳ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿರುವ ವದಂತಿ ಕೇಳಿ ಬರುತ್ತಿದ್ದು, ಇದಕ್ಕೆಲ್ಲಾ ಸಹಕಾರ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ನಮ್ಮ ಅವಧಿಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಿ ದ್ದೇವೆ, ಚಿಕ್ಕಹಾಸಳ ಗ್ರಾಮದಲ್ಲಿ ಸಂಘ ಸ್ಥಾಪನೆಯಾಗಿ 2 ಎರಡು ವರ್ಷವಾಗಿದ್ದರೂ ಅಭಿವೃದ್ಧಿಯಾಗಿದೆ. ಇದಕ್ಕೆ ಒಕ್ಕೂಟಕ್ಕೆ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
ಸಹಕಾರ ನೀಡಿ: ಎಸ್‌ಎನ್‌ಎಫ್ ಫಲಿತಾಂಶದ ಆಧಾರದ ಮೇರೆಗೆ ಹಾಲಿಗೆ ದರ ನಿಗದಿ ಮಾಡಿದ ಮೇಲೆ ಪೌಷ್ಟಿಕ ಆಹಾರಕ್ಕೆ ಬೇಡಿಕೆ ಹೆಚ್ಚಾಗಿದೆ. ಬಿಎಂಸಿ ಕೇಂದ್ರಗಳ ಸ್ಥಾಪನೆಯಾದ ಮೇಲೆ ಗುಣಮಟ್ಟದ ಹಾಲು ಉತ್ಪಾದನೆ ಹೆಚ್ಚಾಯಿತು. ಬರಗಾಲದಲ್ಲೂ ನಿರೀಕ್ಷೆಗೂ ಮೀರಿ ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಒಕ್ಕೂಟದಿಂದ ಸಹಕಾರ ನೀಡಬೇಕೆಂದರು.
ಒಕ್ಕೂಟ ರೈತರ ಆರ್ಥಿಕ ಅಭಿವೃದ್ಧಿ ಜತೆಗೆ ಆರೋಗ್ಯ ಸೇವೆ ನೀಡಲು ಕೋಮುಲ್ ವಿಮಾ ಯೋಜನೆ ಜಾರಿಗೊಳಿಸಲಾಯಿತು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರೈತರ ಮತ್ತು ಕುಟುಂಬದ ಸದಸ್ಯರು ದಾಖಲಾದರೆ 30 ಸಾವಿರ ಒಂದು ವೇಳೆ ಮೃತಪಟ್ಟರೆ 3 ಲಕ್ಷ ಹಣ ನೀಡಲಾಗುವುದು, ಇದರ ಪ್ರಯೋಜನೆ ರೈತರಿಗೆ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದರು.
ಇದೇ ವೇಳೆ 2019-20ನೇ ಸಾಲಿಗೆ ಅಂದಾಜು ಬಜೆಟ್ ಮಂಜೂರಿಗೆ ಅನುಮೋದನೆ ನೀಡಲಾಯಿತು.
ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಶ್ರೀನಿವಾಸ ಗೌಡ, ಸಂಘದ ಅಧ್ಯಕ್ಷ ವಿ.ಮುನಿರಾಜು, ನಿರ್ದೇಶಕರಾದ ಎಲ್.ಕೆಂಪಣ್ಣ, ಎಂ.ಮಂಜುನಾಥ್, ಸಿ.ಚಲಪತಿ, ಸಿ.ರನ್.ಮಂಜುನಾಥ್, ವಿ.ರಮೇಶ್, ಎಸ್.ಶ್ರೀನಿವಾಸ್, ರತ್ನಮ್ಮ, ಬಿ.ಕೆ.ನಾಗವೇಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.