30 ಸಾವಿರ ಎಕರೆ ನೀರಾವರಿ ಭಾಗ್ಯ

Team Udayavani, Nov 30, 2017, 3:09 PM IST

30-26.jpg

ಕೊಪ್ಪಳ: ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಏತ ನೀರಾವರಿ ಯೋಜನೆಯಡಿ ಒಟ್ಟು 30 ಸಾವಿರ ಎಕರೆ ಪ್ರದೇಶ ನೀರಾವರಿ ಸೌಲಭ್ಯ ಪಡೆಯಲಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಡೊಂಬರಹಳ್ಳಿ ಗ್ರಾಮದಲ್ಲಿ ಬುಧವಾರ 80ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ 3 ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಾದ ಸಿಂಗಟಾಲೂರ ಏತ ನೀರಾವರಿ ಯೋಜನೆ, ಅಳವಂಡಿ-ಬೇಟಗೇರಿ ಏತ ನೀರಾವರಿ ಯೋಜನೆ ಹಾಗೂ 180 ಕೋಟಿ ರೂ. ಅನುದಾನದ ನವಲಕಲ್‌-ಬಹದ್ದೂರ ಬಂಡಿ ಏತ ನೀರಾವರಿ ಯೋಜನೆಗಳ ಮೂಲಕ ಕೊಪ್ಪಳ ಕ್ಷೇತ್ರದ ಒಣ ಬೇಸಾಯದ 30 ಸಾವಿರ ಎಕರೆಗೆ ನೀರಾವರಿ ಭಾಗ್ಯ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಮೆಡಿಕಲ್‌ ಕಾಲೇಜು, ತಳಕಲ್‌ಗೆ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡಿ ಕೊಪ್ಪಳ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು. 

ತುಂಗಭದ್ರಾ ಹಿನ್ನೀರಿನಿಂದ ಕ್ಷೇತ್ರದ ಎಲ್ಲ ಕೆರೆಗೆ ನೀರು ತುಂಬಿಸಲಾಗುವುದು. ಸರಣಿ ಪಿಕಪ್‌ ಹಾಗೂ ಬ್ರಿಜ್‌ ಕಂ ಬ್ಯಾರೇಜ್‌ನಿಂದ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದ್ದು, ಬರುವ ದಿನಗಳಲ್ಲಿ ಎಲ್ಲ ಹಳ್ಳಗಳಲ್ಲಿ ಕೆರೆ ನಿರ್ಮಿಸಿ ನೀರು ನಿಲ್ಲಿಸುವ ಪ್ರಯತ್ನ  ಮಾಡಲಾಗುವುದು. ಕೃಷಿಗೆ ಟುವಟಿಕೆಗಳಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ಕ್ಷೇತ್ರದಲ್ಲಿ 8-10 ಮೊರಾರ್ಜಿ ವಸತಿ ಶಾಲೆ ಮತ್ತು
ವಿದ್ಯಾರ್ಥಿಗಳ ಹಾಸ್ಟೇಲ್‌ ನಿರ್ಮಾಣ ಮಾಡಲಾಗಿದೆ. ಜನೆವರಿಯಿಂದ 25 ಸಾವಿರ ಪಡಿತರ ಫಲಾನುಭವಿಗಳಿಗೆ ಅನಿಲ ಭಾಗ್ಯದ ಯೋಜನೆಯ ಮೂಲಕ ಉಚಿತ ಗ್ಯಾಸ್‌ ಹಾಗೂ ಸಿಲಿಂಡರ್‌ ವಿತರಣೆ ಮಾಡಲಾಗುವುದು. ಕಾರ್ಮಿಕರಿಗಾಗಿ 2 ಲಕ್ಷ ರೂ. ವರೆಗೆ ವಿಮೆ ಹಾಗೂ ಕಾರ್ಮಿಕರ ಅಪಘಾತದಿಂದ ಸಾವನ್ನಪ್ಪಿದರೆ 5 ಲಕ್ಷ ರೂ. ಸಹಾಯಧನ ನೀಡುವ ಅಂಬೇಡ್ಕರ ಸಹಾಯ ಹಸ್ತದ ಯೋಜನೆ ಜಾರಿಯಾಗಿದೆ ಎಂದರು. ರಾಜ್ಯ ಸರಕಾರದ ಸಾಧನೆ ಕಂಡು ವಿರೋಧ ಪಕ್ಷದ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ ಅಭಿವೃದ್ಧಿಗೆ ಸಹಕಾರ ನೀಡುವುದನ್ನು ಬಿಟ್ಟು ಅನಗತ್ಯ ವಿಚಾರಗಳಲ್ಲಿ ವಿವಾದ ಸೃಷ್ಟಿಸುತ್ತಾ ಜನರಲ್ಲಿ ತಪ್ಪು ಭಾವನೆ ಮೂಡಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಈ ವೇಳೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುರೇಶ ಭೂಮರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಎಸ್‌.ಬಿ.ನಾಗರಳ್ಳಿ, ಎಚ್‌.ಎಲ್‌ .ಹಿರೇಗೌಡ್ರ, ನಗರಸಭೆ ಸದಸ್ಯ ಮುತ್ತುರಾಜ ಕುಷ್ಟಗಿ, ತಾಪಂ ಸದಸ್ಯ ನಿಂಗಪ್ಪ ಯತ್ನಟ್ಟಿ, ಮುಖಂಡರಾದ ಶಂಕರಗೌಡ್ರ ಹಿರೇಗೌಡ್ರ, ಕೃಷ್ಣಾ ಗಲಬಿ, ಬಸವರೆಡ್ಡಿ ಕರೆಡ್ಡಿ, ಮುದೇಗೌಡ್ರ ಬೇಳೂರು, ರಾಮನಗೌಡ್ರ, ಯಲ್ಲನಗೌಡ್ರ ಅಂದಪ್ಪ ನಾಯಕ, ನಾಗರಾಜ ಹುರಕಡ್ಲಿ, ಚಿನ್ನಪ್ಪ ಅಂಗಡಿ, ಕೊಟ್ರಯ್ಯ ಹಿರೇಮಠ, ನಂದೀಶಗೌಡ, ರಾಜಪ್ಪ ಗುಡ್ಲಾನೂರ, ಉಮಾ ಜನಾದ್ರಿ, ವಕ್ತಾರ ಅಕºರ ಪಾಷಾ
ಪಲ್ಟನ ಉಪಸ್ಥಿತರಿದ್ದರು.

ಮುಂಬರುವ ದಿನಗಳಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್‌ ಬೆಂಬಲಿಸುವುದು ಶತಸಿದ್ಧ. ಬಿಜೆಪಿ-ಜೆಡಿಎಸ್‌ ಪಕ್ಷಗಳು ಸರಕಾರ ರಚಿಸುವ ಹಗಲುಗನಸು ಕಾಣುತ್ತಿವೆ. ಮುಂದಿನ ಬಾರಿಯೂ ಕಾಂಗ್ರೆಸ್‌ ಸರಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ.
ರಾಘವೇಂದ್ರ ಹಿಟ್ನಾಳ, ಶಾಸಕ.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.