ಟಿಬಿ ಡ್ಯಾಂಗೆ ಒಂದೇ ದಿನ 6 ಟಿಎಂಸಿ ಅಡಿ ನೀರು!
Team Udayavani, Aug 8, 2020, 2:52 PM IST
ಕೊಪ್ಪಳ: ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಶುಕ್ರವಾರ ಒಂದೇ ದಿನ ಡ್ಯಾಂಗೆ ಬರೋಬ್ಬರಿ 6 ಟಿಎಂಸಿ ಅಡಿ ನೀರು ಹರಿದು ಬಂದಿದ್ದು, ಒಳ ಹರಿವಿನ ಪ್ರಮಾಣ 81 ಸಾವಿರ ಕ್ಯೂಸೆಕ್‌ನಷ್ಟು ಹೆಚ್ಚಾಗಿದೆ.
ತುಂಗಭದ್ರಾ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣವು ಹೆಚ್ಚಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದಲ್ಲಿನ ರೈತರಲ್ಲಿ ಸಂತಸ ಮೂಡಿದೆ. ಗುರುವಾರ ಅಂತ್ಯಕ್ಕೆ ಒಳ ಹರಿವಿನ ಪ್ರಮಾಣವು 17858 ಕ್ಯೂಸೆಕ್‌ನಷ್ಟಿತ್ತು. ಡ್ಯಾಂನಲ್ಲಿ 40.262 ಟಿಎಂಸಿ ನೀರು ಸಂಗ್ರಹವಾಗಿತ್ತು. ಆದರೆ ಶುಕ್ರವಾರ ಜಲಾಶಯದ ಒಳಹರಿವು 81,218 ಕ್ಯೂಸೆಕ್‌ನಷ್ಟು ಏರಿಕೆಯಾಗಿದೆ. ಡ್ಯಾಂನಲ್ಲಿ 46 ಟಿಎಂಸಿ ನೀರು ಸಂಗ್ರಹವಾಗಿದೆ. ಅಂದರೆ ಒಂದೇ ದಿನದಲ್ಲಿ 6 ಟಿಎಂಸಿ ನೀರು ಹರಿದು ಬಂದಿದೆ. ತುಂಗಭದ್ರಾ ಜಲಾಶಯವು 133 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದರೂ ಕಳೆದ ಐದು ದಶಕದಲ್ಲಿ 33 ಟಿಎಂಸಿ ಅಡಿಯಷ್ಟು ಹೂಳು ತುಂಬಿಕೊಂಡಿದೆ. ಹಾಗಾಗಿ ಡ್ಯಾಂನ ನೀರು ಸಂಗ್ರಹ ಸಾಮರ್ಥ್ಯ 100 ಟಿಎಂಸಿ ಅಡಿಗೆ ಬಂದು ತಲುಪಿದೆ. ಇದೇ ಒಳ ಹರಿವಿನ ಪ್ರಮಾಣ ನಿರಂತರವಾಗಿದ್ದರೆ ಕೆಲವೇ ದಿನದಲ್ಲಿ ಡ್ಯಾಂ ಭರ್ತಿಯಾಗಲಿದೆ. ಡ್ಯಾಂನ ನೀರಿನ ಮಟ್ಟವು 1633 ಅಡಿಯಾಗಿದ್ದು, ಈಗ 1615.35 ಅಡಿ ಸಂಗ್ರಹವಾಗಿದೆ.
ಇನ್ನು ಹೊರ ಹರಿವು 8225 ಕ್ಯೂಸೆಕ್‌ನಷ್ಟಿದೆ. ಡ್ಯಾಂನಲ್ಲಿ ಶುಕ್ರವಾರ 46.556 ಟಿಎಂಸಿ ನೀರು ಸಂಗ್ರಹವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.