ಪ್ರಸಕ್ತ ವರ್ಷ ಕುಷ್ಟಗಿ ತಾಲೂಕಿನಲ್ಲಿ 63 ಡೆಂಘೀ ಪ್ರಕರಣ ಪತ್ತೆ
Team Udayavani, Nov 22, 2019, 1:09 PM IST
ಕುಷ್ಟಗಿ: ಹಿಂಗಾರು ಮಳೆ ಹಾಗೂ ಬದಲಾದ ಹವಾಮಾನದಿಂದಾಗಿ ತಾಲೂಕಿನಲ್ಲಿ 63 ಡೆಂಘೀ ಪ್ರಕರಣಗಳು ದೃಢಪಟ್ಟಿರುವು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಡೆಂಘೀ ವ್ಯಾಪಿಸದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ ವರ್ಷ ಡೆಂಘೀ 2, ಚಿಕೂನಗುನ್ಯಾ 4, ಮಲೇರಿಯಾ ಪ್ರಕರಣ ದಾಖಲಾಗಿದ್ದವು. ಪ್ರಸಕ್ತ ವರ್ಷ ಹಿಂಗಾರು ಹಂಗಾಮಿನಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಸುರಿದ ಮಳೆಯಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿದ್ದು, ರೋಗ ಉಲ್ಬಣಿಸಲು ಕಾರಣವಾಗಿದೆ.
ತಾಲೂಕಿನ ಕಳಮಳ್ಳಿ ತಂಡದಲ್ಲಿ ಅತಿಹೆಚ್ಚು ಅಂದರೆ 9 ಪ್ರಕರಣ, ಕೊರಡಕೇರಾದಲ್ಲಿ 6, ವಿರುಪಾಪೂರದಲ್ಲಿ 4, ಯಲಬುಣಚಿ, ಕುಂಬಳಾವತಿ, ಹನುಮಗಿರಿ ತಲಾ 2, ಮಾವಿನ ಇಟಗಿ 3 ಕುಷ್ಟಗಿಯಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 63 ಪ್ರಕರಣಗಳಾಗಿದ್ದು, ಯಾವೂದೇ ಸಾವಿನ ಪ್ರಕರಣಗಳಾಗಿಲ್ಲ ಎಂದು ಆರೋಗ್ಯ ಇಲಾಖೆ ಖಚಿತ ಪಡಿಸಿದೆ. ಡೆಂಘೀ ನಿಯಂತ್ರಣಕ್ಕೆ ಕುಷ್ಟಗಿ ಹಾಗೂ
ತಾವರಗೇರಾ ಪಟ್ಟಣದಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಕೊನೆಯ ಶುಕ್ರವಾರ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರತಿ ತಿಂಗಳ 1ನೇ ದಿನಾಂಕದಿಂದ 4ರವರೆಗೆ ತಪ್ಪದೇ ಆರೋಗ್ಯ ಸಹಾಯಕರು, ಆಶಾ ಕಾರ್ಯಕತೆಯರು, ಲಾರ್ವಾ ಸಮೀಕ್ಷೆ, ಬಹುದಿನಗಳಿಂದ ಸಂಗ್ರಹಿಸಿದ ನೀರನ್ನು ಚೆಲ್ಲುವುದು ಸೇರಿದಂತೆ ಜಾಗೃತಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ 63 ಡೆಂಘೀ ಪ್ರಕರಣಗಳಾಗಿವೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರುಗತಿಯಾಗಿದ್ದು, ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರೋಗ ಪೀಡಿತ ಗ್ರಾಮಗಳಲ್ಲಿ ತೀವ್ರ ನಿಗಾವಹಿಸಲಾಗಿದೆ. ದೃಢಪಟ್ಟಿರುವ 63 ಪ್ರಕರಣಗಳ ಪೈಕಿ ನಾಲ್ವರು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಉಳಿದವರು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಳಮಳ್ಳಿ ತಾಂಡಾದಲ್ಲಿಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಳಿದ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಕೊರಡಕೇರಾದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು, ಆರೋಗ್ಯ ಸಹಾಯಕರು, ಪ್ರತಿ ಮನೆಯ ನೀರಿನ ತೊಟ್ಟಿಯಲ್ಲಿರುವ ಲಾರ್ವಾನಾಶ ಪಡಿಸುವ ಅಗತ್ಯ ಕ್ರಮ ಕೈಗೊಂಡಿರುವುದಾಗಿ ಮಲೇರಿಯಾ ತಾಂತ್ರಿಕ ಮೇಲ್ವಿಚಾರಕ ಪ್ರಕಾಶ ಗುತ್ತೇದಾರ ವಿವರಿಸಿದರು.
ಖಾಸಗಿ ಆಸ್ಪತ್ರೆಯಲ್ಲಿ ಎನ್‌ಎಸ್-1 ಕಿಟ್ ಪದ್ಧತಿ ಪರೀಕ್ಷೆಯಲ್ಲಿ ಡೆಂಘೀ ದೃಢೀಕರಿಸಲಾಗದು. ಶಂಕಿತ ಡೆಂಘೀ ಎನ್ನಬಹುದಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮ್ಯಾಕ ಎಲಿಜಾ ಪರೀಕ್ಷೆಯಲ್ಲಿ ಮಾತ್ರ ಡೆಂಘೀ ದೃಢೀಕರಿಸುವುದು ಸಾಧ್ಯ. –ಡಾ| ಆನಂದ ಗೋಟೂರು, ತಾಲೂಕಾ ಆರೋಗ್ಯ ವೈದ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.