ದೋಟಿಹಾಳ: ವಿವಿಧಡೆ 71ನೇ ಗಣರಾಜ್ಯೋತ್ಸವ
Team Udayavani, Jan 27, 2020, 3:28 PM IST
ದೋಟಿಹಾಳ: ಕೇಸೂರ ಗ್ರಾಪಂನಲ್ಲಿ ಗ್ರಾಪಂ ಅಧ್ಯಕ್ಷೆ ವಾಲವ್ವ ತಾವರಪ್ಪ ಕಡೇಕೊಪ್ಪ ಅವರು 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ರಾಮಣ್ಣ ದಾಸರ ಹಾಗೂ ಇತರರಿದ್ದರು.
ದೋಟಿಹಾಳ ಗ್ರಾಮದ ಪಿಯು ಕಾಲೇಜಿನಲ್ಲಿ ಪ್ರಾಚಾರ್ಯರಾದ ಆದಪ್ಪ ಸಾಲವಾಡಗಿ 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಪ್ರೌಢಶಾಲೆ ಶಿಕ್ಷಕರು ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿಧ್ಯಾರ್ಥಿಗಳು ಹಾಜರಿದ್ದರು.
ದೋಟಿಹಾಳ ಗ್ರಾಪಂನಲ್ಲಿ ಗ್ರಾಪಂ ಅಧ್ಯಕ್ಷ ಗೌಸುಸಾಬ್ ಕೊಣ್ಣೂರು ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ ಕಂಟಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿಧ್ಯಾರ್ಥಿಗಳು ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಬಸವರಾಜ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು.
ಕ್ಯಾದಗುಂಪಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಲಾಲ್‌ಬಿ ಹುಸೇಸಾಬ್ ಬೇವಿನಗಿಡದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಪಿಡಿಒ, ಗ್ರಾಪಂ ಸದಸ್ಯರು ಹಾಗೂ ವಿದ್ಯಾರ್ಥಿಗಳಿದ್ದರು. ಶಿರಗುಂಪಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಸೌಭಾಗ್ಯವತಿ ಪರಸಪ್ಪ ಮೇಗೂರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಅಮರೇಶ ಕರಡಿ, ಗ್ರಾಪಂ ಸದಸ್ಯರು ಇದ್ದರು. ಕಿಲ್ಲಾರಹಟ್ಟಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷ ಚನ್ನನಗೌಡ ಪೊಲೀಸ್ ಪಾಟೀಲ್ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಜಿಪಂ ಸದಸ್ಯ ಹನಮಗೌಡ ಪಾಟೀಲ್, ಪಿಡಿಒ ಚಂದ್ರಶೇಖರ ಕಂದಕೂರು ಹಾಗೂ ಇತರರಿದ್ದರು.
ಬಿಜಕಲ್ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ದುರಗಮ್ಮ ಫಕೀರಪ್ಪ ವಾಲ್ಮೀಕಿ, ಮುದೇನೂರ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಚೇತನ ಕುಮಾರ ಹಿರೇಮಠ ಧ್ವಜಾರೋಹಣವನ್ನು ನೆರವೇರಿಸಿದರು.
ನಡವಲಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರುದ್ರಪ್ಪ ವಾಲೇಕರ 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಜಿಪಂ ಸದಸ್ಯ ವಿಜಯನಾಯ್ಕ ಹಾಗೂ ಇತರರಿದ್ದರು. ಕಡೇಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಇಂದರಗಿ, ಕಲಕೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿಎಂಸಿ ಅಧ್ಯಕ್ಷರು, ಗೋತಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿಎಂಸಿಸಿ ಅಧ್ಯಕ್ಷರು, ಜಾಲಿಹಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ರ್ಯಾವಣಿಕಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.