![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 18, 2021, 7:06 PM IST
ಗಂಗಾವತಿ: ಬಸ್ ಹಾಗೂ ಸ್ಕೂಟಿ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಬೈಕಿನಲ್ಲಿದ್ದ ತಂದೆ ಮಗ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಜಂಗಮರಕಲ್ಗುಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ಗಂಗಾವತಿ ಜಯನಗರ ಗುಡ್ಡದಕ್ಯಾಂಪಿ ಹನುಮಂತ ನಾಯಕ(32), ಮತ್ತು ಪವನ ಅಲಿಯಾಸ್ ಪ್ರವೀಣಕುಮಾರ ಎಂದು ಗುರುತಿಸಲಾಗಿದೆ.
ಜಂಗಮರಕಲ್ಗುಡಿ ಗ್ರಾಮದಲ್ಲಿದ್ದ ಸಂಬಂಧಿಕರನ್ನು ಮಾತನಾಡಿಸಿ ಸ್ಕೂಟಿಯಲ್ಲಿ ಗಂಗಾವತಿಗೆ ಬರುವ ಸಂದರ್ಭದಲ್ಲಿ ಹುಬ್ಬಳ್ಳಿ ಸಿಂಧನೂರು ಮಾರ್ಗವಾಗಿ ಚಲಿಸುವ ಸಿಂಧನೂರು ಘಟಕದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದ್ದು, ಬಸ್ಸಿನ ಮುಂದಿನ ಚಕ್ರದಲ್ಲಿ ಸ್ಕೂಟಿ ಹಾಗೂ ಮಗು ಸಿಕ್ಕಿಹಾಕಿಕೊಂಡಿದ್ದರೆ, ಸ್ಪಲ್ಪ ದೂರದಲ್ಲಿ ಮೃತ ಹನುಮಂತ ನಾಯಕ ಅವರ ದೇಹ ಬಿದ್ದಿರುವುದು ಕಂಡು ಬಂದಿದೆ.
ಇದನ್ನೂ ಓದಿ:ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ
ಈ ಸಂದರ್ಭದಲ್ಲಿ ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ತಮ್ಮ ವಾಹನ ನಿಲ್ಲಿಸಿ ಪೊಲೀಸರಿಗೆ ಕರೆ ಮಾಡಿ ಜನ ಮತ್ತು ವಾಹನ ಸಂಚಾರ ನಿಲುಗಡೆ ಮಾಡಿಸುವ ಮೂಲಕ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಗ್ರಾಮೀಣ ಪೊಲೀಸ್ ಠಾಣೆ ಪಿಐ ಉದಯರವಿ ಹಾಗೂ ಪಿಎಸ್ಐ ಜೆ.ದೊಡ್ಡಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.