![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 11, 2019, 1:09 PM IST
ಕನಕಗಿರಿ: ಪಟ್ಟಣದ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು.
ಕನಕಗಿರಿ: ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಲ್ಲವನ್ನು ಸಂತೋಷದಿಂದ ಎದುರಿಸಬೇಕು ಎಂದು ತಹಶೀಲ್ದಾರ್ ರವಿ ಅಂಗಡಿ ಹೇಳಿದರು.
ಪಟ್ಟಣದ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ನಡೆದ ಕನಕಗಿರಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಜೊತೆಗೆ ದೈಹಿಕ ಸದೃಢತೆಗೆ ಕ್ರೀಡೆಯೂ ಅತ್ಯವಶ್ಯಕವಾಗಿದೆ. ಕೇವಲ ಓದಿನಿಂದ ಎಲ್ಲವನ್ನು ಸಾಸಲು ಸಾಧ್ಯವಿಲ್ಲ. ಅದರ ಜೊತೆಗೆ ದೈಹಿಕ ಸಾಮರ್ಥ್ಯ, ಹೊರ ಪ್ರಪಂಚದ ಜ್ಞಾನವಿದ್ದಾಗ ಪರಿಪಕ್ವವಾದ ವಿದ್ಯಾರ್ಥಿಯಾಗಲು ಸಾಧ್ಯ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಕ್ರೀಡೆ ಅತ್ಯಗತ್ಯ. ಗ್ರಾಮೀಣ ಮಟ್ಟದ ಕ್ರೀಡೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕ್ರೀಡಾ ಪಟುಗಳು ಬೆಳೆಯಲು ಈ ಕ್ರೀಡಾಕೂಟ ಸಹಕಾರಿ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಜಿಪಂ ಸದಸ್ಯೆ ಲಕ್ಷ್ಮಮ ನೀರಲೂಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕೇಸರಹಟ್ಟಿ, ಹೀರೆಖೇಡಾ, ಗೌರಿಪುರ, ಮುಸಲಾಪುರ, ಹುಲಿಹೈದರ್, ಕಲಿಕೇರಿ ಸೇರಿದಂತೆ ವಲಯ ವ್ಯಾಪ್ತಿಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಜಿಪಂ ಸದಸ್ಯೆ ಭಾಗ್ಯವತಿ, ಪ್ರಾಂಶುಪಾಲ ಬಸವರಾಜ ಬಡಿಗೇರ, ಉಪ ತಹಶೀಲ್ದಾರ್ ವಿಶ್ವೇಶ್ವರಯ್ಯಸ್ವಾಮಿ, ಸಿಆರ್‌ಪಿ ಸಂಗಮೇಶ ಹಿರೇಮಠ, ಪ್ರಮುಖರಾದ ಸಣ್ಣ ಕನಕಪ್ಪ, ದೈಹಿಕ ಶಿಕ್ಷಕರು, ವಿವಿಧ ಶಾಲೆ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.