ವಿವಿಧೆಡೆ ದೇಶ ರಕ್ಷಣೆಯ ಪ್ರತಿಜ್ಞೆ ಸ್ವೀಕಾರ

ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುವುದಾಗಿ ಪ್ರಮಾಣ ಮಾಡುತ್ತೇವೆ.

Team Udayavani, Nov 1, 2021, 8:36 PM IST

ವಿವಿಧೆಡೆ ದೇಶ ರಕ್ಷಣೆಯ ಪ್ರತಿಜ್ಞೆ ಸ್ವೀಕಾರ

ಕೊಪ್ಪಳ: ರಾಷ್ಟ್ರೀಯ ಏಕತಾ ದಿವಸ್‌ ಹಾಗೂ ರಾಷ್ಟ್ರೀಯ ಸಂಕಲ್ಪ ದಿವಸ್‌ ನಿಮಿತ್ತ ಜಿಲ್ಲಾಡಳಿತ ಭವನದಲ್ಲಿ ಪ್ರತಿಜ್ಞಾ ವಿ ಧಿ ಬೋಧಿ ಸಲಾಯಿತು. ಪ್ರಧಾನಿ ದಿ. ಇಂದಿರಾ ಗಾಂಧಿ  ಅವರು ಹುತಾತ್ಮರಾದ ಅ. 31ರ ದಿನವನ್ನು ರಾಷ್ಟ್ರೀಯ ಸಂಕಲ್ಪ ದಿವಸವನ್ನಾಗಿ ಮತ್ತು ಉಕ್ಕಿನ ಮನುಷ್ಯ ದಿ. ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ಅವರ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವಂತೆ ಸರ್ಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಎಡಿಸಿ ಎಂ.ಪಿ. ಮಾರುತಿ ಅವರು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ಏಕತಾ ದಿವಸ್‌ ನಿಮಿತ್ತ ಪ್ರತಿಜ್ಞಾವಿಧಿ  ಬೋಧಿಸಿ, ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನಮ್ಮನ್ನು
ಅರ್ಪಿಸಿಕೊಳ್ಳುತ್ತೇವೆ. ನಮ್ಮ ದೇಶ ಬಾಂಧವರಲ್ಲಿ ಈ ಸಂದೇಶ ಸಾರಲು ಶ್ರಮಿಸುತ್ತೇವೆ. ಸರ್ದಾರ್‌ ವಲ್ಲಭಬಾಯಿ ಪಟೇಲ್‌ರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುವುದಾಗಿ ಪ್ರಮಾಣ ಮಾಡುತ್ತೇವೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಮ್ಮದೇ ಆದ ಕೊಡುಗೆ ನೀಡುತ್ತೇವೆಂದು ಎಲ್ಲ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾವಿಧಿ  ಬೋಧಿಸಿದರು.

ರಾಷ್ಟ್ರೀಯ ಸಂಕಲ್ಪ ದಿವಸದ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿ, ರಾಷ್ಟ್ರದ ಸ್ವಾತಂತ್ರ್ಯಕಾಪಾಡಲು, ದೇಶ ರಕ್ಷಣೆ ಮಾಡಲು ಹಾಗೂ ದೇಶದ ಸುಭದ್ರತೆ ಕಾರ್ಯದಲ್ಲಿ ತನು-ಮನ-ಧನದಿಂದ ಕಾರ್ಯವೆಸಗಲು ನಿಷ್ಠೆಯಿಂದ ಪ್ರತಿಜ್ಞೆ ಮಾಡುತ್ತೇವೆ. ಎಂದಿಗೂ ಹಿಂಸೆಯ ಪ್ರಯೋಗ
ಮಾಡುವುದಿಲ್ಲ. ಧರ್ಮ, ಜಾತಿ, ಭಾಷೆ, ಪ್ರಾಂತ ಮುಂತಾದ ವಿಷಯಗಳಲ್ಲದೇ ರಾಜಕೀಯ ಹಾಗೂ ಸಂವಿಧಾನಾತ್ಮಕವಾಗಿ ಇತ್ಯರ್ಥ ಮಾಡಲು ಪ್ರಯತ್ನಿಸಲಾಗುವುದು.

ಭಾರತೀಯ ಪ್ರಜೆಯಾದ ನಾವು ನಮ್ಮ ದೇಶದ ಪರಂಪರಾಗತ ಮೌಲ್ಯವಾದ ಅಹಿಂಸೆ ಮತ್ತು ತಾಳ್ಮೆಯಲ್ಲಿ ಅಪಾರ ನಂಬಿಕೆ ಇರಿಸಿದ್ದು, ಎಲ್ಲ ರೀತಿಯ ಭಯೋತ್ಪಾದನೆ ಮತ್ತು ಹಿಂಸಾಕೃತ್ಯಗಳನ್ನು ವಿರೋಧಿ ಸುತ್ತೇವೆ. ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ತಿಳಿವಳಿಕೆಯಿಂದ, ಸಾಮಾಜಿಕ ಬಾಂಧವ್ಯ ಹಾಗೂ ಒಡನಾಡಿಗಳ ಜೊತೆಗೂಡಿ ಮಾನವ ಜೀವ ಹಾಗೂ ಮೌಲ್ಯಗಳನ್ನು ನಾಶಪಡಿಸುವ ವಿನಾಶಕಾರಿ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞಾವಿಧಿ ಬೋಧಿ  ಸಲಾಯಿತು. ಪ್ರೊಬೇಷನರಿ ಐಎಎಸ್‌ ಅಧಿಕಾರಿ ಹೇಮಂತ್‌ ಕುಮಾರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ರಾಷ್ಟ್ರೀಯ ಸಂಕಲ್ಪ ದಿವಸ್‌ ಹಾಗೂ ರಾಷ್ಟ್ರೀಯ ಏಕತಾ ದಿವಸ್‌ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.