ಕೃಷಿ ಕಾರ್ಮಿಕರ ಗ್ರಾಮ ಸಮ್ಮೇಳನ
Team Udayavani, Oct 14, 2019, 1:53 PM IST
ಕೊಪ್ಪಳ: ತಾಲೂಕಿನ ಹಿರೇಕಾಸನಕಂಡಿಯಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಗ್ರಾಮ ಘಟಕದ ಪ್ರಥಮ ಸಮ್ಮೇಳನ ಜರುಗಿತು.
ರಾಜ್ಯ ಉಪಾಧ್ಯಕ್ಷ ಎಚ್. ಗಂಗಾಧರಯ್ಯಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಕೂಲಿಕಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೋರಾಟದ ದಾರಿಯೇ ಮುಖ್ಯ. ಬಡ ರೈತರು ಭೂಮಿಯನ್ನು ಕಳೆದುಕೊಂಡು ಮುಂದೆ ಕೃಷಿ ಕೂಲಿಕಾರರಾಗಿ ಉದ್ಯೋಗ ಇಲ್ಲದೆ ದೊಡ್ಡ ದೊಡ್ಡ ನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಇದೆಲ್ಲವನ್ನೂ ಸರ್ಕಾರದ ಗಮನ ಸೆಳೆಯಬೇಕಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.
ತಾಲೂಕು ಸಂಚಾಲಕ ಸುಂಕಪ್ಪ ಗದಗ ಮಾತನಾಡಿ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ಮನೆ, ನಿವೇಶನ, ರಸ್ತೆ, ಚರಂಡಿಗಳ ನಿರ್ಮಾಣ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಪಂಚಾಯತ್ ಗಳ ಕಾರ್ಯ ವೈಖರಿ ಖಂಡಿಸಿದರಲ್ಲದೇ, ಗ್ರಾಮ ಪಂಚಾಯತ್ ಬಡ ಜನತೆ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ವೇಳೆ ನೂತನ ಪದಾಧಿಕಾರಿಗಳ ಸಮಿತಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನೀಲಪ್ಪ ಗಾಳಿ, ಉಪಾಧ್ಯಕ್ಷರಾಗಿ ಹುಲಿಗೆವ್ವ ಪೂಜಾರ, ನಿಂಗಪ್ಪ ಬಡಿಗೇರ, ಕಾರ್ಯದರ್ಶಿಯಾಗಿ ಫಕೀರಪ್ಪ ಪೂಜಾರ, ಶಾಂತಾ ಪೂಜಾರ, ದೊಡ್ಡ ಗಾಳೆಪ್ಪ ಶಿವಪೂರ, ಖಜಾಂಚಿಯಾಗಿ ಬಸಮ್ಮ (ಮಳಸಿದ್ದಪ್ಪ) ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿವರಾಯ (ಸಣ್ಣ ಸಾರೆಪ್ಪ) ಸಿದ್ದಪ್ಪ ಪೂಜಾರ, ಗುಡದಪ್ಪ ಪೂಜಾರ, ಹುಲಿಗೆವ್ವ ಬೂದಾಳ, ಮಂಜುನಾಥ ಪೂಜಾರ, ಶಂಕ್ರವ್ವ ಇಟಗಿ, ನೀಲಮ್ಮ ಕರಡಿ, ನಿಂಗಪ್ಪ ಕೊರ್ರಪ್ಪನವರ ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.