ರಾಜವಂಶಸ್ಥರು-ಸ್ಥಳೀಯರ ಸಹಕಾರದಲ್ಲಿ ಆನೆಗೊಂದಿ ಉತ್ಸವ
Team Udayavani, Nov 24, 2019, 1:36 PM IST
ಗಂಗಾವತಿ: ವಿಜಯನಗರ ಸಾಮ್ರಾಜ್ಯದ ಪರಂಪರೆಯಾಗಿರುವ ಆನೆಗೊಂದಿಯಲ್ಲಿ ಎರಡು ವೇದಿಕೆಯಲ್ಲಿ ಜನವರಿ 9 ಮತ್ತು 10ರಂದು ಆನೆಗೊಂದಿ ಉತ್ಸವ ಆಯೋಜನೆ ಮಾಡಲಾಗುತ್ತದೆ. ರಾಜವಂಶಸ್ಥರು ಹಾಗೂ ಸ್ಥಳೀಯ ಜನರ ಸಹಕಾರದಲ್ಲಿ ಸಿದ್ಧತಾ ಕಾರ್ಯ ಮಾಡಲಾಗುತ್ತದೆ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಅವರು ಆನೆಗೊಂದಿಯಲ್ಲಿ ಉತ್ಸವ ಸಂಬಂಧಜಿಲ್ಲಾ ಧಿಕಾರಿ ಪಿ. ಸುನೀಲಕುಮಾರ ಅವರ ಜತೆ ವೇದಿಕೆ ಸ್ಥಳ ಪರಿಶೀಲಿಸಿ ಮಾತನಾಡಿದರು. ಉತ್ಸವಕ್ಕಾಗಿಆನೆಗೊಂದಿಯಲ್ಲಿ ಎರಡು ವೇದಿಕೆ ನಿರ್ಮಿಸಲಾಗುತ್ತದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಉತ್ಸವ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸೇರಿ ಪ್ರಮುಖ ಸಚಿವರು ಆಗಮಿಸಲಿದ್ದಾರೆ. ಸ್ಥಳೀಯ ಹಾಗೂ ರಾಜ್ಯ, ರಾಷ್ಟ್ರಮಟ್ಟದ ಕಲಾವಿದರನ್ನು ಆಹ್ವಾನಿಸಲಾಗುತ್ತದೆ.
ಎರಡು ದಿನಗಳ ಕಾಲ ಉತ್ಸವ ವೀಕ್ಷಣೆಗೆ ಆಗಮಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು. ಎಸ್‌ಪಿ ಜಿ. ಸಂಗೀತಾ, ಅಪರ ಜಿಲ್ಲಾಧಿ ಕಾರಿ ಆರ್.ಪಿ. ಮಾರುತಿ, ಸಹಾಯಕ ಆಯುಕ್ತೆ ಸಿ.ಡಿ. ಗೀತಾ, ಗ್ರಾಪಂ ಅಧ್ಯಕ್ಷೆ ಅಂಜನಾದೇವಿ, ತಹಶೀಲ್ದಾರ್ ಎಲ್.ಡಿ. ಚಂದ್ರಕಾಂತ, ಡಿವೈಎಸ್‌ಪಿ ಡಾ| ಚಂದ್ರಶೇಖರ, ಸಿಪಿಐ ಸುರೇಶ ತಳವಾರ, ಪಿಎಸ್‌ಐ ಜೆ. ದೊಡ್ಡಪ್ಪ, ಪಿಡಿಒ ಕೃಷ್ಣಪ್ಪ, ಬಸವರಾಜ ಗೌಡರ್ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.