ಅಂಜನಾದ್ರಿಯಲ್ಲಿ ಇತಿಹಾಸ ತಿರುಚಿದ ನಾಮಫಲಕ ಸರಿಪಡಿಸದ ಹಂಪಿ ಅಭಿವೃದ್ಧಿ ಪ್ರಾಧಿಕಾರ !

ಇನ್ನಾದರೂ ಎಚ್ಚೆತ್ತುಕೊಳ್ಳಲಿದೆಯೇ ಹಂಪಿ ಅಭಿವೃದ್ಧಿ ಪ್ರಾಧಿಕಾರ?

Team Udayavani, Oct 12, 2021, 2:20 PM IST

ಇನ್ನಾದರೂ ಎಚ್ಚೆತ್ತುಕೊಳ್ಳಲಿದೆಯೇ ಹಂಪಿ ಅಭಿವೃದ್ಧಿ ಪ್ರಾಧಿಕಾರ?

ಗಂಗಾವತಿ :ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಸ್ಥಳ ಮಹಿಮೆ ಮತ್ತು ಆಂಜನೇಯನ ಜನ್ಮ ಸ್ಥಳದ ಕುರಿತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ನಾಮಫಲಕಗಳನ್ನು ಅಳವಡಿಸಲಾಗಿದೆ .

ತಿರುಪತಿ ತಿರುಮಲ ದೇವಸ್ಥಾನ ಸಮಿತಿಯವರು ಅಂಜನಾದ್ರಿಯ ಜನ್ಮಸ್ಥಳ  ತಿರುಮಲ ಎಂದು ಪ್ರಸ್ತಾಪಿಸುವ ಸಂದರ್ಭದಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯದ ಮಧ್ಯೆ ಕಿಷ್ಕಿಂದಾ ಅಂಜನಾದ್ರಿ ಯಲ್ಲಿ ಅಳವಡಿಸಿರುವ ಮಾಹಿತಿ ನಾಮಫಲಕಗಳು ತಪ್ಪಿನಿಂದ ಕೂಡಿವೆ .

ಅಂಜನಾದ್ರಿ ಹನುಮಂತನ ಜನ್ಮಸ್ಥಳ ಎಂದು ಸಮರ್ಥಿಸುವ ದಾಖಲೆಗಳಿದ್ದರೂ ಹವಾಮಾ ತಪ್ಪು ಮಾಹಿತಿ ನೀಡುವ ಮೂಲಕ ಅಂಜನಾದ್ರಿ ಬಗ್ಗೆ ಗೊಂದಲದ ಮಾಹಿತಿಯನ್ನು ನಾಮಫಲಕಗಳಲ್ಲಿ ಅಳವಡಿಸಿ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ .

ಈ ನಾಮಫಲಕದಲ್ಲಿ ಆಂಜನೇಯನ ಜನ್ಮಸ್ಥಳ ಮತ್ತು ಕಿಷ್ಕಿಂದಾ ಹಾಗೂ ಬಾಲ ಆಂಜನೇಯ ಲೀಲೆಯ ಸ್ಥಳಗಳು ಎಂಬ ಇತ್ಯಾದಿ ವಿವರಗಳನ್ನು ಪ್ರಸ್ತುತಪಡಿಸಲಾಗಿದೆ .ಆಂಜನೇಯ ಮತ್ತು ಶ್ರೀರಾಮ ಲಕ್ಷ್ಮಣರ ಸಂದರ್ಶನ ಮಾತಂಗ ಪರ್ವತದಲ್ಲಿ ಆಗಿದೆಯೆಂದು .ಕಿಷ್ಕಿಂದಾ ಅಂಜನಾದ್ರಿಯನ್ನು ಬಾಲಾಂಜನೇಯ ನ ಆಟವಾಡಿದ ಸ್ಥಳವೆಂದು ನಮೂದು ಮಾಡಲಾಗಿದೆ .

ಇತಿಹಾಸ ತಜ್ಞರ ಪ್ರಕಾರ ಆಂಜನೇಯ ಶ್ರೀರಾಮ ಲಕ್ಷ್ಮಣರ ಸಂದರ್ಶನ ಋಷ್ಯಮೂಖ ಪರ್ವತದ ಬಳಿ ಆಗಿದೆ. ಅಂಜನಾದ್ರಿ ಪರ್ವತವು ಆಂಜನೇಯನ ಜನ್ಮಸ್ಥಳ ಎಂದು ಉಲ್ಲೇಖಿಸಲಾಗಿದೆ .ಕುವೆಂಪು ಬರೆದ ವಾಲ್ಮೀಕಿ ರಾಮಾಯಣ ಸೇರಿದಂತೆ ವಿವಿಧ ಗ್ರಂಥಗಳಲ್ಲಿ ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ವಾನರ ಸಾಮ್ರಾಜ್ಯ ಕಿಷ್ಕಿಂದ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಲೆಯಲ್ಲಿ ವಾನರರು ಖ್ಯಾತರಾಗಿದ್ದರೂ ಆದ್ದರಿಂದಲೇ ಶ್ರೀರಾಮಚಂದ್ರನಿಗೆ ಶ್ರೀರಾಮ ಸೇತುವೆ ಕಟ್ಟುವಲ್ಲಿ ವಾನರರು ಸಹಕರಿಸಿದ್ದರು .ಇಂತಹ ಇತಿಹಾಸವನ್ನು ಹೊಂದಿರುವ   ಪ್ರದೇಶ ಮತ್ತು ಅಂಜನಾದ್ರಿ ಬೆಟ್ಟದ ಬಗ್ಗೆ ಹವಾಮಾ ಹಾಕಿರುವ ನಾಮಫಲಕಗಳಲ್ಲಿ ತಪ್ಪು ಮಾಹಿತಿಯನ್ನು ನೀಡಲಾಗಿದೆ .

ಇದನ್ನೂ ಓದಿ:ಸಿಎಂ ಬೊಮ್ಮಾಯಿಗೆ ನಾಯಕತ್ವ ಸತ್ವಪರೀಕ್ಷೆ   

ಈಗಾಗಲೇ ಉದಯವಾಣಿ ವೆಬ್ ನ್ಯೂಸ್ ಮತ್ತು  ಉದಯವಾಣಿ ಪತ್ರಿಕೆಯಲ್ಲಿ ಇತಿಹಾಸ ತಿರುಚಿ ಅಂಜನಾದ್ರಿ ಬಳಿ ನಾಮಫಲಕ ಹಾಕಲಾಗಿದೆ ಎಂದು ವಿವರವಾಗಿ ವರದಿ ಪ್ರಕಟಗೊಂಡಿತ್ತು . ಆದರೂ ಎಚ್ಚೆತ್ತುಕೊಳ್ಳದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಾಮಫಲಕ ಬರೆಯುವ ಏಜೆನ್ಸಿಯವರಿಗೆ ನೋಟಿಸ್ ನೀಡಿ ಕೈತೊಳೆದುಕೊಂಡಿದ್ದಾರೆ .ನಾಮಫಲಕಗಳ ಬದಲಾವಣೆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಹವಾಮಾನ ಅಧಿಕಾರಿಗಳು ಆನೆಗೊಂದಿ ಭಾಗವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಜನರ ಆರೋಪಕ್ಕೆ ಪುಷ್ಟಿ ನೀಡಿದಂತಾಗಿದೆ .

ಹೋರಾಟದ ಎಚ್ಚರಿಕೆ :ನಗರದ ಆನೆಗೊಂದಿ ಭಾಗದಲ್ಲಿ ಕಿಷ್ಕಿಂದಾ ಪಂಪಾಸರೋವರ ಋಷ್ಯ ಮುಖ ಪರ್ವತ ಸೇರಿದಂತೆ ಐತಿಹಾಸಿಕ ಸ್ಮಾರಕಗಳು ಇದ್ದರೂ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯದ ಫಲವಾಗಿ ಇತಿಹಾಸವನ್ನ ತಿರುಚಿದ ಮಾಹಿತಿಯುಳ್ಳ ನಾಮಫಲಕಗಳನ್ನು ಅಳವಡಿಸಲಾಗಿದೆ .ಇದನ್ನು ತೆರವುಗೊಳಿಸಿ  ಸ್ಥಳೀಯ ಇತಿಹಾಸಕಾರರು ಮತ್ತು  ವಿದ್ವಾಂಸರ ಬಳಿ ಚರ್ಚಿಸಿ ನಾಮಫಲಕದ  ಮಾಹಿತಿ ಬರೆಸುವಂತೆ ಉದಯವಾಣಿ  ವೆಬ್ ನ್ಯೂಸ್ ಉದಯವಾಣಿ  ಪತ್ರಿಕೆಯಲ್ಲಿ ವಿಸ್ತೃತ ವರದಿ ಪ್ರಕಟವಾಗಿದ್ದರೂ ಎಚ್ಚೆತ್ತುಕೊಳ್ಳದ ಹವಾಮಾ ಅಧಿಕಾರಿಗಳು ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಕೈತೊಳೆದುಕೊಂಡಿದ್ದಾರೆ .

ಕೂಡಲೇ ನಾಮಫಲಕಗಳನ್ನು  ಬದಲಾವಣೆ ಮಾಡದಿದ್ದರೆ ಈ ಅವಮಾನದ ವಿರುದ್ಧ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಸ್ಥಳೀಯ ಅಭಿವೃದ್ಧಿ ಹೋರಾಟ ಮತ್ತು ದಲಿತ ಸಂಘಟನೆಗಳ ಮುಖಂಡರಾದ ನಾಗೇಶ್ ಕೋಡಿ  ಹವಾಮಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ .

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.