ಕೊಪ್ಪಳದಲ್ಲಿ ಮತ್ತೊಂದು ಪಾಸಿಟಿವ್? ಕುಷ್ಟಗಿಯ ಕೇಸೂರು ಗ್ರಾಮ ಸೀಲ್ ಡೌನ್ ಸಾಧ್ಯತೆ
Team Udayavani, May 26, 2020, 11:27 AM IST
ಕೊಪ್ಪಳ: ಕೊಪ್ಪಳದಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಕೇಸ್ ದೃಢಪಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ವ್ಯಕ್ತಿಯು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ವಾಸವಾಗಿದ್ದು ಶುಕ್ರವಾರ ಗ್ರಾಮಕ್ಕೆ ಬಂದಿದ್ದಾನೆ. ಈತನಿಗೆ ಮೊದಲು ಆಸ್ಪತ್ರಗೆ ದಾಖಲು ಮಾಡಲಾಗಿತ್ತು. ಆತನ ಗಂಟಲು ದ್ರವ ಪಡೆದು ಲ್ಯಾಬ್ ಕಳಿಸಿದ್ದು ಸೋಂಕು ಇರುವುದು ದೃಡಪಟ್ಟಿದೆ ಎನ್ನಲಾಗಿದೆ.
ಈ ಬಗ್ಗೆ ಜಿಲ್ಲಾಡಳಿತ ಇನ್ನೂ ಘೋಷಣೆ ಮಾಡಿಲ್ಲ. ಮಧ್ಯಾಹ್ನದ ಬುಲಟಿನ್ ಗೆ ಘೋಷಣೆ ಮಾಡುವ ಸಾಧ್ಯತೆಯಿದೆ. ಇನ್ನೂ ಕೇಸೂರು ಗ್ರಾಮವನ್ನು ಸೀಲ್ ಡೌನ್ ಮಾಡುವ ಸಾಧ್ಯತೆಯಿದ್ದು ಎಲ್ಲ ಸಿದ್ದತೆ ಮಾಡಿಕೊಳ್ಳುತ್ತಿದೆ.
ಆತನ ಕುಟುಂಬಸ್ಥರು ಸೇರಿದಂತೆ ಆ ವ್ಯಕ್ತಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹಾಗೂ ಸೆಕೆಂಡರಿ ಕಾಂಟೆಕ್ಟ್ ಇರುವ ಜನರ ಶೋಧ ಕಾರ್ಯ ನಡೆಸಲಾಗುತ್ತಿರುವ ಮಾಹಿತಿ ತಿಳಿದು ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಮೂರು ಕೋವಿಡ್-19 ಪ್ರಕರಣಗಳಿವೆ. ಇದೊಂದು ಸೇರಿದರೆ ಕೊಪ್ಪಳ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 4ಕ್ಕೆ ಏರಿಕೆಯಾದಂತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.