ಮಡಿವಂತಿಕೆಗೆ ಮತ್ತೊಂದು ಹೆಸರೇ ಮಡಿವಾಳ ಸಮಾಜ; ಶಾಸಕ ಬಸವರಾಜ
ಬಿಜೆಪಿ ಸರ್ಕಾರ ಮಡಿವಾಳ ಸಮಾಜವನ್ನು ಎಸ್‌ಸಿಗೆ ಸೇರಿಸಲು ಮೀನಾಮೇಷ ಎಣಿಸುತ್ತಿದೆ
Team Udayavani, Mar 1, 2023, 5:47 PM IST
ಕನಕಗಿರಿ: ಕಾಯಕ, ನಿಷ್ಠೆ, ಪ್ರಾಮಾಣಿಕತೆಯ ಜೊತೆಗೆ ಸಮಾಜದಲ್ಲಿ ಮಡಿವಂತಿಕೆಗೆ ಮತ್ತೊಂದು ಹೆಸರೇ ಮಡಿವಾಳ ಸಮಾಜವಾಗಿದೆ ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.
ಅವರು ಇಲ್ಲಿನ ನವಲಿ ರಸ್ತೆಯಲ್ಲಿ ನಡೆದ ತಾಲೂಕು ಮಟ್ಟದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಡಿವಾಳ ಸಮಾಜದವರು ಆಸೆ-ಆಕಾಂಕ್ಷೆಗಳಿಗೆ ಬಲಿಯಾಗದೆ ನಿಸ್ವಾರ್ಥ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಿದ್ದಾರೆ. ಬೇರೆ ಧರ್ಮಗಳ ಸ್ವಚ್ಚತೆಯ ಮಡಿಯನ್ನು ಕಾಪಾಡಲು ಮಡಿವಾಳ ಸಮಾಜದ ಕುಲ ಕಸುಬು ಅವಶ್ಯಕತೆ ಇದೆ.
ಈ ಕಸಬನ್ನು ನಂಬಿ ಕಡಿಮೆ ಆದಾಯದ ಮೂಲಕ ಜೀವನ ನಡೆಸುತ್ತಿದ್ದಾರೆ. ಮಡಿವಾಳ ಸಮಾಜದ ಆರ್ಥಿಕ ಬಲವರ್ದನೆಯನ್ನು ಬಲಪಡಿಸಲು ಬಿಜೆಪಿ ಸರ್ಕಾರ ಮಡಿವಾಳ ಮಾಚಿದೇವ ನಿಗಮವನ್ನು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಂದು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಶಿಕ್ಷಣ ಪಡೆದು ಸಮಾಜದಲ್ಲಿ ಮುಖ್ಯ ಪಾತ್ರ ವಹಿಸಬೇಕು ಎಂದು ಹೇಳಿದರು.
ಮಡಿವಾಳ ಮಾಚಿದೇವ ಸಂಘದ ಜಿಲ್ಲಾಧ್ಯಕ್ಷ ದುರುಗೇಶ ಮಡಿವಾಳ ಮಾತನಾಡಿ, 15 ವರ್ಷಗಳಿಂದಲೂ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಲ್ಲಿ ಆಡಳಿತ ಪಕ್ಷಗಳು ವಿಫಲವಾಗಿವೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಹಿಂದುಳಿದ ಮಡಿವಾಳ ಸಮಾಜ ಎಸ್‌ಸಿ ಸಮುದಾಯಕ್ಕೆ ಸೇರಲು ಸೂಕ್ತವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ಇರುವ ಬಿಜೆಪಿ ಸರ್ಕಾರ ಮಡಿವಾಳ ಸಮಾಜವನ್ನು ಎಸ್‌ಸಿಗೆ ಸೇರಿಸಲು ಮೀನಾಮೇಷ ಎಣಿಸುತ್ತಿದೆ ಎಂದರು.
ಚಿತ್ರದುರ್ಗದ ಮಡಿವಾಳ ಸಮಾಜದ ಡಾ| ಬಸವ ಮಾಚಿದೇವ ಸ್ವಾಮಿ ಮಾತನಾಡಿ, ಮಡಿವಾಳ ಸಮಾಜವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕೆಂದರೆ ಉತ್ತಮವಾದ ಶಿಕ್ಷಣ ಪಡೆದುಕೊಂಡು ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಗೈಯಬೇಕು. ಮಡಿವಾಳ ಸಮಾಜ ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ಜನ ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಹಾಗಾಗಿ ಯುವಕರು ದುಶ್ಚಟಗಳಿಂದ ದೂರವಿದ್ದು ಸಾಧನೆ ಮಾಡಬೇಕು ಎಂದರು.
ಉತ್ತರ ಕರ್ನಾಟಕದ ಅಧ್ಯಕ್ಷ ಎಂ.ಕೆ. ಹನುಮಂತಪ್ಪ, ತಾಲೂಕು ಅಧ್ಯಕ್ಷ ನಾಗರಾಜ, ಮುಖಂಡರಾದ ತಿಪ್ಪಣ್ಣ ಮರಕುಂಬಿ, ಹೊನ್ನುರಪ್ಪ ಮಾತನಾಡಿದರು. ರಾಜ್ಯ ದೋಬಿ ಘಾಟ್ ಅಧ್ಯಕ್ಷ ಪಂಪಣ್ಣ, ಪಪಂ ಸದಸ್ಯರಾದ ಶೇಷಪ್ಪ ಪೂಜಾರ, ಹನುಮಂತ ಬಸರಿಗಿಡ, ನೂರಸಾಬ್ ಗಟ್ಟಿಗಾಲ, ರಾಚಪ್ಪ ಬ್ಯಾಳಿ, ಕಂಠಿರಂಗ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ, ಸಮಾಜದರಾದ ಕೊಟ್ರೇಶ ಮಡಿವಾಳ, ತಿಪ್ಪಣ್ಣ ಮಡಿವಾಳ, ಶರಣ ಮಡಿವಾಳ, ರಂಗಪ್ಪ ಮಡಿವಾಳ, ಆನಂದ ಮಡಿವಾಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.