ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಮನವಿ
Team Udayavani, Nov 6, 2019, 2:39 PM IST
ಕೊಪ್ಪಳ: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಇತರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ. ಚಂದ್ರಶೇಖರ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕೊಪ್ಪಳದಲ್ಲಿ ಮನವಿ ಸಲ್ಲಿಸಿದರು.
ನಗರದ ಹೊರವಲಯದಲ್ಲಿರುವ ಬೆಟ್ಟಗಳ ಸಾಲುಗಳ ಮಧ್ಯದಲ್ಲಿ ಪುರಾಣ ಪ್ರಸಿದ್ಧ ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿದ ಮಳೆಮಲ್ಲೇಶ್ವರ ದೇವಸ್ಥಾನವಿದೆ. ಇದಕ್ಕೆ ಇಂದ್ರಕಿಲ ಪರ್ವತವೆಂದು ಉಲ್ಲೇಖವಿದೆ. ಪರ್ವತದಲ್ಲಿ ಈಶ್ವರ ತಪಸ್ಸುಗೈದು ಅರ್ಜುನನಿಗೆ ಪಾಶುಪಶಾಸ್ತ್ರ ನೀಡಿದ ಸ್ಥಳವೆಂಬ ಪ್ರತೀತಿಯಿದೆ. ದೇವಸ್ಥಾನ ಗರ್ಭಗುಡಿಯ ಸ್ವಾಮಿಯ ಪೀಠದಿಂದ ಹರಿದುಬರುವ ಪವಿತ್ರ ತೀರ್ಥದ ಸಂಗ್ರಹಣೆಗೆ ಪುಷ್ಕರಣಿ ಅವಶ್ಯಕತೆ ಇರುವುದರಿಂದ ಅನುದಾನ ನೀಡಿ ನಿರ್ಮಾಣಕ್ಕೆ ಸಹಕರಿಸಬೇಕು. ಕೋಟೆ ಹಾಗೂ ಹುಲಿಕೆರಿ ಕುರಿತಂತೆ ಮಾಹಿತಿ ತಿಳಿಸಿದರು.
ಮನವಿ ಸ್ವೀಕರಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಬಿಜೆಪಿ ಮುಖಂಡರಾದ ಅಪ್ಪಣ್ಣ ಪದಕಿ, ಸುರೇಶ ದೇಸಾಯಿ, ಹಾಲೇಶ ಕಂದಾರಿ, ದೇವರಾಜ ಹಾಲಸಮುದ್ರ, ರಾಘವೇಂದ್ರ, ರಾಜಕುಮಾರ ಹಾಗೂ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.