ಅರಸು ಜಯಂತಿ: ಪೂರ್ವಭಾವಿ ಸಭೆ
ಗವಿಮಠದಿಂದ ಭಾವಚಿತ್ರ ಮೆರವಣಿಗೆ
Team Udayavani, Aug 14, 2019, 5:55 PM IST
ಕೊಪ್ಪಳ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಡಿ. ದೇವರಾಜ ಅರಸು ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಸೈಯದಾ ಅಯಿಷಾ ಮಾತನಾಡಿದರು.
ಕೊಪ್ಪಳ: ಜಿಲ್ಲಾಡಳಿತದಿಂದ ಡಿ. ದೇವರಾಜ ಅರಸು ಅವರ 104ನೇ ಜಯಂತಿಯನ್ನು ಆ.20ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಎಡಿಸಿ ಸೈಯದಾ ಅಯಿಷಾ ಹೇಳಿದರು.
ಡಿ. ದೇವರಾಜ ಅರಸು ಅವರ ಜಯಂತಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ದಿ| ಡಿ. ದೇವರಾಜ ಅರಸುರವರ ಜಯಂತಿ ದಿನದಂದು ಬೆಳಗ್ಗೆ 9ಗಂಟೆಗೆ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ನಗರದ ಗವಿಮಠದಿಂದ ಪ್ರಾರಂಭಗೊಂಡು ಸಾಹಿತ್ಯ ಭವನದ ವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಶಿಷ್ಟಾಚಾರದಂತೆ ಗಣ್ಯರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಮೆರವಣಿಗೆಯಲ್ಲಿ ಎರಡು ವಿಶೇಷ ಕಲಾ ತಂಡಗಳನ್ನು ಆಯ್ಕೆ ಮಾಡಿ ಮೆರವಣಿಗೆಯನ್ನು ಆಕರ್ಷಕಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಡಿ. ದೇವರಾಜ ಅರಸು ಜನ್ಮದಿನಾಚರಣೆಯಂದು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದರು.
ಕಾರ್ಯಕ್ರಮದಲ್ಲಿ ದಿ| ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾರ್ಥಿ ನಿಲಯಗಳ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈಶಪ್ಪ ಆಶಾಪುರ ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ, ನಗರ ಪೊಲೀಸ್ ಠಾಣೆಯ ಪಿಐ ಶಿವಾನಂದ ವಾಲಿಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.