ನಕಲಿ ದಾಖಲೆ ಸಲ್ಲಿಸಿ ಸೇನೆ ಸೇರಲು ಮುಂದಾಗಿದ್ದ ಯುವಕ ಅರೆಸ್ಟ್
Team Udayavani, Nov 16, 2019, 7:42 PM IST
ಕೊಪ್ಪಳ: ಕೊಪ್ಪಳದಲ್ಲಿ ನಡೆದ ಭೂ ಸೇನಾ ಭರ್ತಿ ರಾಲಿಯಲ್ಲಿ ನಕಲಿ ದಾಖಲೆ ಸಲ್ಲಿಸಿ ಸೇನೆ ಸೇರಲು ಮುಂದಾದ ರಾಜಸ್ಥಾನದ ಯುವಕನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿ ಠಾಣೆಗೆ ಕರೆ ತಂದಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಬಂಧಿತ ಯುವಕ ರಾಜೇಂದ್ರ ಸಿಂಗ್ ರಾಜಸ್ಥಾನದ ಯುವಕ ತಿಳಿದು ಬಂದಿದೆ.
ಕೊಪ್ಪಳದಲ್ಲಿ ನ.5 ರಿಂದ 16ರ ವರೆಗೂ ಭೂ ಸೇನಾ ನೇಮಕಾತಿ ರಾಲಿ ನಡೆದಿತ್ತು. 45 ಸಾವಿರ ಅಭ್ಯರ್ಥಿಗಳು ಹೆಸರು ನೊಂದಾಯಿಸಿ ಕೊಂಡಿದ್ದರು. ಶನಿವಾರ ದಾಖಲೆ ಪರಿಶೀಲನೆ ವೇಳೆ ರಾಜಸ್ಥಾನದ ರಾಜೇಂದ್ರ ಸಿಂಗ್ ಎನ್ನುವ ಯುವಕ ನಕಲಿ ದಾಖಲೆ ಸಲ್ಲಿಸಿದ ಬಗ್ಗೆ ಸೇನಾ ಕರ್ನಲ್ ದೂರಿನ ಅನ್ವಯ ಯುವಕನನ್ನು ಕೊಪ್ಪಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.
ಈತನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಸ್ಥಳೀಯ ವಿಳಾಸ ನೀಡಿ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ. ಸೇನಾ ತಂಡವು ದಾಖಲೆ ಪರಿಶೀಲನೆ ವೇಳೆ ಇದು ಬೆಳಕಿಗೆ ಬಂದಿದೆ. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.