ಜಮೀನು ಮಾಲೀಕರಿಗೆ ನಿಯಮದಂತೆ ಪರಿಹಾರ ನೀಡಿ

ಕಾಮಗಾರಿ ನಡೆಸುವ ಮುನ್ನ ರೈತರಿಗೆ ತಿಳಿಸಿ

Team Udayavani, Jul 23, 2019, 3:54 PM IST

kopala-tdy-3

ಕೊಪ್ಪಳ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಡಿ ಭೂಸ್ವಾಧಿಧೀನ ಪ್ರಕ್ರಿಯೆ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ಕುಮಾರ ಮಾತನಾಡಿದರು.

ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ- ಬೆಟಗೇರಿ ಏತನೀರಾವರಿ ಯೋಜನೆಯಡಿ ಭೂಸ್ವಾಧೀನಕ್ಕೆ ಒಳಗಾದ ವಿವಿಧ ಗ್ರಾಮಗಳ ಜಮೀನಿನ ಮಾಲೀಕರಿಗೆ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಾಗೂ ರೈತರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಡಿ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಒಳಪಡುವ ಜಮೀನಿನ ರೈತರ ಆಕ್ಷೇಪಣೆ ಹಾಗೂ ನಿರ್ಮಾಣ ಕಾಮಗಾರಿಗೆ ಇರುವ ತೊಂದರೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಬೇಕು. ಸರ್ವಿಸ್‌ ರಸ್ತೆ ನಿರ್ಮಾಣ ಕುರಿತಂತೆ ಇರುವ ರೈತರ ಆಕ್ಷೇಪಣೆಗಳನ್ನು ಮೊದಲು ಆಲಿಸಬೇಕು. ರಸ್ತೆ ನಿರ್ಮಾಣದಿಂದ ಆ ಪ್ರದೇಶ ವ್ಯಾಪ್ತಿಯ ರೈತರಿಗೆ ಇರುವ ಅನುಕೂಲತೆಗಳ ಕುರಿತು ರೈತರಿಗೆ ತಿಳಿವಳಿಕೆ ನೀಡಿ ಅವರ ಮನವೊಲಿಸಲು ಪ್ರಯತ್ನಿಸಬೇಕು ಎಂದರು.

ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ರೈತರಿಗೆ ನೋಟಿಸ್‌ ನೀಡುವಾಗ ಕಂದಾಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಂಡು ನಿರ್ಧಿಷ್ಟ ಜಮೀನಿನ ಮಾಲೀಕರಿಗೆ ಮಾತ್ರ ನೋಟಿಸ್‌ ನೀಡಬೇಕು. ಈ ಕುರಿತು ರೈತರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರವಹಿಸಿ. ಕಾಮಗಾರಿಗಳಿಗೆ ನಿಗದಿಪಡಿಸಿದ ಜಮೀನಿನ ಪ್ರದೇಶವನ್ನು ಹೊರತುಪಡಿಸಿ ಇನ್ನುಳಿದ ಜಮೀನನ್ನು ಕಾಮಗಾರಿಗೆ ಸಂಬಂಧಿಸಿದ ಯಾವುದೇ ಸಾಮಾಗ್ರಿಗಳನ್ನು ಸಂಗ್ರಹಿಸಲು ಅಥವಾ ಕಾಮಗಾರಿ ವಾಹನಗಳ ಬಳಕೆಯಾಗದಂತೆ ನೋಡಿಕೊಳ್ಳಿ. ಇದರಿಂದ ರೈತರು ಈಗಾಗಲೇ ಬಿತ್ತನೆ ಮಾಡಿದ ಪ್ರದೇಶಕ್ಕೆ ಉಂಟಾಗುವ ಹಾನಿ ತಡೆಯಬಹುದು ಎಂದರು.

ಜೆಎಂಸಿ (ಜಂಟಿ ಮಾಪನ ವರದಿ) ಮಾಡಲು ಕೆಲ ರೈತರು ಅಡ್ಡಿ ಪಡಿಸುತ್ತಿರುವುದರಿಂದ ಅವರಿಗೆ ಬರಬೇಕಾದ ಪರಿಹಾರ ಮೊತ್ತ ನಿರ್ಧಿಷ್ಟಪಡಿಸುವಲ್ಲಿ ಹಾಗೂ ವಿತರಿಸುವಲ್ಲಿ ವಿಳಂಬವಾಗುತ್ತಿದೆ. ಆದ್ದರಿಂದ ರೈತರು ನಿಯಮಾನುಸಾರ ಸರ್ವೇ ಮಾಡಲು ಅನುವು ಮಾಡಿಕೊಡಲು ಅಧಿಕಾರಿಗಳೊಂದಿಗೆ ಸಹಕರಿಸಿದರೆ, ಸರ್ವೇ ಕಾರ್ಯ ತ್ವರಿತವಾಗಿ ನಡೆದು ಕಾಮಗಾರಿ ಪೂರ್ಣಗೊಳ್ಳಲು ಅನುಕೂಲವಾಗಲಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ರೈತರಿಗೆ ಮನವರಿಕೆ ಮಾಡಿದರು.

ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ವ್ಯಾಪ್ತಿಯಲ್ಲಿರುವ ಗ್ರಾಮಗಳ ರೈತರು, ತಮಗೆ ಯಾವುದೇ ಮಾಹಿತಿ ನೀಡದೇ ಗುತ್ತಿಗೆದಾರರು ನಮ್ಮ ಜಮೀನಿನಲ್ಲಿ ಕಾಮಗಾರಿ ಆರಂಭಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಅವರು, ಕಾಮಗಾರಿ ನಡೆಯುವ ಜಮೀನಿನ ಮಾಲೀಕರಿಗೆ ಸೂಕ್ತ ಮಾಹಿತಿ ನೀಡಿ ನಂತರ ಕಾಮಗಾರಿಗಳನ್ನು ಕೈಗೊಳ್ಳುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಪ್ರೊಬೇಷನರಿ ಐಎಎಸ್‌ ಅಧಿಕಾರಿ ನೇಹಾ ಜೈನ್‌, ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ಕೊಪ್ಪಳ ತಹಶೀಲ್ದಾರ್‌ ಜೆ.ಬಿ. ಮಜಗಿ, ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜನಿಯರ್‌ ನಾಗಭೂಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.