ಜನರ ಸೇವೆ, ದೇವರ ಸೇವೆಯಿದ್ದಂತೆ: ಅಣ್ಣಾ ಹಜಾರೆ
Team Udayavani, Jan 6, 2018, 3:56 PM IST
ಕೊಪ್ಪಳ: ಜನರ ಸೇವೆಯು ದೇವರ ಸೇವೆಯಿದ್ದಂತೆ. ಇಂದಿನ ಯುವ ಜನಾಂಗದಲ್ಲಿ ಜನರ ಸೇವೆ ಮಾಡಬೇಕು ಎನ್ನುವ ಭಾವನೆ ಮೂಡಬೇಕು. ನನ್ನ ಜನ, ನನ್ನ ದೇಶ ಎನ್ನುವ ಮನೋಭಾವನೆ ಎಲ್ಲರಲ್ಲೂ ಮೂಡಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಯುವ ಜನಾಂಗಕ್ಕೆ ಸಲಹೆ ನೀಡಿದರು.
ನಗರದ ಕೈಲಾಸ ಮಂಟಪದಲ್ಲಿ ಬುಧವಾರ ಸಂಜೆ ಅನುಭಾವಿಗಳ ಅಮೃತ ಚಿಂತನ ಗೋಷ್ಠಿಯಲ್ಲಿ ಭಕ್ತ ಸಮೂಹವನ್ನುದ್ದೇಶಿಸಿ ಅವರು ಮಾತನಾಡಿದರು. ರೈತರ ಪ್ರಮುಖ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಇದೇ ಮಾ.23ರಿಂದ ದೆಹಲಿಯ ರಾಮಲೀಲಾ ಮಂದಿರದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ.
ದೇಶದ ರೈತರು ತೀವ್ರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ರೈತರು ದೇಶದ ಬೆನ್ನೆಲುಬು ಎಂದು ಹೇಳಿಕೊಳ್ಳುವ ಈ ದೇಶದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆಯಿಲ್ಲದೆ ನಿತ್ಯ ಸಾಯುತ್ತಿದ್ದಾರೆ. ದೇಶದ ಎಲ್ಲ ರೈತರು ಸಾಲದಿಂದ ಬಳಲುತ್ತಿದ್ದಾರೆ.
ನಮ್ಮದು ಕೃಷಿ ಪ್ರಧಾನವಾದ ದೇಶವಾದರೂ ಸಹಿತ ರೈತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ನಾವು ಸ್ಪಂದಿಸಬೇಕಿದೆ. ರೈತರ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟು ಹೋರಾಟ ರೂಪಿಸಲಾಗುತ್ತಿದೆ ಎಂದರು.
ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಹೋರಾಟದ ಕುರಿತು ಚರ್ಚಿಸಲಾಗಿದೆ. ನಮ್ಮ ಹೋರಾಟಕ್ಕೆ ಕರ್ನಾಟಕದಲ್ಲಿ ಸಂಪೂರ್ಣ ಬೆಂಬಲವಿದೆ.
ಯುವಕರು ತಮ್ಮ ಗ್ರಾಮ, ನಾಡು ಹಾಗೂ ದೇಶಾಭಿಮಾನ ಮೆರೆಯಬೇಕಾಗಿದೆ. ದುಶ್ಚಟಗಳಿಂದ ದೂರವಿರಬೇಕು. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ನಾವೆಲ್ಲ ಹೋರಾಟಕ್ಕಿಳಿಯಬೇಕಿದೆ ಎಂದರು. ಆನಂದ ನಮಗೆ ಎಲ್ಲಿಯೂ ಸಿಗುವುದಿಲ್ಲ. ಆಂತರಿಕವಾಗಿಯೇ ನಮಗೆ ಆನಂದ ಸಿಗುತ್ತದೆ.
ಆದರೆ ಅದನ್ನು ನಾವು ಕಂಡುಕೊಳ್ಳಬೇಕಿದೆ. ಜೀವನದಲ್ಲಿ ಪ್ರತಿಯೊಬ್ಬರು ಶುದ್ಧ ಆಚಾರ- ವಿಚಾರದ ಅಂಶಗಳನ್ನು ಮೈಗೂಡಿಸಿಕೊಂಡರೆ ಜಗತ್ತನ್ನೆ ಗೆಲ್ಲಬಹುದು. ಅಲ್ಲದೆ, ಪ್ರತಿವೊಬ್ಬರು ಸ್ವತ್ಛತೆಗೆ ಹೆಚ್ಚಿನ ಆಧ್ಯತೆ ನೀಡುವ ಜೊತೆಗೆ ತಮ್ಮ ಗ್ರಾಮಗಳನ್ನು ಸಾರಾಯಿ ಮುಕ್ತ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.